ಸಬಳೂರು ಅಯೋಧ್ಯಾನಗರ ಶ್ರೀರಾಮ ಭಜನಾ ಮಂದಿರಕ್ಕೆ ಧರ್ಮಸ್ಥಳದ ಅನುದಾನ ಚೆಕ್ ವಿತರಣೆಸಂಸ್ಕಾರ–ಸಂಸ್ಕೃತಿ ಉಳಿವಿಗೆ ಭಜನಾ ಮಂದಿರಗಳು ಪ್ರೇರಣೆ: ಪ್ರಕಾಶ್ ಕುಮಾರ್
ಕಡಬ, ಮಾ.6: ನಮ್ಮ ಸಂಸ್ಕಾರ ಹಾಗೂ ಸಂಸ್ಕೃತಿಯ ಉಳಿವಿಗೆ ಭಜನಾ ಮಂದಿರಗಳು ಮಹತ್ತರ ಕೊಡುಗೆ ನೀಡುತ್ತಿದ್ದು, ಸಮಾಜದಲ್ಲಿ ಧರ್ಮಜಾಗೃತಿ ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಹೇಳಿದರು. ಅವರು ಶುಕ್ರವಾರ ಕಡಬ ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾನಗರದ ಶ್ರೀರಾಮ ಭಜನಾ ಮಂದಿರದ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬಿಡುಗಡೆಯಾದ ₹1 ಲಕ್ಷ ಅನುದಾನದ ಚೆಕ್ ವಿತರಣಾ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು. ಮಕ್ಕಳಿಗೆ…