ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕರಾವಳಿ ಭಾಗ ಸಂಪೂರ್ಣ ಕಡೆಗಣನೆ: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಟೀಕೆ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಭಾಗವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದ್ದು, ಈ ಭಾಗದ ಜನರು ಇಟ್ಟಿದ್ದ ಭರವಸೆ ಹುಸಿಯಾಗಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಟೀಕಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು ₹4.48 ಲಕ್ಷ ಕೋಟಿ ಗಾತ್ರದ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ₹51,591 ಕೋಟಿ ಮೀಸಲಿರಿಸಲಾಗಿದೆ. ಆದರೆ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ವಿಫಲವಾಗಿದ್ದು, ಅದನ್ನು ಸರಿದೂಗಿಸಲು ಮುಖ್ಯಮಂತ್ರಿ…