ಮಂಗಳೂರು: ರಾಜ್ಯ ಪೊಲೀಸ್ ಧ್ವಜ ಮತ್ತು ಕಲ್ಯಾಣ ದಿನಾಚರಣೆ – ಪೊಲೀಸ್ ಸಿಬ್ಬಂದಿಗೆ ಕರ್ತವ್ಯನಿಷ್ಠೆಗೆ ಕರೆ
ಮಂಗಳೂರು: ಮಂಗಳೂರು ನಗರ ಪೊಲೀಸ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ವಿಶೇಷ ಕಾರ್ಯಪಡೆ ಘಟಕ ಹಾಗೂ ಕೆಎಸ್‌ಆರ್‌ಪಿ 7ನೇ ಬೆಟಾಲಿಯನ್ ಮಂಗಳೂರು ಘಟಕದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಮತ್ತು ಕಲ್ಯಾಣ ದಿನಾಚರಣೆ ಕಾರ್ಯಕ್ರಮ ಗುರುವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ Sudheer Kumar Reddy ಅವರು, ಪೊಲೀಸ್ ಸಿಬ್ಬಂದಿ ಸಮಾಜದಲ್ಲಿ ಅನುಕರಣೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಗಟ್ಟುವ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದು ತಿಳಿಸಿದರು. ಘಟನೆಗಳು ಸಂಭವಿಸಿದಲ್ಲಿ ಅವುಗಳನ್ನು ಸಮರ್ಥವಾಗಿ…