ಹಜ್ ಭವನ ನಿರ್ಮಾಣ ವಿಳಂಬಕ್ಕೆ ಎಸ್‌ಡಿಪಿಐ ಆಕ್ರೋಶ
ಹಜ್ ಭವನಕ್ಕೆ ಜಾಗವಿದ್ದರೂ, ಅನುದಾನವೂ ಲಭ್ಯವಿದ್ದರೂ ಕಾಮಗಾರಿ ವಿಳಂಬವಾಗುತ್ತಿರುವುದೇಕೆ ಎಂದು ಪ್ರಶ್ನಿಸಿರುವ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್, ಮಂಗಳೂರಿನಲ್ಲಿ ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಹಜ್ ಭವನವನ್ನು ಕೂಡಲೇ ನಿರ್ಮಿಸಬೇಕು ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯವನ್ನು ಮರುಾರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ. ನಗರದ ಪಕ್ಷದ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಹಜ್ ಯಾತ್ರಿಕರು ಎದುರಿಸುತ್ತಿರುವ ಸಮಸ್ಯೆಗಳತ್ತ ಸರ್ಕಾರದ…