Avatar

NAMMA MEDIA 24X7

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿ: ರಿತಬ್ರತಾ ಬ್ಯಾನರ್ಜಿ ಪ್ರತಿಪಕ್ಷ ನಾಯಕರಾಗಿ ಆಯ್ಕೆ

ಕೊಲ್ಕತ್ತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಅನಿರೀಕ್ಷಿತ ಬೆಳವಣಿಗೆಯೊಂದು ನಡೆದಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಬಂಡಾಯದ ಬಿರುಗಾಳಿ ಎದ್ದಿದೆ. ಪಕ್ಷದಿಂದ ಈ ಹಿಂದೆ ಉಚ್ಚಾಟನೆಗೊಂಡಿದ್ದ ಹಿರಿಯ ನಾಯಕ ರಿತಬ್ರತಾ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳ ವಿಧಾನಸಭೆಯ ಹೊಸ ಪ್ರತಿಪಕ್ಷ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಟಿಎಂಸಿ ಪಕ್ಷದಲ್ಲಿ ಉಂಟಾದ ಆಂತರಿಕ ಭಿನ್ನಾಭಿಪ್ರಾಯಗಳ ಪರಿಣಾಮವಾಗಿ ಪಕ್ಷವು ಎರಡು ಬಣಗಳಾಗಿ ವಿಭಜನೆಯಾಗಿರುವುದಾಗಿ ವರದಿಯಾಗಿದೆ. ಈ ಬೆಳವಣಿಗೆ ಪಕ್ಷದ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ರಾಜಕೀಯವಾಗಿ ದೊಡ್ಡ…

Read More

ಅನಂತಪುರ ಕೈಗಾರಿಕಾ ಪಾರ್ಕ್ ದುರ್ವಾಸನೆ ವಿರುದ್ಧ ಜನರ ಆಕ್ರೋಶ: ಜೂನ್ 8ರಂದು ಪ್ರತಿಭಟನೆ

ಕುಂಬಳೆ, ಜೂನ್ 4: ಅನಂತಪುರ ಕೈಗಾರಿಕಾ ಪಾರ್ಕ್‌ನ ಕಾರ್ಖಾನೆಗಳಿಂದ ಹೊರಹೊಮ್ಮುತ್ತಿರುವ ದುರ್ವಾಸನೆಯನ್ನು ತಕ್ಷಣ ನಿಯಂತ್ರಿಸಲು ಸಂಬಂಧಿತ ಅಧಿಕಾರಿಗಳು ಮಧ್ಯಪ್ರವೇಶಿಸಬೇಕು ಹಾಗೂ ಮಾನವ ಜೀವ ಮತ್ತು ಆಸ್ತಿಗೆ ಅಪಾಯಕಾರಿಯಾಗಿರುವ ಕೈಗಾರಿಕೆಗಳನ್ನು ಮುಚ್ಚಬೇಕು ಎಂದು ಹೋರಾಟ ಸಮಿತಿ ಒತ್ತಾಯಿಸಿದೆ. ಕುಂಬಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಪದಾಧಿಕಾರಿಗಳು, ಅನಂತಪುರ ಕೈಗಾರಿಕಾ ಪಾರ್ಕ್‌ನಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯದಿಂದ ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು. ಹೊಸದಾಗಿ ಆರಂಭಗೊಳ್ಳಲಿರುವ ಕೈಗಾರಿಕೆಗಳಿಗೆ ಅನುಮತಿ ನೀಡಬಾರದು. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಾಲಿನ್ಯಯುಕ್ತ…

Read More

ಕಡಬದಲ್ಲಿ ಸಂಚಾರಿ ನ್ಯಾಯಾಲಯಕ್ಕೆ ಚಾಲನೆ: ಶೀಘ್ರ ನ್ಯಾಯದಾನಕ್ಕೆ ನ್ಯಾಯಾಧೀಶ ಬಸವರಾಜ್ ಕರೆ

ತಾಲೂಕು ಮಟ್ಟದಲ್ಲಿ ನ್ಯಾಯಾಲಯ ಗಳನ್ನು ಪ್ರಾರಂಭಿಸಿ ಶೀಘ್ರ ನ್ಯಾಯದಾನ ನೀಡಬೇಕು ಎನ್ನುವುದು ನ್ಯಾಯಾಂಗ ವ್ಯವಸ್ಥೆಯ ಆಶಯವಾಗಿದೆ. ಈ ನಿಟ್ಟಿನಲ್ಲಿ ಕಕ್ಷಿದಾರರಿಗೆ ಶೀಘ್ರ ನ್ಯಾಯ ದಾನ ಒದಗಿಸಲು ಎಲ್ಲ ವಕೀಲರು ಹಾಗೂ ನಾವು ಶ್ರಮಿಸುಬೇಕಾಗಿದೆ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾ ಲಯದ ನ್ಯಾಯಾಧೀಶ ಬಸವರಾಜ್ ಹೇಳಿದರು. ಕಡಬ ಗಣೇಶ್ ಬಿಲ್ಡಿಂಗ್‌ನಲ್ಲಿ ಪ್ರಾರಂಭವಾದ ಪುತ್ತೂರು ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ಕಡಬ ಸಂಚಾರಿ ನ್ಯಾಯಾಲಯವನ್ನು ಅವರು ಮಂಗಳವಾರ ಉದ್ಘಾಟಿಸಿ ಮಾತ ನಾಡಿದರು. ಗ್ರಾಮೀಣ ಪ್ರದೇಶವಾದ ಕಡಬ ದಿಂದ…

Read More

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಹತ್ಯೆಗೈದ ಪತಿ; 13 ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಬಳ್ಳಾರಿ, ಜೂನ್ 4: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಭೀಕರವಾಗಿ ಹತ್ಯೆಗೈದ ಘಟನೆ ಬಳ್ಳಾರಿ ನಗರದ ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಮೃತ ಮಹಿಳೆಯನ್ನು ಆಫ್ರೀನ್ ಬಾನು ಎಂದು ಗುರುತಿಸಲಾಗಿದ್ದು, ಆರೋಪಿ ಪತಿ ನೂರ್ ಅಹ್ಮದ್ ಎಂದು ತಿಳಿದುಬಂದಿದೆ. ಇಬ್ಬರೂ ಎರಡು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ದಂಪತಿಗೆ ಎಂಟು ತಿಂಗಳ ಗಂಡು ಮಗುವಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆಫ್ರೀನ್ ಬಾನು ತವರು ಮನೆಯಲ್ಲಿ…

Read More

ತೃತೀಯ ಲಿಂಗಿಗಳ ಬಗ್ಗೆ ಜಾಗೃತಿ: ಮಂಗಳೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ

ಮಂಗಳೂರು, ಜೂನ್ 4: ತೃತೀಯ ಲಿಂಗಿಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಂಗಳೂರಿನ ಲಾಲ್‌ಬಾಗ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ ಪ್ರದರ್ಶನ ನಡೆಯಿತು. ಡಾ. ಪಿ. ದಯಾನಂದ ಪೈ – ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು ಇದರ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಪಠ್ಯೇತರ ಚಟುವಟಿಕೆಗಳ ಅಂಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬೀದಿ ನಾಟಕದ ಮೂಲಕ ತೃತೀಯ ಲಿಂಗಿಗಳ ಹಕ್ಕುಗಳು, ಸಾಮಾಜಿಕ ಸ್ವೀಕಾರ, ಸಮಾನ ಅವಕಾಶಗಳು…

Read More

ಡಿ.ಕೆ. ಶಿವಕುಮಾರ್ ಸಿಎಂ: ಉಡುಪಿಯಲ್ಲಿ ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ಉಡುಪಿ, ಜೂನ್ 4: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ D. K. Shivakumar ಅವರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ನಗರದ ಕಿನ್ನಿಮೂಲ್ಕಿ ಸಮೀಪ ಡಿ.ಕೆ. ಶಿವಕುಮಾರ್ ಅಭಿಮಾನಿಗಳು ಪಟಾಕಿ ಸಿಡಿಸಿ, ಜೈಕಾರ ಕೂಗುವ ಮೂಲಕ ಸಂತಸ ವ್ಯಕ್ತಪಡಿಸಿದರು. ನೂತನ ಮುಖ್ಯಮಂತ್ರಿಯ ನೇತೃತ್ವಕ್ಕೆ ಬೆಂಬಲ ಸೂಚಿಸಿದ ಕಾರ್ಯಕರ್ತರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಹೆಚ್ಚಿನ…

Read More

ವಿದೇಶಿ ಪ್ರಜೆಗಳೇ ಹೆಚ್ಚು ಬಲಿ: ದೆಹಲಿ ಅಗ್ನಿ ಅವಘಡದ ಬೆಚ್ಚಿಬೀಳಿಸುವ ವಿವರ

ರಾಷ್ಟ್ರ ರಾಜಧಾನಿ ದೆಹಲಿಯ ದಕ್ಷಿಣ ಭಾಗದ ಮಾಳವೀಯ ನಗರದಲ್ಲಿರುವ ಹೌಜ್ ರಾಣಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 21 ಮಂದಿ ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಮೃತರಲ್ಲಿ ಬಹುತೇಕರು ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಆಗಮಿಸಿದ್ದ ವಿದೇಶಿ ಪ್ರಜೆಗಳು ಎನ್ನಲಾಗಿದೆ. ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಮಾಹಿತಿ ಪ್ರಕಾರ, ಬೆಳಿಗ್ಗೆ ಸುಮಾರು 8.50ರ ವೇಳೆಗೆ ಐದು ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿದ್ದ ಮಿಕಾಸಾ ಇನ್ ಹಾಗೂ ಫ್ಲರಿಶ್ ಸ್ಟೇ ಹೋಟೆಲ್‌ಗಳ ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಹೋಟೆಲ್‌ನ…

Read More

ಡಿ.ಕೆ. ಶಿವಕುಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿ: ಸರ್ವಧರ್ಮ ಸೌಹಾರ್ದದ ನಡುವೆ ಭವ್ಯ ಪ್ರಮಾಣವಚನ

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಇದೇ ವೇಳೆ ಡಾ. ಜಿ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ 12 ಮಂದಿ ಶಾಸಕರು ಸಚಿವರಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಸ್ವೀಕರಿಸಿ ನೂತನ ಸಚಿವ ಸಂಪುಟವನ್ನು ಸೇರ್ಪಡೆಗೊಂಡರು. ಪ್ರಮಾಣವಚನ ಸಮಾರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಹಿಮಾಚಲ…

Read More

ಜುಲೈ 4-5ರಂದು ಕಾಸರಗೋಡಿನಲ್ಲಿ ಹಲಸು ಮತ್ತು ಮಾವು ಮೇಳ: ವಿವಿಧ ತಳಿಗಳ ಪ್ರದರ್ಶನ, ಮಾರಾಟಕ್ಕೆ ಅವಕಾಶ

ಕಾಸರಗೋಡು, ಜೂನ್ 4: ಹಲಸು ಹಾಗೂ ಮಾವು ಪ್ರಿಯರಿಗಾಗಿ ಸಪ್ತಭಾಷಾ ಸಂಗಮ ನೆಲ ಕಾಸರಗೋಡಿನಲ್ಲಿ ಜುಲೈ 4 ಮತ್ತು 5ರಂದು ಎರಡು ದಿನಗಳ ‘ಹಲಸು ಮತ್ತು ಮಾವು ಮೇಳ’ ಆಯೋಜಿಸಲಾಗಿದೆ. ಕೋಟೆಕಣಿಯ ಜೀವಾಸ್ ಮಾನಸ ಆಡಿಟೋರಿಯಂನಲ್ಲಿ ನಡೆಯಲಿರುವ ಈ ಮೇಳದಲ್ಲಿ ಹಲಸು ಮತ್ತು ಮಾವಿನ ವಿವಿಧ ತಳಿಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದ್ದು, ಇವುಗಳಿಂದ ತಯಾರಿಸಲಾದ ವೈವಿಧ್ಯಮಯ ಆಹಾರ ಉತ್ಪನ್ನಗಳ ಪ್ರದರ್ಶನ ಪ್ರಮುಖ ಆಕರ್ಷಣೆಯಾಗಲಿದೆ. ಮೇಳದಲ್ಲಿ ಸ್ಥಳೀಯ ಕೃಷಿ ಉತ್ಪನ್ನಗಳಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ರೈತರಿಗೆ ತಮ್ಮ…

Read More

ಉದ್ಯೋಗಾವಕಾಶ : ಜೂ.6 ರಂದು ಸಂದರ್ಶನ

ಮಂಗಳೂರು:ಎಕ್ಸ್‍ಪರ್ಟ್ ಕಾಲೇಜು, ಮಂಗಳೂರು ವತಿಯಿಂದ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗೆ ನೇರ ಸಂದರ್ಶನವನ್ನು ಜೂನ್ 6 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.ಸಂದರ್ಶನದಲ್ಲಿ ಯಾವುದೇ ಪದವಿ ಹೊಂದಿರುವ ಪುರುಷ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ಭಾಗವಹಿಸಬಹುದು. ಕೆಲಸದ ಸ್ಥಳ ಎಕ್ಸ್‍ಪರ್ಟ್ ಕಾಲೇಜು, ವಳಚ್ಚಿಲ್, ಮಂಗಳೂರು.ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More
error: Content is protected !!