Avatar

NAMMA MEDIA 24X7

ಗ್ಯಾಸ್ ದರ ಏರಿಕೆ ಹೋಟೆಲ್ ಉದ್ಯಮಕ್ಕೆ ಆಘಾತ: ಡಾ. ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏಕಾಏಕಿಯಾಗಿ ಇಂದು ಬರೋಬ್ಬರಿ 993ರೂ. ಹೆಚ್ಚಳವಾಗಿದೆ. ಇದರಿಂದ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮಿಗಳಿಗೆ ದೊಡ್ಡ ಆರ್ಥಿಕ ಹೊರೆಯಾಗಲಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳದಿಂದ ಹೊರಗಿನ ಆಹಾರ ಪದಾರ್ಥಗಳ ಬೆಲೆ ಏರಿಕೆಯ ಭೀತಿ ಎದುರಾಗಿದೆ. ಎಲ್ ಪಿಜಿ ದರ ಏರಿಕೆ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಹೊಟೇಲ್ ಮಾಲಕರ ಸಂಘದ ರಾಜ್ಯ ಉಪಾಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು, ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ದರ…

Read More

ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ: ನಟಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಿಸಿದ ಉಡುಪಿ ಕೋರ್ಟ್

ಉಡುಪಿ: ಇತ್ತೀಚಿಗೆ ಕಾರ್ಕಳದಲ್ಲಿ ಸಂಚಲನ ಉಂಟುಮಾಡಿದ್ದ ಉದ್ಯಮಿ ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣದಲ್ಲಿ ನಟಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆಯಾಗಿದೆ‌. ಸುದೀಪ್‌ ಶೆಟ್ಟಿ ಆತ್ಮಹತ್ಯೆ ಸಂಬಂಧ ಪೊಲೀಸ್‌ ವಶದಲ್ಲಿದ್ದ ಆತನ ಪತ್ನಿ ಸೌಮ್ಯ ಶೆಟ್ಟಿಗೆ ಉಡುಪಿ ಸೆಶನ್ಸ್‌ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಮಾ. 22ರಂದು ಸುದೀಪ್ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಸೌಮ್ಯ ಶೆಟ್ಟಿಯೇ ಕಾರಣ ಎಂದು ಸುದೀಪ್‌ ತಂದೆ ದಾಮೋದರ್ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಸೌಮ್ಯ ಶೆಟ್ಟಿಯನ್ನು ಎ….

Read More

ಮೇ ದಿನದ ಆಶಯವನ್ನು ಬುಡಮೇಲುಗೊಳಿಸಿದ ಜನವಿರೋಧಿ ಕಾರ್ಮಿಕ ಸಂಹಿತೆಗಳು – ಸುನಿಲ್ ಕುಮಾರ್ ಬಜಾಲ್

ಮಂಗಳೂರು: 8 ಗಂಟೆಯ ದುಡಿಮೆ,8 ಗಂಟೆಯ ನಿದ್ರೆ,8 ಗಂಟೆಯ ವಿಶ್ರಾಂತಿಗಾಗಿ ಮೂಡಿ ಬಂದಿರುವ ಮೇ ದಿನಾಚರಣೆಗೆ ನೂರಾರು ವರ್ಷಗಳ ಇತಿಹಾಸವಿದ್ದು, ಜಗತ್ತಿನಾದ್ಯಂತ ಮಾನವ ಜನಕೋಟಿಗಳು ಒಂದಾಗಿ ಆಚರಿಸುವ ಏಕೈಕ ದಿನವಾಗಿದೆ ಮೇ ದಿನ.ಅಂತಹ ಮೇ ದಿನದ ಆಶಯವನ್ನು ಬುಡಮೇಲುಗೊಳಿಸಿ ದಿನದ ದುಡಿಮೆಯನ್ನು 12 ಗಂಟೆಗೆ ಏರಿಸುವ ಮೂಲಕ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಜಾರಿಗೊಳಿಸಿದ ನರೇಂದ್ರ ಮೋದಿ ಸರಕಾರದ ವಿರುದ್ಧ ಸಮರಶೀಲ ಹೋರಾಟವನ್ನು ನಡೆಸಲು ಕಾರ್ಮಿಕ ವರ್ಗ ಸಜ್ಜಾಗಬೇಕೆಂದು CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್…

Read More

ಕನಿಲ ಶ್ರೀ ಭಗವತಿ ಕ್ಷೇತ್ರಕ್ಕೆ ಅಕ್ಷಯ ಪಾತ್ರೆ ಸಮರ್ಪಣೆ

ಮಂಜೇಶ್ವರ: ಕನಿಲ ಶ್ರೀ ಭಗವತಿ ಕ್ಷೇತ್ರದ ವಾರ್ಷಿಕೋತ್ಸವ ಜಾತ್ರೆಯ ಅಂಗವಾಗಿ ಮಚ್ಚಾಂಬಾಡಿ ಪಾವೂರು ವಿಭಾಗದ ವತಿಯಿಂದ ಕ್ಷೇತ್ರಕ್ಕೆ ಅಕ್ಷಯ ಪಾತ್ರೆ (ಕೊಪ್ಪರಿಗೆ) ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಗುರಿಕಾರರಾದ ಪುರುಷೋತ್ತಮ ಗುರಿಕಾರ, ಪ್ರಸಾದ್ ಗುರಿಕಾರ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಗಣೇಶ್ ಪಾವೂರು, ಪಾವೂರು ವಿಭಾಗದ ಅಧ್ಯಕ್ಷ ಮನೋಜ್ ಕೊಪ್ಪಳ ಉಪಸ್ಥಿತರಿದ್ದರು. ಹಾಗೂ ಜಯರಾಜ್ ಬಜಾಲ್, ಶಿವಕುಮಾರ್ ಬಳ್ಳೂರು, ಸುರೇಶ್ ಬೋಲ್ಯಾಂಗೋಡಿ, ದಿವಾಕರ ಚೌಕಿ, ಸುಧಾಮಣಿ ಅರಿಬೈಲ್, ಮಲ್ಲಿಕಾ ಬೇಕರಿ, ಸರಿತಾ ಕುಂಡಾಪು, ಲಲಿತಾ ತಾವುಡ್ಗೋಳಿ, ಚಿರಶ್ರೀ ಬೇಕರಿ,…

Read More

ಕಾಸರಗೋಡು ಕನ್ನಡ ಗ್ರಾಮದ ಕಾಸರಗೋಡು ಗೋ-ಕುಟೀರದ 2 ನೇ ಹಂತದ ಕಾಮಗಾರಿ 5 ತಿಂಗಳಲ್ಲಿ ಪೂರ್ಣ

ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ. ),ಕಾಸರಗೋಡು ಇದರ 36ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಸರಗೋಡು ಗೋ-ಕುಟೀರದ ಕಾಮಗಾರಿಯು ಮತ್ತೊಂದು ಮಹತ್ವದ ಹಂತಕ್ಕೆ ತಲುಪಿರುತ್ತದೆ.ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರ 60ನೇ ಜನ್ಮ ವರ್ಷಾಚರಣೆಯ ನೆನಪಿಗಾಗಿ ಶಾಶ್ವತವಾದ ಕಾಸರಗೋಡು ಗೋ-ಕುಟೀರದ ನಿರ್ಮಾಣದ ಮೂಲಕ ಸಾರ್ಥಕ ಸೇವೆಯನ್ನು ಗುರುತಿಸಿಕೊಳ್ಳುವುದಕ್ಕಾಗಿ 2025 ನವಂಬರ್ 4 ರಂದು ಕಾಸರಗೋಡು…

Read More

ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ: ಕಾರ್ಮಿಕರಿಗೆ ಸನ್ಮಾನ, ಸ್ಮಾರ್ಟ್ ಕಾರ್ಡ್ ವಿತರಣೆ

ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ರವರ ನೇತೃತ್ವದಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಪರಿಷತ್‌, ಬಸ್ ನೌಕರರ ಸಂಘ ಹಾಗೂ ಆಟೋ ರಿಕ್ಷಾ ಚಾಲಕ-ಮಾಲೀಕರ ಸಂಘದ ವತಿಯಿಂದ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಮಂಗಳೂರಿನ ಹಂಪನಕಟ್ಟೆಯ ತಾಜ್ ಮಹಲ್ ಎದುರಿನ ರಿಕ್ಷಾ ನಿಲ್ದಾಣದ ಬಳಿ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಮಿಕ ರಂಗದಲ್ಲಿ ವಿಶೇಷ ಸೇವೆ ಸಲ್ಲಿಸಿದ ವಿವಿಧ ಕ್ಷೇತ್ರಗಳ ಆರು ಮಂದಿಯನ್ನು ಸನ್ಮಾನಿಸಲಾಯಿತು. ಅಲ್ಲದೆ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂದರ್ಭದಲ್ಲಿ ಧೈರ್ಯದಿಂದ ಸೇವೆ…

Read More

ಸಿಎಂ ಬದಲಾವಣೆ ಚರ್ಚೆಯಲ್ಲಿ ಅಭಿವೃದ್ಧಿ ಕಡೆಗಣನೆ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಚರ್ಚೆಗಳು ಜೋರಾಗಿದ್ದರೂ ಅಭಿವೃದ್ಧಿ ವಿಷಯಗಳು ಕಡೆಗಣನೆಗೊಳ್ಳುತ್ತಿವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಹಾಗೂ ಜಿ. ಪರಮೇಶ್ವರ ನಡುವೆ ಪೈಪೋಟಿ ನಡೆಯುತ್ತಿದೆ ಎಂದು ಆರೋಪಿಸಿದರು. ಈ ಹಿನ್ನೆಲೆ ನಾಯಕರು ದೆಹಲಿಗೆ ತೆರಳುತ್ತಿದ್ದಾರೆ. ಆದರೆ ಜನರ ಸಮಸ್ಯೆಗಳತ್ತ ಸರ್ಕಾರ ಕಿವಿಗೊಡುತ್ತಿಲ್ಲ ಎಂದು ಟೀಕಿಸಿದರು. ಕ್ಯಾಬಿನೆಟ್‌ನಲ್ಲಿ…

Read More

ಮಂಗಳೂರು: ಕುದ್ರೋಳಿ ಕ್ಷೇತ್ರಕ್ಕೆ ನೂತನ ಆಡಳಿತ ಸಮಿತಿ ಆಯ್ಕೆ

ಮಂಗಳೂರು : ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ 2026-27ನೇ ಸಾಲಿನ ಆಡಳಿತ ಸಮಿತಿಗೆ ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.) ವತಿಯಿಂದ ನೂತನ ಪದಾಧಿಕಾರಿಗಳನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಕಾರ್ಯದರ್ಶಿ ರವಿಶಂಕರ್ ಮಿಜಾರ್ ತಿಳಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2025ರ ಜೂನ್ 20ರಂದು ನಡೆದ ಅನಧಿಕೃತ ಸಭೆ ವಿರುದ್ಧ ಕಾನೂನು ಹೋರಾಟ ನಡೆಸಲಾಗಿದ್ದು, ಅಧ್ಯಕ್ಷರ ಅನುಮತಿ ಹಾಗೂ ಅಗತ್ಯ ಬಹುಮತವಿಲ್ಲದೆ ನಡೆದ ಸಭೆ ಅಸಂವಿಧಾನಿಕವಾಗಿತ್ತು ಎಂದು ಹೇಳಿದರು. ಈ…

Read More

ಕಡಬದಲ್ಲಿ ತ್ಯಾಜ್ಯ ಅವ್ಯವಸ್ಥೆ ವಿರುದ್ಧ ಜನರ ಆಕ್ರೋಶ!

ಕಡಬ: ಕೋಡಿಂಬಾಳ ಗ್ರಾಮದ ಕಕ್ಕೆತ್ತಿಮಾರ್ ನಲ್ಲಿರುವ ಕಡಬ ಪಟ್ಟಣ ಪಂಚಾಯತ್‌ನ ಘನ ತ್ಯಾಜ್ಯ ವಿಲೇವಾರಿ ಘಟಕದ ಅವ್ಯವಸ್ಥೆಯ ವಿರುದ್ಧ ಆಕ್ರೋಶಗೊಂಡಿರುವ ಸ್ಥಳೀಯ ಜನರು ಕೂಡಲೇ ಘಟಕದಲ್ಲಿ ರಾಶಿ ಬಿದ್ದು ಕೊಳೆತು ನಾರುತ್ತಿರುವ ತ್ಯಾಜ್ಯವನ್ನು ವಿಲೇವಾರಿ ಮಾಡಬೇಕು ಎಂದು ಆಗ್ರಹಿಸಿ ತ್ಯಾಜ್ಯ ಸಾಗಾಟ ವಾಹನವನ್ನು ತಡೆದು ಪ್ರತಿಭಟಿಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಕೊಳೆತು ನಾರುತ್ತಿರುವ ತ್ಯಾಜ್ಯ ಘಟಕ ಪ್ರತಿಭಟನೆಯ ವೇಳೆ ಮಾತನಾಡಿದ ಕಡಬ ಗ್ರಾ.ಪಂ. ಮಾಜಿ ಅಧ್ಯಕ್ಷ ನಾರಾಯಣ ಪೂಜಾರಿ ಪಾಲಪ್ಪೆ ಅವರು ಪಟ್ಟಣ ಪಂಚಾಯತ್‌ನ ಅಸಮರ್ಪಕ…

Read More

ಮಣಿಪಾಲ: ಮಹಿಳೆಯ ಕೊಲೆಗೆ ಯತ್ನ- ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ ನಡೆದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಬೆಳ್ತಂಗಡಿ ನಿವಾಸಿ ಮಿಥುನ್ ಹಾಗೂ ನಾಗೇಶ್ ಪೂಜಾರಿ ಶಿಕ್ಷೆಗೆ ಗುರಿಯಾದ ಆರೋಪಿಗಳು.ಘಟನೆ ವಿವರ: 2022ರ ಫೆಬ್ರವರಿ 18ರಂದು ಮಂಚಿಕುಮೇರಿ ನಿವಾಸಿ ರಮಾನಾಥ ರೈ ಅವರ ಪತ್ನಿ ಸುಮತಿ ಮನೆಯಲ್ಲಿ ಒಬ್ಬರೇ ಇದ್ದಾಗ ಅವರ ಅಕ್ಕನ ಮಗ ಮಿಥುನ್ ಹಾಗೂ ಅವನ ಸ್ನೇಹಿತ…

Read More
error: Content is protected !!