ಮಂಗಳೂರು: ಮಾರ್ಚ್ 5ರಂದು 117ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ
ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಮ್ಯಾಪ್ಸ್ ಕಾಲೇಜು ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 117ನೇ ‘ಸಾಹಿತ್ಯ ಅಭಿರುಚಿ’ ಕಾರ್ಯಕ್ರಮ ಮಾರ್ಚ್ 5ರಂದು ಬೆಳಿಗ್ಗೆ 11:30ಕ್ಕೆ ಮ್ಯಾಪ್ಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮ್ಯಾಪ್ಸ್ ಕಾಲೇಜು ಮಂಗಳೂರಿನ ಪ್ರಾಂಶುಪಾಲರಾದ ಡಾ. ಶೃತಿ ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಎ.ಜೆ. ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನ ಕೇಂದ್ರ ಮಂಗಳೂರಿನ ಔಷಧ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚಂದ್ರಶೇಖರ್ ಹಾಗೂ ವಿಜಯ ಕರ್ನಾಟಕ ದೈನಿಕದ…