ಕಾಸರಗೋಡು : ನಗರದಲ್ಲಿ ಹಾಡುಹಗಲೇ ಯುವಕನೊಬ್ಬನನ್ನು ಅಪಹರಣಗೈದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ನಗರದ ಕರಂದಕ್ಕಾಡು ಪ್ರದೇಶದ ಪ್ರಸಿದ್ಧ ಹೋಟೆಲಿನ ಸಮೀಪ ಈ ಘಟನೆ ನಡೆದಿದ್ದು, ಆಂಧ್ರಪ್ರದೇಶದ ನೋಂದಣಿ ಹೊಂದಿರುವ ಕಾರಿನಲ್ಲಿ ಬಂದ ತಂಡವು ಯುವಕನನ್ನು ಅಪಹರಿಸಿಕೊಂಡು ಹೋಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಮಾಹಿತಿಯಂತೆ, ಎಪಿ 40 ಇ ಯು1277 ಸಂಖ್ಯೆಯ ಆಂಧ್ರ ನೋಂದಣಿ ಕಾರನ್ನು ಅಪಹರಣಕ್ಕೆ ಬಳಸಲಾಗಿದೆ. ಅಪಹರಣಕ್ಕೊಳಗಾದ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.ಘಟನೆಯ ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿಯ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಎಲ್ಲಾ ಪೊಲೀಸ್ ಠಾಣೆಗಳು ಹಾಗೂ ಅಂತರರಾಜ್ಯ ಪೊಲೀಸ್ ಘಟಕಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಹೋಟೆಲಿನ ಭದ್ರತಾ ಸಿಬ್ಬಂದಿ ನೀಡಿದ ಮಾಹಿತಿ ತನಿಖೆಗೆ ಮಹತ್ವದ ಸುಳಿವಾಗಿದ್ದು, ಅಪಹರಣಗೊಂಡ ವ್ಯಕ್ತಿ ಮುಖಕ್ಕೆ ಮಾಸ್ಕ್ ಧರಿಸಿದ್ದನು ಎಂದು ತಿಳಿದುಬಂದಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿದ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.ಅಪಹರಣ ಪ್ರಕರಣ ಕಾನೂನು ಸುವ್ಯವಸ್ಥೆಯ ಕುರಿತು ಚರ್ಚೆಗೆ ಕಾರಣವಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Hey all, has anyone ever used 555wincom? I’m curious! Looks like a nice platform for gaming. You can check it out here 555wincom.