ಪಳ್ಳಿ ಫಿಶ್ ಮೀಲ್ ವಿರುದ್ಧ ಜಿಲ್ಲಾಧಿಕಾರಿ ಸ್ಪಂದನೆ: ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ
ಕಾರ್ಕಳ: ಪಳ್ಳಿ ಗ್ರಾಮದ ಕೊಡಿಮಲೆ ಪರಿಸರದಲ್ಲಿ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿರುವ ಅನಧಿಕೃತ ಫಿಶ್ ಮೀಲ್ ಘಟಕ ನಿರ್ಮಾಣದ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸ್ಪಂದಿಸಿದ್ದು, ನಿಯಮಬಾಹಿರವಾಗಿ ಕಾಮಗಾರಿ ನಡೆಯುತ್ತಿದ್ದರೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ. ಮಾರ್ಚ್ 6ರಂದು ಸುಮಾರು 50ಕ್ಕೂ ಹೆಚ್ಚು ಗ್ರಾಮಸ್ಥರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಯವರು, “ಯಾವುದೇ ಬೃಹತ್ ಕೈಗಾರಿಕೆ ಅಥವಾ ಕಟ್ಟಡ ನಿರ್ಮಾಣಕ್ಕೆ ಸ್ಥಳೀಯ ಗ್ರಾಮ ಪಂಚಾಯತ್‌ನ ಪೂರ್ವಾನುಮತಿ…