ಕುವೈತ್ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಭಾರತೀಯನೊಬ್ಬ ಬಲಿ
ಕುವೈತ್ ಸಿಟಿ, ಜೂನ್ 4: ಇರಾನ್ ಮತ್ತು ಅಮೆರಿಕ ನಡುವಿನ ಮಿಲಿಟರಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆಯೇ, ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇಂದು ಇರಾನ್ ಡ್ರೋನ್ ದಾಳಿ ನಡೆಸಿದೆ. ದಾಳಿಯಲ್ಲಿ ಭಾರತೀಯ ನಾಗರಿಕನೊಬ್ಬ ಮೃತಪಟ್ಟಿರುವುದಾಗಿ ಕುವೈತ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಣೆ ನೀಡಿರುವ ರಾಯಭಾರ ಕಚೇರಿ, ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ದಾಳಿಯಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವುದನ್ನು ದೃಢಪಡಿಸಿದೆ. ಮೃತರ ಕುಟುಂಬದೊಂದಿಗೆ ಸಂಪರ್ಕ ಸಾಧಿಸಲಾಗಿದ್ದು,…