ಬಂಟ್ವಾಳದಲ್ಲಿ ಮಾ.14ರಂದು ರಾಷ್ಟ್ರೀಯ ಲೋಕ ಅದಾಲತ್: ಪೂರ್ವಭಾವಿ ಸಭೆ
ಬಂಟ್ವಾಳ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಮಾರ್ಚ್ 14ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವು ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಆಶ್ರಯದಲ್ಲಿ ಬಂಟ್ವಾಳ ನ್ಯಾಯಾಲಯದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ಆಸ್ತಿ ವಿವಾದಗಳು, ವಿಭಾಗ ಮೊಕದ್ದಮೆಗಳು, ಹಣ ವಸೂಲಿ ಪ್ರಕರಣಗಳು, ನಿರ್ದಿಷ್ಟ ಪರಿಹಾರ ಕಾಯ್ದೆಯಡಿ ದಾಖಲಾದ ಮೊಕದ್ದಮೆಗಳು, ಮೋಟಾರು ವಾಹನ ಪ್ರಕರಣಗಳು, ಎಂಎಂಆರ್‌ಡಿ ಪ್ರಕರಣಗಳು, ವಿವಾಹ ಸಮನ್ವಯ…