ನಿಯಂತ್ರಣ ತಪ್ಪಿದ ಓಮ್ನಿ ಕಾರು ಪಾದಚಾರಿಗಳ ಮೇಲೆ ಪಲ್ಟಿ – ಮಹಿಳೆ ಗಂಭೀರ ಗಾಯ
ಮಂಗಳೂರು:ನಿಯಂತ್ರಣ ತಪ್ಪಿದ ಕಾರೊಂದು ಪಾದಚಾರಿಗಳ ಮೇಲೆ ಪಲ್ಟಿಯಾದ ಘಟನೆ ನಡೆದಿದೆ.ಅತಿ ವೇಗವಾಗಿ ಬಂದ ಓಮ್ನಿ ಕಾರೊಂದು ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಡಿಕ್ಕಿ ಹೊಡೆದ ಘಟನೆ ಕೊಲ್ಪೆದಬೈಲು ಎಂಬಲ್ಲಿ ಆದಿತ್ಯವಾರ ಮಧ್ಯಾಹ್ನ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಮೂವರು ಪವಾಡಸದೃಶವಾಗಿ ಪಾರಾಗಿದ್ದಾರೆ. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ತಿರುವಿನಲ್ಲಿ ವೇಗವಾಗಿ ಬಂದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಮಕ್ಕಳಿಬ್ಬರು…