ಮಂಗಳೂರು: ಬೋಳಾರ ವಾರ್ಡಿನಲ್ಲಿ ಟಿವಿಎಸ್ ಫ್ಯಾಕ್ಟರಿ ರಸ್ತೆಯ ಸಮಗ್ರ ಅಭಿವೃದ್ಧಿಗೆ ಗುದ್ದಲಿ ಪೂಜೆ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 58ನೇ ಬೋಳಾರ ವಾರ್ಡಿನಲ್ಲಿ ಸುಮಾರು ಒಂದು ಕೋಟಿ ರೂಪಾಯಿ ವಿಶೇಷ ಅನುದಾನದಲ್ಲಿ ಟಿವಿಎಸ್ ಫ್ಯಾಕ್ಟರಿ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಈ ಕಾರ್ಯಕ್ರಮವು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರುಗೊಂಡಿದ್ದ ಅನೇಕ ಕಾಮಗಾರಿಗಳಿಗೆ ಈಗಿನ ಕಾಂಗ್ರೆಸ್ ಸರ್ಕಾರ ತಡೆ ನೀಡಿತ್ತು ಎಂದು ಆರೋಪಿಸಿದರು. ಈ ಬಗ್ಗೆ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ…