ಮಂಗಳೂರು: 16ನೇ ವಿಧಾನ ಸಭೆಯ 8ನೇ ಅಧಿವೇಶನವು ದಿನಾಂಕ 8ನೇ ಡಿಸೆಂಬರ್. 2025ರಂದು ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಪ್ರಾರಂಭವಾಗಿ 19ನೇ ಡಿಸೆಂಬರ್, 2025 ರವರೆಗೆ 10 ದಿನಗಳ ಕಾಲ ಸುಮಾರು 57 ಗಂಟೆ 35 ನಿಮಿಷಗಳ ಕಾಲ ಕಾರ್ಯಕಲಾಪ ನಡೆಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಇತ್ತೀಚೆಗೆ ನಿಧನ ಹೊಂದಿದ ಗಣ್ಯರುಗಳಿಗೆ ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಿ, ಅಂಗೀಕರಿಸಲಾಗಿದೆ , ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಬಗ್ಗೆ ಕಾರ್ಯದರ್ಶಿಯವರ ವರದಿಯನ್ನು ಮಂಡಿಸಲಾಗಿದೆ ಎಂದರು .
2025-26 ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತನ್ನು ದಿನಾಂಕ:17.12.2025ರಂದು ಮಂಡಿಸಿ, ದಿನಾಂಕ:18.12.2025 ರಂದು ಮತಕ್ಕೆ ಹಾಕಿ ಅಂಗೀಕರಿಸಲಾಯಿತು. ರಾಜ್ಯ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನಾ ವರದಿಯನ್ನು ದಿನಾಂಕ:18.12.2025ರಂದು ಮಂಡಿಸಲಾಗಿದೆ ಎಂದರು .22 ಅರ್ಜಿಗಳನ್ನು ಸದನಕ್ಕೆ ಒಪ್ಪಿಸಲಾಗಿದೆ.ಸಭೆಯ ಮುಂದಿಡಲಾದ ಕಾಗದ ಪತ್ರಗಳ 1 ಮತ್ತು 2 ಪಟ್ಟಿಯಿಂದ ಒಟ್ಟು 54 ಅಧಿಸೂಚನೆಗಳು, ಮತ್ತು 78 ವಾರ್ಷಿಕ ವರದಿಗಳು, 74 ಲೆಕ್ಕ ಪರಿಶೋಧನಾ ವರದಿಗಳು, 14 ಅನುಪಾಲನ ವರದಿಗಳು ಹಾಗೂ 14 ಅನುಸರಣಾ ವರದಿಗಳನ್ನು ಸದನದಲ್ಲಿ ಮಂಡಿಸಲಾಗಿರುತ್ತದೆ.
ಒಟ್ಟು 2109 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಸದನದಲ್ಲಿ ಉತ್ತರಿಸಬೇಕಾಗಿದ್ದ 135 ಪ್ರಶ್ನೆಗಳ ಪೈಕಿ 134 ಪ್ರಶ್ನೆಗಳಿಗೆ ಹಾಗೂ ಲಿಖಿತ ಮೂಲಕ ಉತ್ತರಿಸುವ 1974 ಪ್ರಶ್ನೆಗಳ ಪೈಕಿ 1750 ಪ್ರಶ್ನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ.ನಿಯಮ 351 ರಡಿಯಲ್ಲಿ 180 ಸೂಚನೆಗಳನ್ನು ಅಂಗೀಕರಿಸಿದ್ದು, 70 ಸೂಚನೆಗಳ ಉತ್ತರಗಳನ್ನು ಸ್ವೀಕರಿಸಲಾಗಿದೆ.ಗಮನ ಸೆಳೆಯುವ 368 ಸೂಚನೆಗಳ ಪೈಕಿ 228 ಸೂಚನೆಗಳಿಗೆ ಉತ್ತರವನ್ನು ಸ್ವೀಕರಿಸಲಾಗಿದೆ.ಶೂನ್ಯ ವೇಳೆಯಲ್ಲಿ 02 ಸೂಚನೆಗಳ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು . ಇನ್ನಿತರ ಅಧಿವೇಶನದಲ್ಲಿ ನಡೆದ ವಿಷಯಗಳನ್ನು ಮಾಧ್ಯಮ ಮಿತ್ರರೊಂದಿಗೆ ಹಂಚಿಕೊಂಡರು .
Yo, rtbetapp is legit! Been having some good luck lately. Definitely worth checking out. Click here: rtbetapp