ಮಂಜೇಶ್ವರ ಬ್ಲಾಕ್ ಪಂಚಾಯತ್ 2026-27 ಬಜೆಟ್ ಮಂಡನೆ: ‘ನವಕೇರಳ’ ನಿರ್ಮಾಣಕ್ಕೆ ಒತ್ತು
ಮಂಜೇಶ್ವರ: ಸಮಗ್ರ ಹಾಗೂ ಸರ್ವತೋಮುಖ ಅಭಿವೃದ್ಧಿಯ ಮೂಲಕ ‘ನವಕೇರಳ’ ನಿರ್ಮಾಣದ ಆಶಯದೊಂದಿಗೆ ಮಂಜೇಶ್ವರ ಬ್ಲಾಕ್ ಪಂಚಾಯತ್‌ನ 2026-27ನೇ ಸಾಲಿನ ಬಜೆಟ್ ಮಂಡಿಸಲಾಯಿತು. ಬ್ಲಾಕ್ ಪಂಚಾಯತ್ ಅಧ್ಯಕ್ಷ ಸೈಪುಲ್ಲಾ ತಂಘಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷೆ ಕಮಲಾಕ್ಷಿ ಅವರು ಬಜೆಟ್‌ನ್ನು ಮಂಡಿಸಿದರು. ಹೊಸ ಆಡಳಿತ ಸಮಿತಿ ಅಧಿಕಾರಕ್ಕೆ ಬಂದ ಬಳಿಕ ಮಂಡನೆಯಾದ ಮೊದಲ ಬಜೆಟ್ ಇದಾಗಿದ್ದು, ಸಾರ್ವಜನಿಕರ ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಯನ್ನು ದೀರ್ಘಕಾಲಿಕ ದೃಷ್ಟಿಕೋನದಲ್ಲಿ ಪರಿಗಣಿಸಿ ‘ಜನಕೀಯ ಬಜೆಟ್’ ರೂಪಿಸಲಾಗಿದೆ ಎಂದು ತಿಳಿಸಲಾಯಿತು. 2026-27ನೇ ಸಾಲಿಗೆ…