ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ನನ್ನ ಮೊದಲ ಆದ್ಯತೆ: ಆರೋಗ್ಯ ಸಚಿವ ಯು.ಟಿ. ಖಾದರ್ಆಸ್ಪತ್ರೆಗಳ ಲೋಪದೋಷ ಸರಿಪಡಿಸಲು ಕ್ರಮ;
ಮಂಗಳೂರು, ಜೂನ್ 8: ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಬರುವ ರೋಗಿಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಮಾಡುವುದು ತನ್ನ ಮೊದಲ ಆದ್ಯತೆಯಾಗಿದ್ದು, ಆಸ್ಪತ್ರೆಗಳಲ್ಲಿರುವ ಲೋಪದೋಷಗಳನ್ನು ಗುರುತಿಸಿ ಸರಿಪಡಿಸಲು ವಿಶೇಷ ಗಮನ ಹರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ರಾಜ್ಯದ ನೂತನ ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ಅವರು, ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಹಿಂದಿನ ಆರೋಗ್ಯ ಸಚಿವರು ಆರಂಭಿಸಿರುವ ಯೋಜನೆಗಳನ್ನು…