ಮೆಲ್ಕಾರ್-ಮುಡಿಪು ಹೆದ್ದಾರಿಯಲ್ಲಿ ಅಪಘಾತ: ಮಹಿಳೆಗೆ ಗಂಭೀರ ಗಾಯ
ದಕ್ಷಿಣ ಕನ್ನಡ ಜಿಲ್ಲೆಯ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಪ್ರದೇಶದ ಗುಳಿಗಜ್ಜ ಕಟ್ಟೆ ಬಳಿ ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಭಾರತಿ ಎಂದು ಗುರುತಿಸಲಾಗಿದೆ. ಅವರು ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿ ರಸ್ತೆ ದಾಟಿ ಗುಳಿಗಜ್ಜ ಕಟ್ಟೆಗೆ ಹಣ ಹಾಕಲು ರಸ್ತೆ ಅಂಚಿಗೆ ತಲುಪಿದ ವೇಳೆ, ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಸಾಗುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಭಾರತಿ ಅವರನ್ನು…