ಮಂಜೇಶ್ವರದಲ್ಲಿ ದುರ್ಘಟನೆ: ಅಸೌಖ್ಯದಿಂದ ಬಳಲುತ್ತಿದ್ದ ಮಹಿಳೆ ಬಾವಿಗೆ ಹಾರಿ ಮೃತ್ಯು
ಮಂಜೇಶ್ವರ: ಅಸೌಖ್ಯದಿಂದ ಬಳಲುತಿದ್ದ ಚಕ್ಕಿಗುಡ್ಡೆ ನಿವಾಸಿ ಮಧ್ಯವಯಸ್ಕ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದೆ. ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ 20ನೇ ವಾರ್ಡ್‌ನ ಚಕ್ಕಿಗುಡ್ಡೆಯಲ್ಲಿ ಈ ಘಟನೆ ವರದಿಯಾಗಿದೆ. ಚಕ್ಕಿಗುಡ್ಡೆ ನಿವಾಸಿ ಗೀತಾ ಎಂಬುವವರೇ ಸಾವನ್ನಪ್ಪಿದ ದುರ್ದೈವಿ. ಮಂಗಳವಾರ ಮಧ್ಯಾಹ್ನದ ಸುಮಾರಿಗೆ ಗೀತಾ ಅವರು ಮನೆಯ ಸಮೀಪದ ಬಾವಿಗೆ ಹಾರಿದ್ದಾರೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ…