ಸಾರ್ವಜನಿಕ ಚರಂಡಿಗೆ ವಸತಿ ಸಮುಚ್ಚಯದ ಶೌಚಾಲಯ ತ್ಯಾಜ್ಯ: ಸತ್ಯಾಂಶವನ್ನು ಮುಚ್ಚಿ ಹಾಕಲು ಚರಂಡಿಯ ಮೇಲೆ ರಾತ್ರೋರಾತ್ರಿ ಕಾಂಕ್ರೀಟ್ : ಅಧಿಕಾರಿಗಳಿಗೆ ಕಣ್ಣಿದ್ದೂ ಜಾಣ ಕುರುಡುತನ
ಮಂಜೇಶ್ವರ: ಮಂಜೇಶ್ವರ ಒಳಪೇಟೆಯ ದಕ್ಷಿಣ ಭಾಗದಲ್ಲಿ ಸಾರ್ವಜನಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸಾರ್ವಜನಿಕ ಸ್ಥಳದಲ್ಲಿರುವ ಚರಂಡಿಗೆ ಖಾಸಗಿ ವಸತಿ ಸಮುಚ್ಚಯವೊಂದರ ಶೌಚಾಲಯದ ತ್ಯಾಜ್ಯ ನೀರನ್ನು ನೇರವಾಗಿ ಹರಿಬಿಡಲಾಗುತ್ತಿದ್ದು, ಸ್ಥಳೀಯರು ಹಾಗೂ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಾದ ಆರೋಗ್ಯಾಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖಾ ಅಧಿಕಾರಿಗಳು ಕಂಡೂ ಕಾಣದಂತೆ ಜಾಣ ಕುರುಡುತನ ಪ್ರದರ್ಶಿಸುತ್ತಿರುವುದು ಹಲವು ರೀತಿಯ ಅನುಮಾನಕ್ಕೆ ಕಾರಣವಾಗಿದೆ. ಮಂಜೇಶ್ವರ ಒಳಪೇಟೆಯ ದಕ್ಷಿಣ ಭಾಗದ ಅಂಗಡಿ ಮುಂಭಾಗ…