Avatar

NAMMA MEDIA 24X7

“ಉಡುಪಿ ಕಂಬಳ” ರಾಜಕೀಯ ದೈವಸ್ಥಾನದ ಅಂಗಳಕ್ಕೆ: ಗುರ್ಮೆ–ಸೊರಕೆ ಆರೋಪ–ಪ್ರತ್ಯಾರೋಪ

ಉಡುಪಿ: ಕಾಪು ಕ್ಷೇತ್ರದ 80 ಬಡಗಬೆಟ್ಟು ಗ್ರಾಮದಲ್ಲಿ ಇತ್ತೀಚೆಗೆ ಉಡುಪಿ ಕಂಬಳಕ್ಕೆ ಶಂಕುಸ್ಥಾಪನೆ ನಡೆದಿರುವುದು ರಾಜಕೀಯ ವಾದ–ವಿವಾದಕ್ಕೆ ಕಾರಣವಾಗಿದೆ. ಅದೇ ದಿನ ಜಿಲ್ಲಾಡಳಿತ ಆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದ ಹಿನ್ನೆಲೆ, ಈ ವಿಚಾರ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಅವರ ನಡುವೆ ತೀವ್ರ ಆರೋಪ–ಪ್ರತ್ಯಾರೋಪಗಳಿಗೆ ವೇದಿಕೆಯಾಗಿದೆ. ಈ ಹಿನ್ನೆಲೆಯಲ್ಲಿ, ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಅವರು ದುರುದ್ದೇಶಪೂರಿತವಾಗಿ ರಾಜಕೀಯ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ…

Read More

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

ಉಳ್ಳಾಲ: ಸಮರ್ಪಣಾ ಪರಿವಾರ್ ಟ್ರಸ್ಟ್ ಆಶ್ರಯದಲ್ಲಿ ‘ಮಹಿಳಾ ದಿನಾಚರಣೆ – 2026’ ಸಾಧಕಿಯರಿಗೆ ಸನ್ಮಾನ ಹಾಗೂ ಪರಿವಾರ ಕುಟುಂಬ ಮಿಲನ ಕಾರ್ಯಕ್ರಮ ಕೊಲ್ಯ ಖಾಸಗಿ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ ಸಾಧಕಿಯರಿಗೆ ಸನ್ಮಾನ ಹಾಗೂ ಪರಿವಾರ ಕುಟುಂಬ ಮಿಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ಹಿಂದೆ ಅಡುಗೆ ಕೋಣೆಗೆ ಸೀಮಿತಳಾಗಿದ್ದ ಮಹಿಳೆಯರು ಪ್ರಸ್ತುತ ಅಂತರೀಕ್ಷಕ್ಕೆ ಏರುವ ಮೂಲಕ ಎಲ್ಲಾ ರಂಗದಲ್ಲೂ ಛಾಪು ಮೂಡಿಸಿದ್ದಾರೆ. ಮಹಿಳೆಯರನ್ನು ಪೂಜಿಸುವ ಹಾಗೂ…

Read More

ಆದ್ಯಪಾಡಿ : ಧರ್ಮದರ್ಶಿ ಮೋನಪ್ಪ ಮೇಸ್ತ್ರಿ ಇನ್ನಿಲ್ಲ

ಮಂಗಳೂರು : ಇಲ್ಲಿನ ಆದ್ಯಪಾಡಿ ಗ್ರಾಮದ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ದೇವಳದ ಆಡಳಿತ ಧರ್ಮದರ್ಶಿ ಮೋನಪ್ಪ ಮೇಸ್ತ್ರಿ (70) ಇವರು ಹೃದಯಾಘಾತದಿಂದ ಭಾನುವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಮೃತರು ರೂ 10ಕೋಟಿ ವೆಚ್ಚದಲ್ಲಿ ದೇವಸ್ಥಾನ ಪುನರ್ ನಿರ್ಮಿಸಿ ಬ್ರಹ್ಮಕಲಶ ಮತ್ತು ಅಷ್ಟಪವಿತ್ರ ನಾಗಬ್ರಹ್ಮ ಮಂಡಲ ನೆರವೇರಿಸಿದ್ದರು. ಮೃತರ ಅಂತ್ಯ ಕ್ರಿಯೆ ಭಾನುವಾರ ಮಧ್ಯಾಹ್ನ ಸ್ವಗೃಹ ಬಳಿ ನೆರವೇರಿತು. ಮೃತರಿಗೆ ಶಾಸಕ ಡಾ. ಭರತ್ ವೈ. ಶೆಟ್ಟಿ, ಗಾಣಿಗ…

Read More

ಜೀವದ ಹಂಗು ತೊರೆದು ಸೇವೆ: ಈಶ್ವರ್ ಮಲ್ಪೆಗೆ ಆಧುನಿಕ ರಕ್ಷಣಾ ಸಾಧನ ನೀಡಿದ ಟ್ರಸ್ಟ್

ಉಡುಪಿ: ಸಮಾಜದಲ್ಲಿ ಕಷ್ಟದಲ್ಲಿರುವ ವ್ಯಕ್ತಿಗಳ ನೋವಿಗೆ ದನಿಯಾದವರ ಕಷ್ಟಕ್ಕೆ ಸ್ಪಂದನೆ ತೋರುವುದು ಮಾನವೀಯತೆಯಾಗಿದೆ. ಅಂತಹ ಮಾನವೀಯ ಸೇವೆಯನ್ನು ದೇವರು ಕೂಡ ಮೆಚ್ಚುತ್ತಾರೆ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರುಗಳಾದ ವಂ|ಡೆನಿಸ್ ಡೆಸಾ ಹೇಳಿದರು.ಅವರು ಭಾನುವಾರ ಸಂಜೆ ಚರ್ಚಿನ ಆವರಣದಲ್ಲಿ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರಿಗೆ ಮಂಗಳೂರಿನ ಮೈಕಲ್ ಡಿಸೋಜಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಮಾರು ರೂ 7 ಲಕ್ಷ ವೆಚ್ಚದಲ್ಲಿ ಕೊಡಲಾದ ನೀರಿನಡಿ ಮುಳುಗಿ ಜೀವರಕ್ಷಣೆ ಮಾಡುವಾಗ ಉಪಯೋಗಿಸುವ ಸಂವಹನ ಸಾಧನವನ್ನು ಹಸ್ತಾಂತರಿಸಿ ಮಾತನಾಡಿದರು….

Read More

ಹೆಣ್ಣಿನ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಸಂಘಟಿತ ಹೋರಾಟದ ಅನಿವಾರ್ಯ : ಶಾಹಿದಾ ತಸ್ನೀಮ್

ಬಿಸಿ ರೋಡ್,ಮಾ.8: ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಅಧ್ಯಕ್ಷೆ ಶಿನೀರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ದಿಕ್ಸೂಚಿ ಭಾಷಣ ಮಾಡಿದ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಾಹಿದಾ ತಸ್ನೀಂ ಅವರು, ಪ್ರಸ್ತುತ ಭಾರತದಲ್ಲಿ ಮಹಿಳೆಯರ ಸ್ಥಿತಿಗತಿ ಹಾಗೂ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಹೆಣ್ಣಿನ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ…

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರ್ಚ್ 14 ರಂದು ರಾಷ್ಟ್ರೀಯ ಲೋಕ್ ಅದಾಲತ್

ಮಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮೂಡಬಿದ್ರಿ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಮಾರ್ಚ್ 14 ರಂದು ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ ತಿಳಿಸಿದರು . ಅವರು ಜಿಲ್ಲಾ ನ್ಯಾಯಾಲಯ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , “ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0” ಎಂಬ…

Read More

ಅಗಲಿದ ಬಿಜೆಪಿ ಮುಖಂಡ ಸತೀಶ್ ಪ್ರಭುವಿಗೆ ಸಾರ್ವಜನಿಕ ಶ್ರದ್ಧಾಂಜಲಿ

ಮಂಗಳೂರು: ಇತ್ತೀಚೆಗೆ ಅಗಲಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರಾದ ಶ್ರೀ ಸತೀಶ್ ಪ್ರಭು ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯು ಕಳೆದ ಶನಿವಾರ ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು, ಸತೀಶ್ ಪ್ರಭು ಉತ್ತಮ ಸಂಘಟಕರಾಗಿದ್ದು, ಪಕ್ಷದ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು ಎಂದು ಹೇಳಿದರು. ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿಯೂ ಅವರು ಅವಿರತವಾಗಿ ಶ್ರಮಿಸಿ ಮಹತ್ವದ ಕೊಡುಗೆ ನೀಡಿದ್ದು,…

Read More

ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಜ್ಞಾನವಿಕಾಸ ಕಾರ್ಯಕ್ರಮದಡಿ ವಾತ್ಸಲ್ಯ ಮನೆ ಹಸ್ತಾಂತರ

ಕಾಸರಗೋಡು: ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ವತಿಯಿಂದ ಜ್ಞಾನವಿಕಾಸ ಕಾರ್ಯಕ್ರಮದಡಿ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ಚೆಂಗಳ ಗ್ರಾಮ ಪಂಚಾಯಿತಿಯ ಮೀನಾಡಿ ಪಳ್ಳದಲ್ಲಿ ನಡೆಯಿತು. ಕಾಸರಗೋಡು ಜಿಲ್ಲೆಯ ಚೆಂಗಳ ಪಂಚಾಯಿತಿಯ 1ನೇ ವಾರ್ಡಿನ ನಿವಾಸಿ ಯಮುನಾ ಅವರಿಗೆ ಮಂಜೂರಾದ ವಾತ್ಸಲ್ಯ ಮನೆಯನ್ನು ಹಸ್ತಾಂತರಿಸಲಾಯಿತು. ಕಾರ್ಯಕ್ರಮವು ಕಾಸರಗೋಡು ಜನಜಾಗೃತಿ ವೇದಿಕೆ ಅಧ್ಯಕ್ಷ ಅಖಿಲೇಶ್ ನಗುಮಗಂ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚೆಂಗಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತ ಅಜಕ್ಕೋಡು…

Read More

ಸಂಸ್ಕೃತಿ, ಏಕತೆಗೆ ಸಂದೇಶ: ಮಂಜೇಶ್ವರದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ

ಮಂಜೇಶ್ವರ: ಹಿಂದೂ ಸಂಗಮ ಆಯೋಜನ ಸಮಿತಿ ಮಂಜೇಶ್ವರ ಪಂಚಾಯತ್ ವತಿಯಿಂದ ಮಂಜೇಶ್ವರ ಹಿಂದೂ ಸಂಗಮ ಕಾರ್ಯಕ್ರಮವು ಮಾರ್ಚ್ 8ರಂದು ಎಸ್.ಎ.ಟಿ. ಶಾಲಾ ಮೈದಾನದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಸಂಜೆ 3 ಗಂಟೆಗೆ ಶ್ರೀಮತ್ ಅನಂತೇಶ್ವರ ದೇವಾಲಯದ ವಠಾರದಿಂದ ಭವ್ಯ ಶೋಭಾಯಾತ್ರೆ ಆರಂಭವಾಯಿತು. ಶೋಭಾಯಾತ್ರೆಯಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ತಂಡಗಳು ಭಾಗವಹಿಸಿ ಮಂಜೇಶ್ವರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಳಿಕ ಎಸ್.ಎ.ಟಿ. ಶಾಲಾ ಮೈದಾನಕ್ಕೆ ಆಗಮಿಸಿತು. ನಂತರ ಆದರ್ಶ ವ್ಯಕ್ತಿಗಳ ಅನಾವರಣ ಕಾರ್ಯಕ್ರಮ ನಡೆಯಿತು. ಬಳಿಕ…

Read More

ನಂದಾರಪದವು–ಚೇವಾರ್ ಮಲೆನಾಡು ಹೆದ್ದಾರಿಯಲ್ಲಿ ಕತ್ತಲ ಸಾಮ್ರಾಜ್ಯ: ಪ್ರಯಾಣಿಕರ ಪರದಾಟ

ಮಂಜೇಶ್ವರ: ಕೇರಳ–ಕರ್ನಾಟಕ ಗಡಿ ಭಾಗವಾದ ನಂದಾರಪದವಿನಿಂದ ಆರಂಭವಾಗುವ ಮಲೆನಾಡು ಹೆದ್ದಾರಿಯಲ್ಲಿ ಕಳೆದ ಎರಡು ವರ್ಷಗಳಿಂದ ಬೀದಿ ದೀಪಗಳು ಕಾರ್ಯನಿರ್ವಹಿಸದೇ ಇಡೀ ರಸ್ತೆ ಕತ್ತಲಲ್ಲಿ ಮುಳುಗಿರುವುದರಿಂದ ಪ್ರಯಾಣಿಕರು ಹೈರಾಣಾಗಿದ್ದಾರೆ. ಗಡಿಯ ನಂದಾರಪದವಿನಿಂದ ಚೇವಾರ್ ವರೆಗೆ ಸುಮಾರು 28 ಕಿಲೋಮೀಟರ್ ಉದ್ದದ ಈ ಹೆದ್ದಾರಿಯಲ್ಲಿ ಅಳವಡಿಸಿದ್ದ ಸೌರಶಕ್ತಿ ಚಾಲಿತ ದೀಪಗಳು ಬಹುತೇಕ ಕೆಟ್ಟು ನಿಂತಿವೆ. ಆದರೆ ಸಮಸ್ಯೆಯನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಲೆನಾಡಿನ ಅಭಿವೃದ್ಧಿಯ ಕನಸಾಗಿ ನಿರ್ಮಿಸಲಾದ ಈ ಹೆದ್ದಾರಿ,…

Read More
error: Content is protected !!