ಸೇಡಿಯಾಪು ಜಾಗದಲ್ಲೇ 300 ಹಾಸಿಗೆಗಳ ನೂತನ ಆಸ್ಪತ್ರೆ: ಕಾವು ಹೇಮನಾಥ ಶೆಟ್ಟಿ
ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಮೆಡಿಕಲ್ ಕಾಲೇಜು ಯೋಜನೆಯ ಭಾಗವಾಗಿ ಸೇಡಿಯಾಪು ಪ್ರದೇಶದಲ್ಲಿಯೇ 300 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣವಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ. ಬಿಜೆಪಿ ನಾಯಕರು ಅನಗತ್ಯವಾಗಿ ವಿವಾದ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಆರೋಪಿಸಿದರು. ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೇಡಿಯಾಪುವಿನಲ್ಲಿರುವ 40 ಎಕರೆ ಜಾಗದಲ್ಲಿ ಮೆಡಿಕಲ್ ಕಾಲೇಜು, 300 ಹಾಸಿಗೆಗಳ ಆಸ್ಪತ್ರೆ ಹಾಗೂ ಆಯುರ್ವೇದ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದರು. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಒಂದೇ…