ಸಂವಿಧಾನ ಆಶಯಗಳ ರಕ್ಷಣೆ ಸರ್ಕಾರಗಳ ಕರ್ತವ್ಯ – ಸಂವಿಧಾನ ವಿರೋಧಿ ನೀತಿಗಳಿಂದ ಪ್ರಜಾಪ್ರಭುತ್ವಕ್ಕೆ ಅಪಾಯ: ಹರೀಶ್ ಕುಮಾರ್
ಮಂಗಳೂರು: ಸಂವಿಧಾನ ಆಶಯಗಳಾದ ಅಭಿವ್ಯಕ್ತಿ ಸ್ವಾತಂತ್ರ್ಯ, ಸಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎತ್ತಿಹಿಡಿಯುವ ಕೆಲಸ ಸರ್ಕಾರಗಳು ಮಾಡಬೇಕು. ಸರ್ಕಾರ ಸಂವಿಧಾನ ವಿರೋಧಿ ನೀತಿ ಜಾರಿಗೆ ತಂದರೆ ಸಂವಿಧಾನದ ಮೂಲ ಆಶಯಗಳು ನಾಶವಾಗುತ್ತದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 77ನೇ ಗಣರಾಜ್ಯೋತ್ಸವ ಪ್ರಯುಕ್ತ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಪ್ರಜಾಪ್ರಭುತ್ವ ಕೇವಲ ಒಂದು ಸರ್ಕಾರವಲ್ಲ, ಅದು ಮಾನವೀಯ ಮೌಲ್ಯಗಳನ್ನು ಒಳಗೊಂಡ ಜೀವನ…