ಜಪ್ಪು ಮಹಾಕಾಳಿಪಡ್ಪು ರೈಲ್ವೆ ಕೆಳಸೇತುವೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಿ : ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು

ಮಂಗಳೂರು ನಗರದ ಜಪ್ಪು ಮಹಾಕಾಳಿಪಡ್ಪು ರೈಲ್ವೆ ಕೆಳಸೇತುವೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಬೇಕು ಹಾಗೂ ಕನಿಷ್ಠ ಒಂದು ವರ್ಷಗಳ ಕಾಲ ಜಪ್ಪು ಮಹಾಕಾಳಿಪಡ್ಪು ರೈಲ್ವೇ ಗೇಟ್ ಅನ್ನು ಮುಚ್ಚದೆ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಸರಕಾರವನ್ನು ಆಗ್ರಹಿಸಿದ್ದಾರೆ.

ಅವರು ಗುರುವಾರ ಜಪ್ಪು ಮಹಾಕಾಳಿಪಡ್ಪು ರೈಲ್ವೇ ಗೇಟ್ ಬಳಿ ನಡೆದ ಹಕ್ಕೊತ್ತಾಯ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಜಪ್ಪು ಮಹಾಕಾಳಿಪಡ್ಪು ಪ್ರದೇಶವು ಮಂಗಳೂರಿನ ಪ್ರಮುಖ ನಗರ ಪ್ರದೇಶಗಳಲ್ಲೊಂದಾಗಿದ್ದು, ಸಾವಿರಾರು ಜನರು ಇಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಿದರು.ಕೇರಳ, ಮುಡಿಪು, ಕೊಣಾಜೆ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಿಂದ ಮಂಗಳೂರು ನಗರಕ್ಕೆ ಆಗಮಿಸುವ ಜನರು ಪಂಪ್‌ ವೆಲ್ ಮಾರ್ಗದ ಬದಲು ಜಪ್ಪು ಮಹಾಕಾಳಿಪಡ್ಪು ಬೈಪಾಸ್ ರಸ್ತೆಯನ್ನೇ ಹೆಚ್ಚಾಗಿ ಅವಲಂಬಿಸಿದ್ದಾರೆ ಎಂದು ವಿವರಿಸಿದರು.

ಈ ಮಾರ್ಗದಲ್ಲಿ ದಿನಕ್ಕೆ 50ಕ್ಕೂ ಹೆಚ್ಚು ರೈಲುಗಳು ಸಂಚರಿಸುತ್ತಿದ್ದು, ಪ್ರತೀ ಬಾರಿ ರೈಲ್ವೇ ಗೇಟ್ ಮುಚ್ಚಿದಾಗ ಸಾರ್ವಜನಿಕರ ಅಮೂಲ್ಯ ಸಮಯ ವ್ಯರ್ಥವಾಗುತ್ತಿದೆ.ಈ ರಸ್ತೆಯನ್ನು ಬಳಸುವ ತುರ್ತು ವಾಹನಗಳಾದ ಅಗ್ನಿಶಾಮಕ ವಾಹನಗಳು, ಆ್ಯಂಬುಲೆನ್ಸ್, ಪೊಲೀಸ್ ವಾಹನಗಳು, ಸಾವಿರಾರು ಪ್ರಯಾಣಿಕರು, ಶಾಲಾ ಮಕ್ಕಳು, ವೃದ್ಧರು ಹಾಗೂ ಹಿರಿಯ ನಾಗರಿಕರು ನಿರಂತರ ತೊಂದರೆಗೆ ಒಳಗಾಗುತ್ತಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

SHARE
Loading spinner

One thought on “ಜಪ್ಪು ಮಹಾಕಾಳಿಪಡ್ಪು ರೈಲ್ವೆ ಕೆಳಸೇತುವೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಿ : ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು

Leave a Reply

Your email address will not be published. Required fields are marked *

error: Content is protected !!