ಮಂಗಳೂರು ಜಂಕ್ಷನ್‌ನಲ್ಲಿ ಭರ್ಜರಿ ಕಾರ್ಯಾಚರಣೆ: 10 ಲಕ್ಷ ಮೌಲ್ಯದ 201 ಮೊಬೈಲ್ ವಶ
ಮಂಗಳೂರು: ಕೇರಳ ವಿಧಾನಸಭೆ ಚುನಾವಣೆಯ ಹಿನ್ನೆಲೆ ರೈಲುಗಳಲ್ಲಿ ತಪಾಸಣೆ ಬಿಗಿಗೊಳಿಸಿರುವ ರೈಲ್ವೇ ಪೊಲೀಸರು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು ರೂ.10 ಲಕ್ಷ ಮೌಲ್ಯದ 201 ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 9ರಂದು ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಆಗಮಿಸಿದ ಜಾಮ್‌ನಗರ–ತಿರುನೆಲ್ವೇಲಿ ಜಂಕ್ಷನ್ ಎಕ್ಸ್‌ಪ್ರೆಸ್ ರೈಲುದಲ್ಲಿ ತಪಾಸಣೆ ನಡೆಸಲಾಯಿತು. ಈ ವೇಳೆ ರೈಲಿನ ಸಾಮಾನ್ಯ ಬೋಗಿಯ ಮೇಲಿನ ಲಗೇಜ್ ರಾಕ್‌ನಲ್ಲಿ ವಾರೀಸುದಾರರು ಇಲ್ಲದ ಮೂರು ಬ್ಯಾಗ್‌ಗಳು…