ಕೊಳ್ನಾಡು ಕುಳಾಲು ಆರೋಗ್ಯ ಉಪಕೇಂದ್ರಕ್ಕೆ ₹65 ಲಕ್ಷ ನೂತನ ಕಟ್ಟಡ ಮಂಜೂರು
ಬಂಟ್ವಾಳ: ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಶಿಫಾರಸ್ಸಿನಲ್ಲಿ ಕೊಳ್ನಾಡು ಕುಳಾಲು ಆರೋಗ್ಯ ಉಪಕೇಂದ್ರಕ್ಕೆ(ಆರೋಗ್ಯ ಮತ್ತು ಕ್ಷೇಮಕೇಂದ್ರ) ₹65 ಲಕ್ಷದ ನೂತನ ಕಟ್ಟಡ ಮಂಜೂರು ಶ್ರೀ.ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ಬೇಡಿಕೆಗೆ ಸ್ಪಂದಿಸಿ ಕೊಳ್ನಾಡು ಗ್ರಾಮಕ್ಕೆ ಆರೋಗ್ಯ ಸೇವೆಗಳ ಬಲವರ್ಧನೆಗೆ ಮಹತ್ವದ ಹೆಜ್ಜೆಯಾಗಿ ಪ್ರಾಥಮಿಕ ಆರೋಗ್ಯ ಉಪಕೇಂದ್ರದ ನೂತನ ಕಟ್ಟಡಕ್ಕೆ ₹65 ಲಕ್ಷ ಮಂಜೂರಾಗಿದೆ. ವಿಧಾನಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರ ಶಿಪಾರಸ್ಸಿನ ಮೇರೆಗೆ ಈ ಯೋಜನೆಗೆ ವೇಗ ಸಿಕ್ಕಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ನಿರ್ಮಾಣ…