ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬಂದಿಗೆ ಹಲ್ಲೆ .ಹಲ್ಲೆ ನಡೆಸಿದ ಆರೋಪಿ ವಶಕ್ಕೆ … !

ಬಂಟ್ವಾಳ:ಬಿ.ಸಿ.ರೋಡು ಬಳಿಯ ಬ್ರಹ್ಮರಕೂಟ್ಲು ಟೋಲ್ ಗೇಟ್ ನಲ್ಲಿ ಆರೋಪಿಗಳಾದ ಲಾರಿ ಚಾಲಕ ಹಾಗೂ ಕ್ಲೀನರ್ ಟೋಲ್ ಗೇಟ್ ಗೆ ಹಾನಿ ಮಾಡಿ ಸಿಬಂದಿಗೆ ಹಲ್ಲೆ ನಡೆಸಿದ ಘಟನೆ ಸೋಮವಾರ ನಡೆದಿದ್ದು, ಘಟನೆಯಲ್ಲಿ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.
ಚಿಕ್ಕಮಗಳೂರು ಮೂಲದ ಲಾರಿ ಚಾಲಕ ಭರತ್(23) ಹಾಗೂ ಕ್ಲೀನರ್ ತೇಜಸ್(26) ಪ್ರಕರಣದ ಆರೋಪಿಗಳಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಟೋಲ್ ಮೇಲ್ವಿಚಾರಕ ಕಾಸರಗೋಡಿನ ಮುಳ್ಳೇರಿಯಾ ನಿವಾಸಿ ಪ್ರಶಾಂತ್ ಬಿ. ಪೊಲೀಸರಿಗೆ ದೂರು ನೀಡಿದ್ದಾರೆ.
ಆರೋಪಿಗಳು ಸೋಮವಾರ ಮುಂಜಾನೆ ಟಾಟಾ ಲಾರಿಯಲ್ಲಿ ಟೋಲ್ ಬಳಿ ವಿರುದ್ಧ ದಿಕ್ಕಿನಲ್ಲಿ ಬಂದಿದ್ದು, ಟೋಲ್ ಸಿಬಂದಿ ಹಣ ಕೇಳಿದಾಗ ಲಾರಿಯನ್ನು ಮುಂದಕ್ಕೆ ಚಲಾಯಿಸಿಕೊಂಡು ಹೋಗಿ ಟೋಲ್ ಗೇಟ್ ಗೆ ಹಾನಿ ಮಾಡಿದ್ದಾರೆ. ಬಳಿಕ ಚಾಲಕ ಹಾಗೂ ಕ್ಲೀನರ್ ಟೋಲ್ ಸಿಬಂದಿ ಅಂಕಿತ್ ಹಾಗೂ ರೋಹಿತ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ.


ಬಳಿಕ ಇನ್ನೊಂದು ಪಿಕ್ ಅಪ್ ವಾಹನದಲ್ಲಿದ್ದ ಇಬ್ಬರನ್ನು ಕರೆದುಕೊಂಡು ಟೋಲ್ ಬೂತ್ ಗೆ ಅಕ್ರಮವಾಗಿ ಪ್ರವೇಶಿಸಿ ಮತ್ತೆ ಸಿಬಂದಿಗೆ ಹಲ್ಲೆ ನಡೆಸಿರುತ್ತಾರೆ. ಈ ಕುರಿತ ದೂರಿನಂತೆ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!