ದ. ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ 9ನೇ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಕಂಬಳಕ್ಕೆ ವಿದ್ಯುತ್ವ ಚಾಲನೆ … !

ಮಂಗಳೂರು: ಕರಾವಳಿಯ ಸಂಸ್ಕೃತಿ, ಪರಂಪರೆ ಹಾಗೂ ಜಾನಪದ ಕ್ರೀಡಾ ವೈಭವಕ್ಕೆ ಪ್ರತೀಕವಾದ ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟಿ ಅವರ ನೇತೃತ್ವದಲ್ಲಿ 9ನೇ ವರ್ಷದ ಮಂಗಳೂರು ಕಂಬಳ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡುಕರೆಯಲ್ಲಿ ಭಾರೀ ಜನಸಾಗರದ ನಡುವೆ ಅದ್ದೂರಿಯಾಗಿ ಆರಂಭಗೊಂಡಿತು.


.
ಬೆಳಿಗ್ಗೆ 8.30ಕ್ಕೆ ಕಂಕನಾಡಿ ಶ್ರೀಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಕೆ. ಚಿತ್ತರಂಜನ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಂಬಳಕ್ಕೆ ಅಧಿಕೃತ ಚಾಲನೆ ನೀಡಿದರು. ಕಟೀಲು ಕ್ಷೇತ್ರದ ಅರ್ಚಕ ಅನಂತಪದ್ಮನಾಭ ಅಸ್ರಣ್ಯರು ತೆಂಗಿನ ಕೊಂಬು ಅರಳಿಸುವ ಮೂಲಕ ಜೋಡುಕರೆಯಲ್ಲಿ ಕಂಬಳ ಕೋಣಗಳ ಓಟಕ್ಕೆ ಅಧಿಕೃತ ಮುದ್ರೆ ಒತ್ತಿದರು. ಕಂಬಳ ಕಣದಲ್ಲಿ ಕೋಣಗಳ ಓಟದೊಂದಿಗೆ ಪ್ರೇಕ್ಷಕರ ಸಂಭ್ರಮ, ಜೈಕಾರಗಳ ಘೋಷ ಹಾಗೂ ಸಂಸ್ಕೃತಿಯ ಛಾವು ಮೇಲೈಸಿ ಕಂಬಳ ಮೈದಾನವೇ ಹಬ್ಬದ ವಾತಾವರಣಕ್ಕೆ ಸಾಕ್ಷಿಯಾಯಿತು.

ಪರಿಸರ ಸ್ನೇಹಿ ಪರಿಕಲ್ಪನೆಯಡಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ, ‘ಕ್ಲೀನ್ ಅಂಡ್ ಸೇಪ್ ಸಿಟಿ’ ಶಿಸ್ತನ್ನು ಕಂಬಳ ವೇದಿಕೆಯಲ್ಲೂ ಅಳವಡಿಸಲಾಯಿತು. ಈ ಬಾರಿ ಸುಮಾರು 160ರಿಂದ 170 ಜತೆ ಕೋಣಗಳು ಕಂಬಳ ಕಣದಲ್ಲಿ ಪೈಪೋಟಿ ನಡೆಸುತ್ತಿದ್ದು ರಾತ್ರಿಯ ವೇಳೆಗೆ ಗೆಲ್ಲುವ ಕೋಣಗಳ ಸಂಪೂರ್ಣ ಚಿತ್ರಣ ಲಭ್ಯವಾಗಲಿದೆ.

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ರಾಣಿ ಅಬ್ಬಕ್ಕ ಚರಿತ್ರಾ ಚಿತ್ರಕಲಾ ಪ್ರದರ್ಶನ, ವಂದೇ ಮಾತರಂ ಗೀತೆಯ 150ನೇ ವರ್ಷದ ಸವಿನೆನವು, ‘ಏಕ್ ಪೆಡ್ ಮಾ ಕೆ ನಾಮ್’ ಗಿಡ ವಿತರಣೆ, ‘ಬ್ಯಾಕ್ ಟು ಊರು’ ಉದ್ಯಮಿಗಳಿಗೆ ಗೌರವ, ಹಿರಿಯ ಚೇತನರಿಗೆ ಕಂಬಳ ವೀಕ್ಷಣೆ, ಮಕ್ಕಳ ಹಾಗೂ ಯುವಕರಿಗೆ ವಿವಿಧ ಸ್ಪರ್ಧೆಗಳು ಕಂಬಳದ ವೈಶಿಷ್ಟ್ಯವಾಗಿದೆ.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವ ಸಲಹೆಗಾರರಾದ ಪ್ರಸಾದ್ ಕುಮಾರ್ ಶೆಟ್ಟಿ, ವಿಜಯ್ ಕುಮಾರ್ ಕೆಂಗಿನಮನೆ, ಉಪಾಧ್ಯಕ್ಷರಾದ ಕಿರಣ್ ಕುಮಾರ್ ಕೋಡಿಕಲ್, ಸಂಜಯ್ ಪ್ರಭು, ಜೋಯಲೆಸ್ ಡಿಸೋಜ, ವಸಂತ್ ಜೆ. ಪೂಜಾರಿ, ನಂದನ್ ಮಲ್ಯ, ಅಜಿತ್ ಬೋಪಯ್ಯ ಗುರುಚಂದ್ರ ಹೆಗಡೆ, ಅಭಿಷೇಕ್ ರೈ ಈಶ್ವರ್ ಪ್ರಸಾದ್, ಸಾಕ್ಷತ್ ಶೆಟ್ಟಿ, ಪ್ರಕಾಶ್ ಗರೋಡಿ, ಸಂಚಾಲಕರಾದ ಸಾಂತ್ಯಗುತ್ತು ಸಚಿನ್ ಶೆಟ್ಟಿ, ಕಾರ್ಯದರ್ಶಿ ಅವಿನಾಶ್ ಸುವರ್ಣ, ಸುಜಿತ್ ಪ್ರತಾಪ್ ಸೇರಿದಂತೆ ಕಂಬಳ ಸಮಿತಿಯ ಪದಾಧಿಕಾರಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಅಪಾರ ಸಂಖ್ಯೆಯ ಕಂಬಳಾಭಿಮಾನಿಗಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!