ಅಮೇರಿಕನ್ ಸಾಮ್ರಾಜ್ಯಶಾಹಿಗಳ ಯುದ್ದಕೋರ ನೀತಿ ಖಂಡಿಸಿ ಹಾಗೂ ಶಾಂತಿಗಾಗಿ ಒತ್ತಾಯಿಸಿ ಪ್ರತಿಭಟನೆ
ಅಮೇರಿಕನ್ ಸಾಮ್ರಾಜ್ಯಶಾಹಿಗಳ ಯುದ್ದಕೋರ ನೀತಿಗಳನ್ನು ಖಂಡಿಸಿ, ಜಾಗತಿಕ ಮಟ್ಟದಲ್ಲಿ ಶಾಂತಿ ನೆಲೆಗೊಳ್ಳಬೇಕೆಂದು ಒತ್ತಾಯಿಸಿ ಇಂದು ಮಂಗಳೂರು ನಗರದ ಹೃದಯ ಭಾಗದಲ್ಲಿ CITU, DYFI, JMS,DHS,ಆದಿವಾಸಿ ಸಂಘಟನೆಗಳ ಜಂಟಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಅಮೇರಿಕನ್ ಸಾಮ್ರಾಜ್ಯಶಾಹಿಗಳ ಯುದ್ದದಾಹದ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಜಗತ್ತಿನೆಲ್ಲೆಡೆ ಶಾಂತಿ ನೆಲೆಗೊಳ್ಳಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು, ಅಮೇರಿಕನ್ ಸಾಮ್ರಾಜ್ಯಶಾಹಿ ಇಡೀ ಜಗತ್ತನ್ನು ತನ್ನ ನಿಯಂತ್ರಣದಲ್ಲಿಡಲು ಹರಸಾಹಸ ಪಡುತ್ತಿದೆ.ಜಗತ್ತಿನ 80…