ಎಂ. ಮೋಹನ್ ಆಳ್ವರಿಗೆ ಗೌರವ ಡಾಕ್ಟರೇಟ್ ಘೋಷಣೆ
ಬೆಂಗಳೂರು: ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಮಹತ್ವದ ಕೊಡುಗೆ ನೀಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ. ಮೋಹನ್ ಆಳ್ವ ಅವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಿಸಿದೆ. ಏಪ್ರಿಲ್ 4ರಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿರುವ ವಿಶ್ವವಿದ್ಯಾಲಯದ 5ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಗುತ್ತದೆ. ಎಂ. ಮೋಹನ್ ಆಳ್ವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷರಾಗಿದ್ದು, ಕರಾವಳಿ ಕರ್ನಾಟಕದ ಗ್ರಾಮೀಣ ಪ್ರದೇಶಗಳಿಗೆ ಗುಣಮಟ್ಟದ…