ಬೆಂಗಳೂರಿನಿಂದ ಮಾದಕ ವಸ್ತು ತಂದು ಮಂಗಳೂರಿನ ಡ್ರಗ್ ಪೆಡ್ಲರ್‌ಗಳಿಗೆ ಪೂರೈಕೆ ಮಾಡುತ್ತಿದ್ದ ಮೂವರ ಬಂಧನ … !

ಮಂಗಳೂರು: ಮಂಗಳೂರು ಸಿಸಿಬಿ ಘಟಕದ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬೆಂಗಳೂರಿನಿಂದ ಮಾದಕ ವಸ್ತು ತಂದು ಮಂಗಳೂರಿನ ಡ್ರಗ್ ಪೆಡ್ಲರ್‌ಗಳಿಗೆ ಪೂರೈಕೆ ಮಾಡುತ್ತಿದ್ದ ತಂಡದ ಮೂವರನ್ನು ಬಂಧಿಸಿದ್ದಾರೆ.


ಮಂಗಳೂರು ಮಲ್ಲೂರಿನ ಅಹಮ್ಮದ್ ಶಾಬೀತ್ ( 35), ಬಂಟ್ವಾಳ ಪರ್ಲಿಯಾದ ಮಹಮ್ಮದ್ ಶಂಶೀರ್ (36) ಮತ್ತು ಸರಪಡಿಯ ನೌಶೀನ(27) ಬಂಧಿತ ಆರೋಪಿಗಳು ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಸಿಸಿಬಿ ಘಟಕದ ಪೊಲೀಸರು ಡಿ.13ರಂದು ಕಾರಿನಲ್ಲಿ ಬರುತ್ತಿದ್ದ ಅಹಮ್ಮದ್ ಶಾಬೀತ್, ಮತ್ತು ಆತನ ತಂಡವನ್ನು ಅರ್ಕುಳ ಬಳಿ ವಶಕ್ಕೆ ಪಡೆದು ದಸ್ತಗಿರಿ ಮಾಡಿ ಅವರ ಬಳಿ ಇದ್ದ ಮಾದಕ ವಸ್ತು ಮತ್ತು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.


ಮಾದಕ ವಸ್ತು ಎಂಡಿಎಂಎ 90 ಗ್ರಾಂ, ಕಾರು ಮತ್ತು ಮೊಬೈಲ್ ಪೋನ್‌ಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಅಹಮ್ಮದ್ ಶಾಬೀತ್ ಎಂಬವನು ಮಂಗಳೂರಿನ ಡ್ರಗ್ ಪೆಡ್ಲರ್‌ಗಳಿಗೆ ಬೆಂಗಳೂರಿನಿಂದ ಮಾದಕ ವಸ್ತು ಎಂಡಿಎಂ ನ್ನು ತಂದು ನಿರಂತರವಾಗಿ ಪೂರೈಕೆ ಮಾಡುತ್ತಿದ್ದ, ಅಲ್ಲದೇ ಈ ತಂಡದಲ್ಲಿ ಯಾರಿಗೂ ಅನುಮಾನ ಬಾರದಂತೆ ಮಹಿಳೆಯಾದ ನೌಶಿನ ಎಂಬಾಕೆಯ ನೆರವಿನಲ್ಲಿ ಎಂಡಿಎಂಎಯನ್ನು ಸಾಗಾಟ ಮಾಡುತ್ತಿರುವ ಮಾಹಿತಿಯನ್ನು ಕಲೆ ಹಾಕಿದ ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ತಂಡದವರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀ‌ರ್ ಕುಮಾರ್ ರೆಡ್ಡಿ ಸಿಎಚ್ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!