ಬಂಟ್ವಾಳದಲ್ಲಿ ಮನೆಯೊಂದರಲ್ಲಿ ಚಿನ್ನಾಭರಣ ಕಳವು
ಬಂಟ್ವಾಳ: ಬಿ.ಸಿ.ರೋಡ್ ಸಮೀಪದ ಕೈಕುಂಜೆ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಭಾನುವಾರ ಮಧ್ಯರಾತ್ರಿ ಅವಧಿಯಲ್ಲಿ ಚಿನ್ನಾಭರಣ ಕಳವು ನಡೆದಿರುವ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳರು ಮಧ್ಯರಾತ್ರಿ ರಿಂದ ಬೆಳಗಿನ ಅವಧಿಯ ನಡುವೆ ಮನೆಯ ಹಿಂಬದಿ ಬಾಗಿಲಿನ ಚಿಲಕವನ್ನು ಯಾವುದೋ ಸಾಧನದಿಂದ ಮುರಿದು ಒಳಗೆ ಪ್ರವೇಶಿಸಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಒಟ್ಟು ಸುಮಾರು 61 ಗ್ರಾಂ ಚಿನ್ನಾಭರಣ ಕಳವಾಗಿರುವುದಾಗಿ ತಿಳಿದುಬಂದಿದೆ. ಘಟನೆ ಬೆಳಗ್ಗೆ ಮನೆಯವರಿಗೆ ತಿಳಿದುಬಂದಿದ್ದು, ಮನೆಯೆಲ್ಲ ಹುಡುಕಾಡಿದ ಬಳಿಕ ಚಿನ್ನಾಭರಣಗಳು…