Avatar

NAMMA MEDIA 24X7

ಮ್ಯಾಪ್ಸ್ ಕಾಲೇಜಿನಲ್ಲಿ 117ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಮ್ಯಾಪ್ಸ್ ಕಾಲೇಜು ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 117ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಮಾರ್ಚ್ 5ರಂದು ಮ್ಯಾಪ್ಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೃತಿ ಶೆಟ್ಟಿ ವಹಿಸಿದ್ದರು. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಮಂಗಳೂರಿನ ಎ.ಜೆ. ವೈದ್ಯಕೀಯ ವಿಜ್ಞಾನ ಹಾಗೂ ಸಂಶೋಧನ ಕೇಂದ್ರದ ಔಷಧ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚಂದ್ರಶೇಖರ್, ವಿಜಯ ಕರ್ನಾಟಕ ದೈನಿಕದ ಹಿರಿಯ ವರದಿಗಾರರಾದ ವಿಜಯ ಕೋಟ್ಯಾನ್,…

Read More

ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಮಹಿಳಾ ಆಯೋಗ ಅಧ್ಯಕ್ಷೆ ಭೇಟಿ: ಮಹಿಳಾ ವ್ಯಾಪಾರಿಗಳ ಸಂಕಷ್ಟದ ಪರಿಶೀಲನೆ

ಮಂಗಳೂರು: ಮಂಗಳೂರಿನ ಕೇಂದ್ರ ಭಾಗವಾದ ಸ್ಟೇಟ್ ಬ್ಯಾಂಕ್ ಪರಿಸರದ ಮೀನು ಮಾರುಕಟ್ಟೆಯಲ್ಲಿ ವ್ಯಾಪಾರ ನಡೆಸುತ್ತಿರುವ ಮಹಿಳೆಯರು ಎದುರಿಸುತ್ತಿರುವ ಸಂಕಷ್ಟದ ಹಿನ್ನೆಲೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಗುರುವಾರ ಮಧ್ಯಾಹ್ನ ಮಾರುಕಟ್ಟೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಹಸಿ ಹಾಗೂ ಒಣಮೀನು ಮಾರುಕಟ್ಟೆಯ ಪ್ರತಿ ಭಾಗಕ್ಕೂ ಭೇಟಿ ನೀಡಿದ ಅವರು, ಅಲ್ಲಿನ ಅವ್ಯವಸ್ಥೆಗಳನ್ನು ಕಣ್ಣಾರೆ ನೋಡಿ ಅಸಮಾಧಾನ ವ್ಯಕ್ತಪಡಿಸಿದರು. ದಶಕಗಳಿಂದ ಮೀನು ಮಾರಾಟದ ಮೂಲಕ ಜೀವನ ಸಾಗಿಸುತ್ತಿರುವ ನೂರಾರು ಮಹಿಳೆಯರು ತಮ್ಮ…

Read More

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್ತೆ: ತನಿಖೆಗೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ

ಮಂಗಳೂರು: ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್‌ಗಳು ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ತನಿಖೆ ನಡೆಸುವಂತೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿಯಾಗಿ ಬಿದ್ದಿದ್ದ ಆಧಾರ್ ಕಾರ್ಡ್‌ಗಳನ್ನು ಕಂಡು ಸಾರ್ವಜನಿಕರು ದಿಗ್ಭ್ರಮೆಗೊಂಡಿದ್ದಾರೆ. ಆಧಾರ್ ಕಾರ್ಡ್‌ಗಳ ರಾಶಿ ಕಂಡ ಕೂಡಲೇ ಸ್ಥಳೀಯರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿ ನೀಡಿದರು. ಬಳಿಕ ಸ್ಥಳಕ್ಕೆ…

Read More

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆಗೆ ನಿರ್ಧಾರ

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ), ಚನ್ನರಾಯಪಟ್ಟಣ, ಹಾಸನ ಇದರ ರಾಜ್ಯ ಸಂಘಟನಾ ಕಾರ್ಯದರ್ಶಿ ಸಚಿನ್ ಎಸ್‌ ಎ ಶ್ರವಣಬೆಳಗೊಳ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಹೋಟೆಲ್ ವುಡ್‌ಲ್ಯಾಂಡ್ಸ್ ನಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕವನ್ನು ಪುನರ್ ಸಂಘಟಿಸಲು ಸಮಾಲೋಚನಾ ಸಭೆಯನ್ನು ಕರೆಯಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ನ್ಯಾಯವಾದಿ ಪರಿಮಳ ರಾವ್ ಕೆ ಅವರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಎಲ್ಲಾ ತಾಲೂಕು ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳನ್ನು ಪುನರ್…

Read More

ಮಾರ್ಚ್ 6ರಂದು ಟಾಕೀಸ್ ಆ್ಯಪ್‌ನಲ್ಲಿ ‘ಧರ್ಮ ಚಾವಡಿ’ ಸಿನೆಮಾ ಬಿಡುಗಡೆ

ಕೃಷ್ಣವಾಣಿ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಜಗದೀಶ್ ಅಮೀನ್ ನಿರ್ಮಾಣದ, ಕಳೆದ ವರ್ಷ ಕರಾವಳಿಯಾದ್ಯಂತ ಯಶಸ್ವಿಯಾಗಿ ಪ್ರದರ್ಶನಗೊಂಡ ತುಳು ಚಲನಚಿತ್ರ ‘ಧರ್ಮ ಚಾವಡಿ’ ಇದೀಗ ಮಾರ್ಚ್ 6ರಂದು ಟಾಕೀಸ್ ಆ್ಯಪ್ (Talkies App) OTT ಮೂಲಕ ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಟ ರಮೇಶ್ ರೈ ಕುಕ್ಕುವಳ್ಳಿ ಮಾತನಾಡಿ, “ಮುಂದಿನ ದಿನಗಳಲ್ಲಿ ಈ ಸಿನಿಮಾವನ್ನು ಕನ್ನಡದಲ್ಲಿ ಡಬ್ ಮಾಡಿ ಕರ್ನಾಟಕದ ಇತರ ಭಾಗಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆ” ಎಂದು ಮಾಹಿತಿ ನೀಡಿದರು….

Read More

ಪುತ್ತೂರಿನಲ್ಲಿ ಸರ್ಕಾರಿ ಬಾವಿ, ಕೆರೆ ಒತ್ತುವರಿ ಆರೋಪ: ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಕೆ

ಪುತ್ತೂರು: ಪುತ್ತೂರು ನಗರಸಭೆ ಕಟ್ಟಡದ ಸಮೀಪ ನಿರ್ಮಾಣವಾಗುತ್ತಿರುವ ಕಟ್ಟಡ ಕಾಮಗಾರಿಯಲ್ಲಿ ಭೂ ಅತಿಕ್ರಮಣ ಹಾಗೂ ಸಾರ್ವಜನಿಕ ಕೆರೆಯನ್ನು ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ, ಸಹಾಯಕ ಆಯುಕ್ತ, ತಹಸೀಲ್ದಾರ್, ನಗರಸಭೆ ಹಾಗೂ ನಗರ ಯೋಜನಾ ಪ್ರಾಧಿಕಾರಕ್ಕೆ ದೂರು ನೀಡಿರುವುದಾಗಿ ನೆಹರುನಗರ ನಿವಾಸಿ ಸಂತೋಷ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪುತ್ತೂರು ಹೋಬಳಿಯ ಪುತ್ತೂರು ಕಸಬಾ ಗ್ರಾಮದ ಸರ್ವೆ ನಂ. 133/9ಎ ವ್ಯಾಪ್ತಿಯ ಸುಮಾರು 0.02 ಎಕರೆ ಸರ್ಕಾರಿ ಜಾಗದಲ್ಲಿ ಅನಾದಿ ಕಾಲದಿಂದ ಬಾವಿಯೊಂದು ಇದ್ದು, ಸ್ಥಳೀಯ ದೇವಿಯ ಆರಾಧನೆಗೆ…

Read More

ಮಾ.7 ರಿಂದ 14ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ‘ಪ್ರೇಮ ಪ್ರವಾಹಿನಿ’ ರಥ ಸಂಚಾರ, ಭಕ್ತಿ ಭಾವನೆಯ ಸಾಕ್ಷಾತ್ಕಾರ

ಪ್ರೇಮಮಯಿ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವದ ಮೂಲಾಧಾರವಾದ ‘ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ’ ಹೆಸರಿನ ರಥಯಾತ್ರೆ ದೇಶಾದ್ಯಂತ ಸಂಚರಿಸುತ್ತಿದ್ದು . ಇದರ ಭಾಗವಾಗಿ ರಥಯಾತ್ರೆಯು ಮಾ.7ರಿಂದ 14ರವರೆಗೆ ದ.ಕ., ಕಾಸರಗೋಡು , ಉಡುಪಿ ಜಿಲ್ಲೆಗಳಲ್ಲಿ ಸಂಚಾರ ನಡೆಸಲಿದೆ ಎಂದು ಶ್ರೀ ಸತ್ಯಸಾಯಿ ಸೇವಾ ಸಮಿತಿಯ ರಾಜ್ಯಾಧ್ಯಕ್ಷರಾದ ಪದ್ಮನಾಭ ಪೈ, ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ‘ಪ್ರೇಮ ಪ್ರವಾಹಿನಿ’ ರಥಯಾತ್ರೆಯ ದಕ್ಷಿಣ…

Read More

ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ : ಚತುರ್ಥ ದಿನ

ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ ಯಕ್ಷಮಂಜರಿಯ ಚತುರ್ಥ ದಿನದ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಮಾಡಿ ಮಾತನಾಡಿದ ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ ಧಾರ್ಮಿಕ ಮುಂದಾಳು, ಹಿರಿಯರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರು ನಮ್ಮ ಭಾರತೀಯ ಸನಾತನ ಸಂಸ್ಕೃತಿ ಉಳಿಯಬೇಕಾದರೆ ನಮ್ಮಲ್ಲಿ ಧಾರ್ಮಿಕ ಪ್ರಜ್ಞೆ ಮೂಡಬೇಕು ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಆ ಕುರಿತಾದ ಚಿಂತನೆಗೆ ಅವಕಾಶ ಇಲ್ಲದಿರುವುದರಿಂದ, ಮಕ್ಕಳು ಮಹಿಳೆಯರು ಇಂತಹ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಜಾಗೃತಿ ಸಾಧ್ಯ…

Read More

ಪುತ್ತೂರಿನಲ್ಲಿ ಭೂಮಿಗೆ ಅತೀ ಸಮೀಪದಲ್ಲಿ ಹಾರಿದ ವಿಮಾನ: ಸ್ಥಳೀಯರಲ್ಲಿ ಆತಂಕ

ಪುತ್ತೂರು: ಪುತ್ತೂರಿನಲ್ಲಿ ಗುರುವಾರ ಸಂಜೆ ವಿಮಾನವೊಂದು ಭೂಮಿ ಮಟ್ಟಕ್ಕೆ ಅತೀ ಸಮೀಪದಲ್ಲಿ ಹಾರಾಟ ನಡೆಸಿದ ದೃಶ್ಯ ಕಂಡುಬಂದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿತು. ಬಳಿಕ ಇದು ಭೂ ವಿಜ್ಞಾನಕ್ಕೆ ಸಂಬಂಧಿಸಿದ ಸಮೀಕ್ಷಾ ಕಾರ್ಯವೆಂದು ತಿಳಿದು ಬಂದ ಹಿನ್ನೆಲೆಯಲ್ಲಿ ಜನರು ನಿಟ್ಟುಸಿರು ಬಿಟ್ಟರು. ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದ ಗದ್ದೆ ಪ್ರದೇಶದ ಮೇಲ್ಭಾಗದಲ್ಲಿ ನೆಲ ಮಟ್ಟಕ್ಕೆ ಬಹಳ ಸಮೀಪದಲ್ಲಿ ವಿಮಾನ ಹಾರಾಡುತ್ತಿರುವುದನ್ನು ಸ್ಥಳೀಯರು ಗಮನಿಸಿದರು. ಈ ವಿಮಾನವು ನಗರದ ವಿವಿಧ ಭಾಗಗಳ ಮೇಲೂ ಸುಮಾರು 10 ರಿಂದ 15 ಸುತ್ತು…

Read More

ಮಂಗಳೂರು ವಿಶ್ವವಿದ್ಯಾಲಯದಲ್ಲಿ 5ನೇ ರ‍್ಯಾಂಕ್‌ ಪಡೆದ ಐಷಾ: ಬರಕಾ ಸಂಸ್ಥೆಗೆ ಹೆಮ್ಮೆಯ ಕ್ಷಣ

ಆಡ್ಯಾರ್‌ನ ಬರಕಾ ಇಂಟರ್‌ನ್ಯಾಷನಲ್ ಶಾಲೆ ಹಾಗೂ ಕಾಲೇಜಿಗೆ ಮತ್ತೊಂದು ಹೆಮ್ಮೆಯ ಕ್ಷಣ ಲಭಿಸಿದೆ. ಸಂಸ್ಥೆಯ ಪದವಿ ಕಾಲೇಜಿನ ವಿದ್ಯಾರ್ಥಿನಿ ಐಷಾ ಅವರು ಮಂಗಳೂರು ವಿಶ್ವವಿದ್ಯಾಲಯದ ಬಿ.ಎ. ವಿಭಾಗದಲ್ಲಿ 5ನೇ ರ‍್ಯಾಂಕ್‌ ಗಳಿಸಿ ಸಂಸ್ಥೆಯ ಕೀರ್ತಿಪತಾಕೆಯನ್ನು ಮತ್ತೊಮ್ಮೆ ಎತ್ತಿಹಿಡಿದಿದ್ದಾರೆ.ಐಷಾ ಅವರು ಅಶ್ರಫ್ ಅಲಿ ಹಾಗೂ ರಮ್ಲತ್ ದಂಪತಿಯ ಪುತ್ರಿಯಾಗಿದ್ದು, ಅಲ್ತಾಫ್ ಉಮರ್ ಅವರ ಪತ್ನಿಯಾಗಿದ್ದಾರೆ. ಈಗಾಗಲೇ ಶೈಕ್ಷಣಿಕ ಸಾಧನೆಯಲ್ಲಿ ಮೆಚ್ಚುಗೆ ಗಳಿಸಿರುವ ಅವರು ಪ್ರಸ್ತುತ ಮಂಗಳೂರು ವಿಶ್ವವಿದ್ಯಾಲಯದಲ್ಲೇ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ (ಎಂ.ಎ.) ಅಭ್ಯಾಸ ಮಾಡುತ್ತಿದ್ದಾರೆ. ಅವರ…

Read More
error: Content is protected !!