Avatar

NAMMA MEDIA 24X7

ಡೆಫೆಕ್ಷನ್ ವಿರೋಧಿ ಕಾನೂನು ಬಲಪಡಿಸುವ ಅಗತ್ಯ: ಸಭಾಧ್ಯಕ್ಷ ಯು.ಟಿ. ಖಾದರ್ ಅಭಿಪ್ರಾಯ

ಮಂಗಳೂರು: Anti-Defection Law (ಡೆಫೆಕ್ಷನ್ ವಿರೋಧಿ ಕಾನೂನು) ಅನ್ನು ಇನ್ನಷ್ಟು ಬಲಿಷ್ಠಗೊಳಿಸುವ ಅಗತ್ಯವಿದೆ ಎಂಬ ಅಭಿಪ್ರಾಯವನ್ನು ವಿವಿಧ ರಾಜ್ಯಗಳ ಸಭಾಧ್ಯಕ್ಷರು, ಕಾನೂನು ತಜ್ಞರು ಮತ್ತು ಸಂವಿಧಾನ ತಜ್ಞರು ವ್ಯಕ್ತಪಡಿಸಿದ್ದಾರೆ ಎಂದು ಸಭಾಧ್ಯಕ್ಷರಾದ ಯು.ಟಿ. ಖಾದರ್ ತಿಳಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಸಮನ್ವಯ ಸಭೆ ಮುಂಬೈ ನಲ್ಲಿ ನಡೆದಿದ್ದು, ನಂತರದ ಎರಡನೇ ಸಭೆ ಪುರಿ ಯಲ್ಲಿ ಎರಡು ದಿನಗಳ ಕಾಲ ನಡೆಯಿತು ಎಂದರು. ಈ ಸಭೆಗಳಲ್ಲಿ ಮಹಾರಾಷ್ಟ್ರ, ಒಡಿಶಾ, ನಾಗಾಲ್ಯಾಂಡ್ ಹಾಗೂ…

Read More

ಕರಾವಳಿ ಪ್ರವಾಸೋದ್ಯಮಕ್ಕೆ ಭರವಸೆಗಳು ಈಡೇರಿಲ್ಲ: ಡಿ.ಕೆ. ಶಿವಕುಮಾರ್ ವಿರುದ್ಧ ವಿವೇಕಾನಂದ ಸಾಲಿನ್ಸ್ ಟೀಕೆ

ಮಂಗಳೂರು ಡಿ.ಕೆ. ಶಿವಕುಮಾರ್ ಅವರು ಇದೇ ವರ್ಷದ ಜನವರಿ 10ರಂದು ಮಂಗಳೂರಿಗೆ ಭೇಟಿ ನೀಡಿ ಹೂಡಿಕೆದಾರರ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಕರಾವಳಿ ಕರ್ನಾಟಕಕ್ಕಾಗಿ ಹೊಸ ಪ್ರವಾಸೋದ್ಯಮ ನೀತಿ ರೂಪಿಸುವುದಾಗಿ ಹಾಗೂ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿರುವುದಾಗಿ ನೀಡಿದ ಭರವಸೆಗಳು ಇದುವರೆಗೆ ವಿಧಾನಸಭೆಯಲ್ಲಿ ಪ್ರಸ್ತಾವನೆಯಾಗದಿರುವುದು ವಿಷಾದನೀಯ ಎಂದು ವಿವೇಕಾನಂದ ಸಾಲಿನ್ಸ್ ತಿಳಿಸಿದ್ದಾರೆ.ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೂಡಿಕೆದಾರರ ಸಭೆಯಲ್ಲಿ ಐಟಿ ಹಾಗೂ ಇತರ ಕೈಗಾರಿಕೆಗಳಿಗೆ ಅಗತ್ಯವಾದ ಬೃಹತ್ ಮೂಲಸೌಕರ್ಯ ಒದಗಿಸುವುದಾಗಿ ನೀಡಿದ ಭರವಸೆಯೂ ಈಡೇರಿಲ್ಲ ಎಂದು…

Read More

ನೇತ್ರಾವತಿ ನದಿ ತೀರದಲ್ಲಿ ಅಪರಿಚಿತ ಪುರುಷನ ಶವ ಪತ್ತೆ

ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ, ಮೃತ ವ್ಯಕ್ತಿ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಬಿಳಿ ಬಣ್ಣದ ತುಂಬು ತೋಳಿನ ಅಂಗಿಯನ್ನು ಧರಿಸಿದ್ದಾನೆ. ಅಲ್ಲದೆ, ಅವನ ಬಲ ಕೈಯಲ್ಲಿ ಕೆಂಪು ದಾರ ಕಟ್ಟಿರುವುದು ಗುರುತು ಲಕ್ಷಣವಾಗಿ ಕಂಡುಬಂದಿದೆ. ಘಟನೆಯ ಮಾಹಿತಿ ಪಡೆದ ತಕ್ಷಣ ಬಂಟ್ವಾಳ…

Read More

ಪುತ್ತೂರಿನಲ್ಲಿ ವಿಭಿನ್ನವಾಗಿ ನೆರವೇರಿದ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆಯನ್ನು ಇಂದು ಅತ್ಯಂತ ವಿನೂತನವಾಗಿ ಆಚರಿಸಲಾಯಿತು. ಪುತ್ತೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕರಿಗೆ ನಡೆದ ಕನ್ನಡ ರಸಪ್ರಶ್ನೆ ಹಾಗೂ ಪುಸ್ತಕ ಬಹುಮಾನ ಕಾರ್ಯಕ್ರಮವು ಜನಸಾಮಾನ್ಯರ ಸಾಹಿತ್ಯ ಪ್ರೇಮಕ್ಕೆ ಸಾಕ್ಷಿಯಾಯಿತು. ಕಾರ್ಯಕ್ರಮವನ್ನು ಪುತ್ತೂರು ಕೆ.ಎಸ್.ಆರ್.ಟಿ.ಸಿ ಘಟಕದ ಮೇಲ್ವಿಚಾರಕರಾದ ಶ್ರೀ ಪೂರ್ಣೇಶ್ ಅವರು ಉದ್ಘಾಟಿಸಿ, ಪರಿಷತ್ತಿನ ಈ ವಿಭಿನ್ನ ಪ್ರಯತ್ನಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ…

Read More

ವಕ್ವಾಡಿಯಲ್ಲಿ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆ

ಉಡುಪಿ : ಕುಂದಾಪುರ ತಾಲೂಕಿನ ವಕ್ವಾಡಿ ದ್ಯಾಗಳಮನೆಯ ಆವರಣದ ಹೊರಭಾಗದಲ್ಲಿ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆಯಾಗಿದ್ದು, ಇದು ಸುಮಾರು 9ರಿಂದ 10ನೇ ಶತಮಾನದ ಆಳುಪರ ಕಾಲದ ಶಿಲ್ಪವಾಗಿರಬಹುದೆಂದು ಪುರಾತತ್ತ್ವ ಸಂಶೋಧಕ ಹಾಗೂ ಉಡುಪಿಯ ಆದಿಮ ಕಲಾ ಟ್ರಸ್ಟ್‌ನ ಸ್ಥಾಪಕ ಸಂಚಾಲಕ ಪ್ರೊ. ಟಿ. ಮುರುಗೇಶಿ ತಿಳಿಸಿದ್ದಾರೆ. ವಕ್ವಾಡಿಯ ಕವಿತಾ ಕುಲಾಲ್ ನೀಡಿದ ಮಾಹಿತಿಯ ಆಧಾರದಲ್ಲಿ ಆದಿಮ ಕಲಾ ಟ್ರಸ್ಟ್ ವತಿಯಿಂದ ನಡೆಸಿದ ಪುರಾತತ್ತ್ವ ಅನ್ವೇಷಣೆಯ ವೇಳೆ ಈ ವೀರಗಲ್ಲು ಪತ್ತೆಯಾಗಿದೆ. ಸುಮಾರು ನಾಲ್ಕು ಅಡಿ ಎತ್ತರದ…

Read More

ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರು ಬರೆದಿರುವ ‘ವಿಂಚ್ಣಾರ್ ಕಾಣಿಯೊ’ ಪುಸ್ತಕದ ಲೋಕಾರ್ಪಣೆ ಸಮಾರಂಭವು 2026ರ ಮೇ 10, ಭಾನುವಾರ ಸಂಜೆ 5:00 ಗಂಟೆಗೆ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಸಹೋದಯ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಮತ್ತು ಕೊಂಕಣಿ ಸಲಹಾ ಸಮಿತಿ, ಸಾಹಿತ್ಯ ಅಕಾಡೆಮಿ, ಹೊಸ ದೆಹಲಿಯ ಸಂಚಾಲಕರಾದ ಶ್ರೀ ಮೆಲ್ವಿನ್ ರೊಡ್ರಿಗಸ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕೃತಿಯು ‘ಮೈಕಲ್…

Read More

ಗುರುಪುರ ನೀರಿನ ಸಮಸ್ಯೆ ತುರ್ತು ಪರಿಹಾರಕ್ಕೆ ಶಾಸಕ ಭರತ್ ಶೆಟ್ಟಿ ಸೂಚನೆ

ಮಂಗಳೂರು: ಗುರುಪುರ–ಕೈಕಂಬ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಉಂಟಾದ ಕುಡಿಯುವ ನೀರಿನ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸುವಂತೆ ಶಾಸಕ ಭರತ್ ಶೆಟ್ಟಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ವ್ಯಾಪ್ತಿಗೆ ಪ್ರತ್ಯೇಕ ಸಭೆ ಕರೆಯುವಂತೆ ಅವರು ನಿರ್ದೇಶಿಸಿದರು. ಮಂಗಳವಾರ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗುರುಪುರ ಭಾಗದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ನೀರಿನ ಪೈಪ್ ಅಳವಡಿಕೆಗೆ ಅಗತ್ಯ ಯುಟಿಲಿಟಿ ವ್ಯವಸ್ಥೆ ಮಾಡದ ಕಾರಣ…

Read More

ಉಡುಪಿಯಲ್ಲಿ ಕಾಡುಬೆಕ್ಕಿನ ರಕ್ಷಣೆ – ಅರಣ್ಯ ಇಲಾಖೆಗೆ ಹಸ್ತಾಂತರ

ಉಡುಪಿ: ನಗರದ ಕವಿ ಮುದಣ್ಣ ಮಾರ್ಗದಲ್ಲಿರುವ ವಾಣಿಜ್ಯ ಸಂಕೀರ್ಣವೊಂದರಲ್ಲಿ ಕಾಡುಬೆಕ್ಕು ಅಸಹಾಯಕ ಸ್ಥಿತಿಯನ್ನು ಎದುರಿಸುತಿತ್ತು. ಮಾಹಿತಿ ಪಡೆದ ಸಮಾಜಸೇವಕ ನಿತ್ಯಾನಂದ ಒಳಕಾಡುವರು, ಸ್ಥಳಕ್ಕೆ ಹೋಗಿ ನಗರ ವಲಯದಲ್ಲಿ ಬದುಕಲು ಅಸಹಾಯಕತೆ ಎದುರಿಸುತ್ತಿದ್ದ ಕಾಡುಬೆಕ್ಕನ್ನು ವಶಕ್ಕೆ ಪಡೆದರು. ಬಳಿಕ ಆಹಾರ ಉಪಚಾರ ನೆಡೆಸಿ ಅರಣ್ಯ ಇಲಾಖೆಯ ಬೀಟ್ ಫಾರೆಸ್ಟ್ ದೇವರಾಜ್ ಪಾಣ ಅವರಿಗೆ ಹಸ್ತಾಂತರಿಸಿದ್ದಾರೆ. ಇಲಾಖೆಯಿಂದ ಅರಣ್ಯ ವಲಯಕ್ಕೆ ಬಿಡುಗಡೆ ಮಾಡಲಾಗಿದೆ.

Read More

ಮಕ್ಕಳೊಂದಿಗೆ ಪ್ರಯಾಣಿಸಿದ ಮಹಿಳೆಗೆ ಸಂಕಷ್ಟ – ಬಸ್ ಸಿಬ್ಬಂದಿ ವಿರುದ್ಧ ದೂರು

ಮಂಗಳೂರು:ಬಸ್ ಪ್ರಯಾಣದ ವೇಳೆ ತಮಗೆ ಸಂಭವಿಸಿದ ಅನುಭವವನ್ನು ಹಂಚಿಕೊಂಡಿರುವ ಮಹಿಳೆಯೊಬ್ಬರು, ಸಾರಿಗೆ ವ್ಯವಸ್ಥೆಯ ಮೇಲಿನ ನಿರ್ಲಕ್ಷ್ಯ ಮತ್ತು ಪ್ರಯಾಣಿಕರ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದ್ದಾರೆ. ಕಾರ್ಕಳ ಮೂಲದ ರಮಿತಾ ಸೂರ್ಯವಂಶಿ ಎಂಬವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು, ತಾವು ಎದುರಿಸಿದ ತೊಂದರೆಗಳನ್ನು ವಿವರಿಸಿದ್ದಾರೆ. ಅವರು ನೀಡಿದ ಮಾಹಿತಿಯಂತೆ, ಬೆಂಗಳೂರುದಿಂದ ಪುತ್ತೂರಿಗೆ ಪ್ರಯಾಣಿಸಲು ಖಾಸಗಿ ಬಸ್‌ನ್ನು ಬುಕ್ ಮಾಡಿದ್ದರು. ಪ್ರಯಾಣದ ದಿನ ಸಂಜೆ, ತಾವು ಹತ್ತಬೇಕಿದ್ದ ಬಸ್ ಕೆಟ್ಟು ಹೋಗಿದೆ ಎಂದು ಕರೆ ಬಂದಿದ್ದು, ಮಜೇಸ್ಟಿಕ್‌ನಿಂದ ಮತ್ತೊಂದು…

Read More

ಕರಾವಳಿಯಲ್ಲಿ ಮೇ 6ರಿಂದ ಗುಡುಗು-ಮಳೆ ಸಾಧ್ಯತೆ – ಹವಾಮಾನ ಇಲಾಖೆ ಎಚ್ಚರಿಕೆ

ಮಂಗಳೂರು :ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಬಿರುಗಾಳಿ ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಕರ್ನಾಟಕದಲ್ಲೂ ಗುಡುಗು ಸಹಿತ…

Read More
error: Content is protected !!