ಮಂಗಳೂರು: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಡಿಸೆಂಬರ್ 19, 20 ಮತ್ತು 21 ರಂದು ಸುರತ್ಕಲ್ ಬಂಟರ ಭವನದ ಆವರಣದಲ್ಲಿ “ಪರ್ವ 2025” ಸೀರೆ ಮೇಳ, ಲೈಫ್ ಸ್ಟೈಲ್ ಮತ್ತು ಫುಡ್ ಫೆಸ್ಟಿವೆಲ್ ನಡೆಯಲಿದೆ ಎಂದು ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಅಧ್ಯಕ್ಷರಾದ ಸರೋಜಾ ಟಿ ಶೆಟ್ಟಿ ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು .
ಈ ಬಗ್ಗೆ ಸಂಘದ ಕಾರ್ಯದರ್ಶಿಗಳಾದ ರಾಜೇಶ್ವರಿ ಡಿ ಶೆಟ್ಟಿ ಹೆಚ್ಚಿನ ಮಾಹಿತಿಯನ್ನು ನೀಡಿ, ಡಿಸೆಂಬರ್ 20 ರಂದು ಶನಿವಾರ ಸಂಜೆ 7 ಕ್ಕೆ ಪೆರ್ಮದ ಕಲಾವಿದೆರ್ ಚೇಳಾರ್ ತಂಡದಿಂದ “ಎನ್ನಿಲೆಕ್ಕ ಇಜ್ಜೆರ್” ತುಳು ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ.ಡಿಸೆಂಬರ್ 21 ರಂದು ಸಂಜೆ 6 ಗಂಟೆಗೆ ವಿಶ್ವಾಸ್ ಮ್ಯೂಸಿಕಲ್ ಮಂಗಳೂರು ತಂಡದಿಂದ “ಸಂಗೀತ ರಸ ಮಂಜರಿ”, ಬಳಿಕ 7 ಗಂಟೆಗೆ ಉಮೇಶ್ ಮಿಜಾರ್ ಸಾರಥ್ಯದ ನಮ್ಮ ಕಲಾವಿದೆರ್ ಬೆದ್ರ ತಂಡದಿಂದ ಈ ವರ್ಷದ ಸೂಪರ್ ಹಿಟ್ ಹಾಸ್ಯ ನಾಟಕ “ವೈರಲ್ ವೈಶಾಲಿ” ಪ್ರದರ್ಶನ ಗೊಳ್ಳಲಿದೆ ಎಂದರು .
ಡಿ. 20 ಮತ್ತು 21 ರಂದು ಸಂಜೆ ನಾಲ್ಕು ಗಂಟೆಯಿಂದ ರಾತ್ರಿ ಹತ್ತರ ತನಕ ಬಗೆಬಗೆಯ ತಿಂಡಿತಿನಿಸುಗಳ ಫುಡ್ ಫೆಸ್ಟಿವಲ್ ನಡೆಯಲಿದೆ ಎಂದರು .ಮೂರು ದಿನಗಳ ಕಾಲ ಸುರತ್ಕಲ್ ಬಂಟರ ಭವನದಲ್ಲಿ ವಿವಿಧ ಮಳಿಗೆಗಳ ಸೀರೆ ಮಾರಾಟ ಮೇಳವೂ ನಡೆಯಲಿದೆ. ಈ ಸೀರೆ ಮೇಳದಲ್ಲಿ
ನವನವೀನ ಮಾದರಿಯ ಕಾಂಚಿಪುರಂ, ಬನಾರಸ್, ರೇಷ್ಮೆ, ಬಂಗಾಲಿ ಕಾಟನ್ ಹಾಗೂ ವಿವಿಧ ಮಾದರಿಯ ಸೀರೆಗಳು ಸಲ್ವಾರ್ ಸೂಟ್, ಕುರ್ತಾಗಳು, ಖಾದಿ ಭಂಡಾರ, ಕಸೂತಿ, ಹಸ್ತಕಲೆ ಬ್ಯಾಗುಗಳು, ಒಂದು ಗ್ರಾಂ ಚಿನ್ನಾಭರಣ ವಿವಿಧ ವಿನ್ಯಾಸದ ಆರ್ಟಿಫಿಶಲ್ ಜ್ಯುವೆಲ್ಲರಿ ಮಸಾಲೆ ಹುಡಿಗಳು, ಹರ್ಬಲ್ ಉತ್ಪನ್ನಗಳು ಹಾಗೂ ಅನೇಕ ವಿಧವಿಧ ಉತ್ಪನ್ನಗಳ ಅಪೂರ್ವ ಸಂಗ್ರಹವೂ ಇದೆ ಎಂದರು .ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಉತ್ಪನ್ನಗಳು ದೊರೆಯಲಿದ್ದು ಗ್ರಾಹಕರು ಇದರ ಅನುಕೂಲವನ್ನು ಪಡೆಯಬಹುದೆಂದು ತಿಳಿಸಿದರು .
ಪತ್ರಿಕಾಗೋಷ್ಠಿಯಲ್ಲಿ ಕೋಶಾಧಿಕಾರಿಯಾದಾ ಮಾಲತಿ ಜೆ ಶೆಟ್ಟಿ , ಜೊತೆ ಕಾರ್ಯದರ್ಶಿಗಳಾದ ಕವಿತಾ ಪಿ ಶೆಟ್ಟಿ ಉಪಸ್ಥಿತತರಿದ್ದರು