ಮಾ.9ರಂದು ಶಾಸಕರಿಗೆ ಬಜೆಟ್ ಕುರಿತು ಕಾರ್ಯಾಗಾರ: ಸಿಎಂ ಸಿದ್ದರಾಮಯ್ಯರಿಂದ ಮಾಹಿತಿ – ಸ್ಪೀಕರ್ ಯು.ಟಿ. ಖಾದರ್
ಮಂಗಳೂರು: ರಾಜ್ಯ ಬಜೆಟ್ ಕುರಿತು ಶಾಸಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಮಾರ್ಚ್ 9ರಂದು ಸಂಜೆ 4 ಗಂಟೆಗೆ ಲಲಿತ್ ಅಶೋಕ್ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ ಅಧಿವೇಶನದ ಪ್ರಾಮುಖ್ಯತೆ, ರಾಜಸ್ವ ಸಂಗ್ರಹ, ಆರ್ಥಿಕ ವ್ಯವಸ್ಥೆ, ಅನುದಾನಗಳ ವರ್ಗೀಕರಣ, ವಿಗುತೆ ಬಜೆಟ್ ಹಾಗೂ ಕೊರತೆ ಬಜೆಟ್ ಸೇರಿದಂತೆ ವಿವಿಧ ವಿಷಯಗಳ ಕುರಿತು ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಶಾಸಕರಿಗೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು. ದೇಶದಲ್ಲಿ…