ವಿಶ್ವವಿದ್ಯಾನಿಲಯ ಕಾಲೇಜು ಕ್ಯಾಂಪಸ್‌ನಲ್ಲಿ ಎಬಿವಿಪಿ ಪ್ರತಿಭಟನೆ
ಮಂಗಳೂರು: ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ಮರುಆರಂಭಿಸುವ ಬಗ್ಗೆ ರಾಜ್ಯ ಬಜೆಟ್‌ನಲ್ಲಿ ಮಾಡಿರುವ ಘೋಷಣೆಯನ್ನು ವಿವಿಧ ವಿದ್ಯಾರ್ಥಿ ಸಂಘಟನೆಗಳು ಸ್ವಾಗತಿಸಿವೆ. ಇದೇ ವೇಳೆ ವಿದ್ಯಾರ್ಥಿಗಳಿಗಾಗಿ “ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್” ಆರಂಭಿಸುವುದಾಗಿ ಸರ್ಕಾರ ಘೋಷಿಸಿರುವುದನ್ನು ಸ್ವಾಗತಿಸಿ ಎನ್.ಎಸ್.ಯು.ಐ. ವಿದ್ಯಾರ್ಥಿ ಸಂಘಟನೆ ಮಂಗಳೂರಿನಲ್ಲಿ ಸಂಭ್ರಮಾಚರಣೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜು ಕ್ಯಾಂಪಸ್‌ನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಪ್ರತಿಭಟನೆ ನಡೆಯಿತು. ಕಾಲೇಜು ಆವರಣಕ್ಕೆ ನುಗ್ಗಿ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿ…