ಮಂಗಳೂರು:ಕೇರಳ, ಉಳ್ಳಾಲ ಕಡೆಯಿಂದ ಮಂಗಳೂರು ನಗರ ಪ್ರವೇಶಕ್ಕೆ ನೇರ ಅವಕಾಶ ಕಲ್ಪಿಸುವ ಮಹಾಕಾಳಿಪಡ್ಡು ರೈಲ್ವೇ ಕೆಳ ಸೇತುವೆ ಕಾಮಗಾರಿ ಪೂರ್ಣಗೊಂಡರೂ ಸಾರ್ವಜನಿಕ ಸಂಚಾರಕ್ಕೆ ಇನ್ನೂ ಮುಕ್ತಗೊಳಿಸದಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು, ಸಚಿವರ ಜತೆ ಚರ್ಚಿಸುವುದಾಗಿ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.
ಮಂಗಳೂರು ಸರ್ಕ್ಯೂಟ್‌ಹೌಸ್‌ನಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಗರದ ಅಭಿವೃದ್ಧಿಗೆ ಪೂರಕವಾಗಿ ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದ ವೇಳೆ ಈ ಸೇತುವೆ ಕಾಮಗಾರಿಗೆ ಅನುಮೋದನೆಯನ್ನು ಒದಗಿಸಿರುವುದು ನಾನೇ. ನಾನಾ ಕಾರಣಗಳಿಂದ ಕಾಮಗಾರಿ ವಿಳಂಬವಾಗಿದೆ. ಇದೀಗ ಬಾಕಿ ಕಾಮಗಾರಿಯನ್ನು ಮುಗಿಸಿ ಶೀಘ್ರವೇ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗುವ ನಿಟ್ಟಿನಲ್ಲಿ ಉಸ್ತುವಾರಿ ಸಚಿವರನ್ನು ಒಳಗೊಂಡು ಸಂಬಂಧಪಟ್ಟವರ ಜತೆ ಚರ್ಚಿಸಲಾಗುವುದು. ಮಾತ್ರವಲ್ಲದೆ, ಅಲ್ಲಿನ ಸಮಸ್ಯೆಗಳ ಕುರಿತಂತೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಕ್ರಮ ವಹಿಸಲು ಸೂಚಿಸಲಾಗುವುದು ಎಂದರು.
Cần link 188bet mới nhất hả? Link188betmoinhat là chuẩn bài rồi! Chơi mượt mà, không lo bị chặn. Anh em vào chiến thôi! Check out link188betmoinhat