Avatar

NAMMA MEDIA 24X7

ಮಹಿಳೆಯ ಮನೆಗೆ ನುಗ್ಗಿ ಬ್ಲ್ಯಾಕ್‌ಮೇಲ್: ಚಿನ್ನಾಭರಣ, ₹55 ಸಾವಿರ ದೋಚಿದ ಐವರು ಬಂಧನ

ಕಾಸರಗೋಡು : ಮಹಿಳೆಯ ಮನೆಗೆ ಅಕ್ರಮವಾಗಿ ನುಗ್ಗಿ, ಆಕೆ ಮತ್ತು ಆಕೆಯ ಗಂಡುಸ್ನೇಹಿತನನ್ನು ಬೆದರಿಸಿ ಚಿನ್ನಾಭರಣ ಹಾಗೂ ಹಣ ದೋಚಿದ್ದ ಐವರು ಆರೋಪಿಗಳನ್ನು ವಿದ್ಯಾನ್‌ಗರ್ ಪೊಲೀಸರು ಬಂಧಿಸಿದ್ದಾರೆ. ​ಬಂಧಿತರನ್ನು ಬಿ. ಶರೀಫ್, ಮೊಹಮ್ಮದ್ ಸಾಲಿಹ್, ಉಮರ್ ಮುಖ್ತಾರ್, ಮೊಹಮ್ಮದ್ ಶಿಹಾನ್ ಮತ್ತು ಅಬ್ದುಲ್ ರಶೀದ್ ಎಂದು ಗುರುತಿಸಲಾಗಿದೆ. ಕಳೆದ ಜುಲೈ 21 ರಂದು ಈ ಘಟನೆ ನಡೆದಿದ್ದು, ಮನೆಗೆ ಬಂದಿದ್ದ ಗಂಡುಸ್ನೇಹಿತನ ಜೊತೆ ಮಹಿಳೆಯನ್ನು ಸೇರಿಸಿ ಫೋಟೋ ತೆಗೆದಿದ್ದ ಆರೋಪಿಗಳು, ಅದನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದರು. ನಂತರ…

Read More

ಪ್ರಿಯದರ್ಶಿನಿ ಬಸ್‌ನಲ್ಲಿ ಹಣ ಕಳವು: ಪಿಗ್ಮಿ ಏಜೆಂಟ್‌ನಿಂದ 20,000 ರೂಪಾಯಿ ಎಗರಿಸಿದ ಕಳ್ಳರು

​ ಕುಂಬಳೆ : ಕಾಸರಗೋಡಿನಿಂದ ಮಂಗಳೂರಿಗೆ ಹೊರಟಿದ್ದ ಪ್ರಿಯದರ್ಶಿನಿ ರಸ್ತೆ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪಿಗ್ಮಿ ಏಜೆಂಟ್‌ ಅವರ 20,000 ರೂಪಾಯಿ ಕಳವಾಗಿದೆ. ​ಕಳತ್ತೂರು ನಿವಾಸಿ ರಾಘವ (49) ಎಂಬುವರು ಬ್ಯಾಂಕ್‌ನಲ್ಲಿ ಹಣ ಜಮಾ ಮಾಡಿ, ಬಳಿಕ ಪಡೆದಿದ್ದ 20 ರೂಪಾಯಿ ಮುಖಬೆಲೆಯ ನೋಟಿನ ಕಟ್ಟುಗಳನ್ನು ತಮ್ಮ ಬ್ಯಾಗ್‌ನಲ್ಲಿ ಇಟ್ಟುಕೊಂಡು ಕುಂಬಳೆಗೆ ಬಸ್ ಹತ್ತಿದ್ದರು.ಬಸ್ ಮೊಗ್ರಾಲ್ ತಲುಪಿದಾಗ ಬ್ಯಾಗ್‌ನ ಜಿಪ್ ತೆರೆದಿರುವುದು ಮತ್ತು ಹಣ ಮಿಸ್ ಆಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಬಸ್ ಅನ್ನು ಕುಂಬಳೆ ಪೊಲೀಸ್…

Read More

ವಿಚಿತ್ರ ಕಳ್ಳತನ: ₹1,500 ಕದ್ದ ಕಳ್ಳ, ದಾಖಲೆಗಳಿದ್ದ ಪರ್ಸ್ ಅಂಚೆಪೆಟ್ಟಿಗೆಯಲ್ಲಿ ಹಾಕಿದ

ಕಾಸರಗೋಡು : ಪಯ್ಯನ್ನೂರಿನಲ್ಲಿ ವಿಚಿತ್ರ ಕಳ್ಳತನವೊಂದು ನಡೆದಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ನೀಲೇಶ್ವರ ಮೂಲದ ರಾಜೀವನ್ ಎಂಬುವರ ಪರ್ಸ್ ಅನ್ನು ಕಳ್ಳನೊಬ್ಬ ಎಗರಿಸಿದ್ದಾನೆ. ಪರ್ಸ್‌ನಲ್ಲಿದ್ದ 1,500 ರೂಪಾಯಿ ನಗದನ್ನು ಮಾತ್ರ ತಾನು ಇಟ್ಟುಕೊಂಡು, ಎಟಿಎಂ, ಪ್ಯಾನ್ ಮತ್ತು ಇತರ ಪ್ರಮುಖ ದಾಖಲೆಗಳಿದ್ದ ಪರ್ಸ್ ಅನ್ನು 25 ಕಿ.ಮೀ ದೂರದ ಚೆರುಪುಳ ಅಂಚೆ ಪೆಟ್ಟಿಗೆಯಲ್ಲಿ ಹಾಕಿದ್ದಾನೆ. ​ಅಂಚೆ ನೌಕರರು ಈ ಪರ್ಸ್ ಅನ್ನು ಕಂಡುಹಿಡಿದು, ಅದರಲ್ಲಿದ್ದ ವಿಳಾಸದ ಆಧಾರದ ಮೇಲೆ ಮಾಲೀಕ ರಾಜೀವನ್ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ಸೋಮವಾರ…

Read More

ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ: ಸಚಿವ ಕೆ.ಹೆಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ, ವಸತಿ ಹಂಚಿಕೆ ಮಾಡಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ದೇವನಹಳ್ಳಿ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದ…

Read More

ಖ್ಯಾತ ಕವಿ, ಭಾಷಾ ವಿಜ್ಞಾನಿ ವಿ.ಬಿ. ಕುಳಮರ್ವ ಅವರಿಗೆ ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ

ಕಾಸರಗೋಡು, ಸೆ. 19: ಕಾಸರಗೋಡು ಕನ್ನಡ ಭವನದ ನೇತೃತ್ವದಲ್ಲಿ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ಅ.11ರಿಂದ 20ರವರೆಗೆ ನಡೆಯಲಿರುವ ‘ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026’ರ ಅಂಗವಾಗಿ ಅ.18ರಂದು ನಡೆಯುವ ಕಾಸರಗೋಡು ದಸರಾ ಕವಿ ಸಮ್ಮೇಳನದಲ್ಲಿ ಖ್ಯಾತ ಕವಿ ಹಾಗೂ ಭಾಷಾ ವಿಜ್ಞಾನಿ ವಿ.ಬಿ. ಕುಳಮರ್ವ ಅವರಿಗೆ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ–2026’ ನೀಡಿ ಗೌರವಿಸಲಾಗುವುದು. ಅ.18ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕವಿ ಸಮ್ಮೇಳನವು ಸಾಹಿತ್ಯ ಸಂಘಟಕ ಬಿ. ಶ್ರೀನಿವಾಸ್ ಬಹಾದ್ದೂರ್…

Read More

ಶಿವಪ್ರಸಾದ್ ಶೇಟ್‌ಗೆ ತುಳುನಾಡಿನ ಸೂರ್ಯ ಚಂದ್ರರ ಶಾಲು ಹೊದಿಸಿ ಗೌರವ

ಮಂಗಳೂರು: ‘ಗಿವ್ ಬ್ಯಾಕ್ ನಾಗರಿಕ ಅಭಿಯಾನ’ದ ಬೆಂಗಳೂರು ಸ್ಥಾಪಕಾಧ್ಯಕ್ಷ ಹಾಗೂ 2021-22ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತ ಶಿವಪ್ರಸಾದ್ ಶೇಟ್ ಅವರನ್ನು ರಾಜಕೇಸರಿ ಸೇವಾ ಟ್ರಸ್ಟ್‌ನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ್ ಕುಮಾರ್ ಕೊಲ್ಯ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ಕುಲಾಲ್ ಅವರು ತುಳುನಾಡಿನ ಸೂರ್ಯ–ಚಂದ್ರರ ಚಿತ್ತಾರದ ಶಾಲು ಹೊದಿಸಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜಕೇಸರಿ ಸೇವಾ ಟ್ರಸ್ಟ್‌ನ ವತಿಯಿಂದ ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ವಿವಿಧ ಸಾಮಾಜಿಕ ಕಾರ್ಯಗಳ ಕುರಿತು ಶಿವಪ್ರಸಾದ್ ಶೇಟ್…

Read More

ಕನಸವಾಡಿಯಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆ

ದೊಡ್ಡಬಳ್ಳಾಪುರ ಬರ ಪೀಡಿತ ತಾಲ್ಲೂಕು ಘೋಷಣೆಗೆ ಸರ್ಕಾರಕ್ಕೆ ವರದಿ: ಸಚಿವ ಕೆ.ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆಯಿಂದ ಬೆಳೆಗಳು ಹಾನಿಯಾಗಿದ್ದು ಈಗಾಗಲೇ ಮೊದಲ ಪಟ್ಟಿಯಲ್ಲಿ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕು ಎಂದು ಸರ್ಕಾರ ಘೋಷಿಸಿದ್ದು ದೊಡ್ಡಬಳ್ಳಾಪುರವನ್ನು ಬರ ಪೀಡಿತ ತಾಲ್ಲೂಕನ್ನಾಗಿ ಘೋಷಿಸಲು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಹೇಳಿದರು. ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿಯ ಪ್ರೌಢಶಾಲೆ…

Read More

ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಸೆ.20ರಂದು ಹುಟ್ಟೂರ ಅಭಿನಂದನೆ

ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಮೈನೂರು ವಿಭಾಗದ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹಾಗೂ ಎನ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಸೆ.20ರಂದು ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಹುಟ್ಟೂರ ಅಭಿನಂದನಾ ಸಮಾರಂಭ ನಡೆಯಲಿದೆ. ಊರ ನಾಗರಿಕರ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ ಶ್ರೀ ರಾಮನಗರ ಶ್ರೀ ಅಯ್ಯಪ್ಪ ಭಜನಾ ಮಂದಿರದ ವಠಾರದಿಂದ ತೆರೆದ ಜೀಪಿನಲ್ಲಿ ಭವ್ಯ ಮೆರವಣಿಗೆ ಮೂಲಕ…

Read More

ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ‘ಅತ್ಯುತ್ತಮ ಸಾಧನ ಪ್ರಶಸ್ತಿ’

ಮಂಗಳೂರು: ಸಹಕಾರಿ ರಂಗದಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಉತ್ಕೃಷ್ಟ ಬ್ಯಾಂಕಿಂಗ್ ಸೇವೆ ನೀಡುವ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್)ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ‘ಅತ್ಯುತ್ತಮ ಸಾಧನ ಪ್ರಶಸ್ತಿ’ ಲಭಿಸಿದೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್. ರವಿ ಅವರಿಂದ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಹಾಗೂ ಎಂ….

Read More

ತುಳು ಅಧಿಕೃತ ಭಾಷೆ ಘೋಷಣೆ ಸಂತಸದ ವಿಚಾರ: ಶುಭೋದಯ ಆಳ್ವ

ಮಂಗಳೂರು:ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಿರುವುದು ಸಂತಸದ ವಿಚಾರ. ತುಳು ಭಾಷೆಗೆ ಸೂಕ್ತ ಸ್ಥಾನಮಾನ ದೊರೆಯಬೇಕು ಎಂಬ ನಿಟ್ಟಿನಲ್ಲಿ ಹಲವು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ತುಳು ಭಾಷೆಯ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿದೆ ಎಂದು ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ ಹೇಳಿದರು. ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರೆಯಬೇಕು ಎಂಬ ಬೇಡಿಕೆಯನ್ನು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರಸ್ತುತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಂದೆಯೂ…

Read More
error: Content is protected !!