ಡಿ.14ರಂದು ತುಳು ಅಕಾಡೆಮಿ ವತಿಯಿಂದ ‘ಮಣೇಲ್ ದ ಪೆರ್ಮೆ ರಾಣಿ ಅಬ್ಬಕ್ಕ’ ವಿಚಾರಗೋಷ್ಠಿ… !

ಮಂಗಳೂರು:ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳೂರು ತಾಲೂಕಿನ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿಯ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ರಾಣಿ ಅಬ್ಬಕ್ಕನ ಕುರಿತಾಗಿ ‘ಮಣೇಲ್ ದ ಪರ್ಮೆ ರಾಣಿ ಅಬ್ಬಕ್ಕ’ ಎಂಬ ವಿಚಾರ ಕೂಟವನ್ನು ಸ್ಥಳೀಯ ರಾಣಿ ಅಬ್ಬಕ್ಕ ಚಾವಡಿಯ ಸಹಭಾಗಿತ್ವದಲ್ಲಿ ಡಿ.14ರಂದು ಬೆಳಿಗ್ಗೆ 10.00 ಗಂಟೆಗೆ ಆಯೋಜಿಸಲಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ತಿಳಿಸಿದರು .

ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ರಾಣಿ ಅಬ್ಬಕ್ಕನ ಅರಮನೆ ಇದ್ದಂತಹ ಮಣೇಲ್ ಗ್ರಾಮದಲ್ಲಿ ವಿದೇಶಿ ಪ್ರವಾಸಿ ಪಿಯಾತ್ರೋ ದಲ್ಲಾವೆಲ್ಲೆ ಅಬ್ಬಕ್ಕ ರಾಣಿಯನ್ನು ಭೇಟಿ ಮಾಡಿರುವ ಬಗ್ಗೆ ಆತನ ಪ್ರವಾಸ ಕಥನದಲ್ಲಿ ಉಲ್ಲೇಖಿಸಲ್ಪಟ್ಟಿದೆ. ಈ ಗ್ರಾಮದಲ್ಲಿ ಅಬ್ಬಕ್ಕ ಆರಾಧನೆ ಮಾಡುತ್ತಿದ್ದ ಶ್ರೀ ಅನಂತನಾಥ ಸ್ವಾಮಿ ಬಸದಿ ಇದೆ ಇದೇ ಗ್ರಾಮದಲ್ಲಿ ವಿಚಾರ ಕೂಟವನ್ನು ಆಯೋಜಿಸಲಾಗಿದೆ .ವಿಚಾರಗೋಷ್ಠಿ ಉದ್ಘಾಟನೆಗೆ ಮೊದಲು ಬೆಳಿಗ್ಗೆ 9.30 ಕ್ಕೆ ಶ್ರೀ ಅನಂತ ಸ್ವಾಮಿ ಬಸದಿಯಿಂದ ವಿಚಾರಗೋಷ್ಠಿ ನಡೆಯುವ ಮಳಲಿ ಸರಕಾರಿ ಪ್ರಾಥಮಿಕ ಶಾಲೆಯ ಆವರಣ ತನಕ ಸಾಂಸ್ಕೃತಿಕ ನಡಿಗೆ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪಗೌಡ ಉದ್ಘಾಟಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು ಎಂದರು .

ಬಳಿಕ ಅಬ್ಬಕ್ಕನ ಕುರಿತಾಗಿ ನಡೆಯುವ ಪ್ರಥಮ ಗೋಷ್ಠಿಯಲ್ಲಿ ಬಂಟ್ವಾಳದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕಾರಾಮ ಪೂಜಾರಿ ‘ಅಬ್ಬಕ್ಕ ಚಾರಿತ್ರಿಕ ಅವಲೋಕನ’ ವಿಷಯದ ಬಗ್ಗೆ ಹಾಗೂ ಎರಡನೇ ಗೋಷ್ಠಿಯಲ್ಲಿ ಇತಿಹಾಸ ತಜ್ಞರು ಹಾಗೂ ನಿವೃತ್ತ ಉಪನ್ಯಾಸಕ ಡಾ.ಪುಂಡಿಕಾಯಿ ಗಣಪಯ್ಯ ಭಟ್ ‘ಮಣೇಲಿನಲ್ಲಿ ಪ್ರವಾಸಿ ಕಂಡ ಅಬ್ಬಕ್ಕ’ ವಿಷಯದ ಬಗ್ಗೆ ಉಪನ್ಯಾಸ ನೀಡುವರು ಎಂದರು .ಈ ವಿಚಾರಗೋಷ್ಠಿಯಲ್ಲಿ ಮಂಡಿಸಲ್ಪಡುವ ಚಾರಿತ್ರಿಕ ವಿಷಯಗಳ ಆಶಯದಂತೆ ಮುಂದಿನ ದಿನಗಳಲ್ಲಿ ಅಬ್ಬಕ್ಕರಾಣಿಯ ಚಿತ್ರವನ್ನು ಸ್ಥಳೀಯ ಶಾಲೆಯ ಹಾಗೂ ಕಟ್ಟೆಮಾರು ಮನೆಯ ಆವರಣಗೋಡೆಯಲ್ಲಿ ಜಿಲ್ಲೆಯ ಹಿರಿಯ ಕಲಾವಿದರು ಚಿತ್ರಿಸುವ ಯೋಜನೆಯನ್ನು ಹೊಂದಲಾಗಿದೆ ಎಂದರು .

ಪ್ರತಿಕಾಗೋಷ್ಠಿಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ , ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಬೂಬ ಪೂಜಾರಿ ಮಳಲಿ , ಅಕ್ಷಯ ಆರ್. ಶೆಟ್ಟಿ , ವಿಶ್ರಾಂತ ಪ್ರಾಂಶುಪಾಲರಾದ ಪ್ರೊ. ಅಕ್ಷಯ ಕುಮಾರ್ ಮಳಲಿ , ಮಣೇಲ್ ಗ್ರಾಮಸ್ಥರಾದ ಪುರಂದರ ಕುಲಾಲ್ ಉಪಸ್ಥಿತರಿದ್ದರು .

SHARE
Loading spinner

Leave a Reply

Your email address will not be published. Required fields are marked *

error: Content is protected !!