Avatar

NAMMA MEDIA 24X7

ಮಂಗಳೂರು: ಕಿನ್ಯಾ ಬಳಿ ಸ್ಕೂಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ – ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಗಾಯ

ಮಂಗಳೂರು: ಸ್ಕೂಟರ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಉಳ್ಳಾಲ ತಾಲೂಕಿನ ಕಿನ್ಯಾ ಬಳಿ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ವಿಜಯಪುರ ಮತ್ತು ಬಾಗಲಕೋಟೆಯ ವೈದ್ಯಕೀಯ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಸವಾರ ಮತ್ತು ಹಿಂಬದಿ ಸವಾರ ಇಬ್ಬರೂ ಗಾಯಗೊಂಡಿದ್ದಾರೆ, ಘಟನೆಯ ಬಗ್ಗೆ ಇದುವರೆಗೆ ಯಾವುದೇ ಔಪಚಾರಿಕ ಪೊಲೀಸ್ ದೂರು ದಾಖಲಾಗಿಲ್ಲ.

Read More

ಅಡ್ಕತ್ತಬೈಲು ಅಗ್ನಿ ಅವಘಡ: ಸಂತ್ರಸ್ತ ಕುಟುಂಬಕ್ಕೆ ಧರ್ಮಸ್ಥಳದಿಂದ ಸಹಾಯಧನ ಮಂಜೂರು

ಕಾಸರಗೋಡು: ಕಾಸರಗೋಡು ಅಡ್ಕತ್ತಬೈಲು ಕ್ಷೇತ್ರದ ಬೀರಂತಬೈಲು ಪ್ರದೇಶದ ಪುಷ್ಪಾ ಗಣಪತಿ ಆಚಾರ್ಯರವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಸಂಪೂರ್ಣ ಹಾನಿಯಾಗಿರುವ ಘಟನೆಗೆ ಸಂಬಂಧಿಸಿ ಸಹಾಯಧನ ಕೋರಿ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಆರ್ಥಿಕ ನೆರವು ಮಂಜೂರು ಮಾಡಿದ್ದಾರೆ. ಸಂತ್ರಸ್ತ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕ್ಷೇತ್ರದಿಂದ ಪ್ರಸಾದ ರೂಪದಲ್ಲಿ ಸಹಾಯಧನ ಮಂಜೂರಾತಿ ಮಾಡಲಾಗಿದೆ. ಮಂಜೂರಾತಿ ಪತ್ರವನ್ನು ಸಂಬಂಧಿಸಿದ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ…

Read More

ಮಂಗಳೂರು ಸೆಂಟ್ರಲ್ ರೈಲ್ವೆ ಎದುರು ₹18 ಲಕ್ಷ ವೆಚ್ಚದಲ್ಲಿ ಆಟೋ ಪಾರ್ಕ್‌ಗೆ ಶಿಲಾನ್ಯಾಸ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 40ನೇ ಕೋರ್ಟ್ ವಾರ್ಡ್‌ನ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಎದುರು ರಿಕ್ಷಾ ಮಾಲಕ-ಚಾಲಕರ ಹಾಗೂ ಸಾರ್ವಜನಿಕರ ಬಹುಕಾಲದ ಬೇಡಿಕೆಯ ಮೇರೆಗೆ ₹18 ಲಕ್ಷ ವಿಶೇಷ ಅನುದಾನದಲ್ಲಿ ಆಟೋ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿತು. ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಶಿಲಾನ್ಯಾಸದ ಬಳಿಕ ಮಾತನಾಡಿದ ಶಾಸಕರು, ನಿರ್ಮಾಣಗೊಳ್ಳಲಿರುವ ಸುಸಜ್ಜಿತ ಮೇಲ್ಛಾವಣಿಯಿಂದ ರಿಕ್ಷಾ ಚಾಲಕರು ಉರಿ ಬಿಸಿಲು ಹಾಗೂ ಮಳೆಗಾಲದಲ್ಲಿ ಆಶ್ರಯ ಪಡೆಯಲು ಹೆಚ್ಚಿನ ಅನುಕೂಲವಾಗಲಿದೆ ಎಂದು…

Read More

ಫೆ.21ರಂದು “ಕುದ್ರೋಳಿ ತೀರ್ಥಾಟನೆ” ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ ಪಾದಯಾತ್ರೆ

ಉಡುಪಿ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನೇತೃತ್ವದಲ್ಲಿ ವಿವಿಧ ಬಿಲ್ಲವ ಸಂಘಟನೆಗಳ ಸಹಯೋಗದಲ್ಲಿ “ಕುದ್ರೋಳಿ ತೀರ್ಥಾಟನೆ” ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ ಪಾದಯಾತ್ರೆಯು ಫೆ. 21ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಕ್ಷೇತ್ರದ ಪ್ರತಿನಿಧಿ ಜಯಾನಂದ್ ತಿಳಿಸಿದ್ದಾರೆ.ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9 ಗಂಟೆಗೆ ಸೆಂಟ್ರಲ್ ರೈಲ್ವೇ ನಿಲ್ದಾಣದಿಂದ ಆರಂಭಗೊಳ್ಳುವ ತೀರ್ಥಾಟನೆಯು ನಗರದಲ್ಲಿ ಸುಮಾರು 7 ಕಿ.ಮೀ.ಗಳ ನಡಿಗೆಯ ಮೂಲಕ 11 ಗಂಟೆಗೆ ಕುದ್ರೋಳಿ ಕ್ಷೇತ್ರವನ್ನು ತಲುಪಲಿದೆ. ಗುರು ಪ್ರಾರ್ಥನೆಯೊಂದಿಗೆ ಆರಂಭಗೊಳ್ಳುವ ಈ ತೀರ್ಥಾಟನೆಯು ಕ್ಷೇತ್ರ ತಲುಪಿದ…

Read More

ಎಮ್.ಕೆ. ಫೈಝಿ ಅವರಿಗೆ ಜಾಮೀನು ಮಂಜೂರು: ದೇಶದ ಧ್ವನಿಯಿಲ್ಲದ ಸಮುದಾಯಗಳಿಗೆ ದೊರೆತ ಕಾನೂನಿನ ವಿಜಯ – ಅನ್ವರ್ ಸಾದತ್ ಬಜತ್ತೂರು

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಝಿ ಅವರಿಗೆ ದೆಹಲಿ ಹೈಕೋರ್ಟ್ ನಲ್ಲಿ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬಿ.ಸಿ. ರೋಡ್ ಕೈಕಂಬದಲ್ಲಿರುವ ಪಕ್ಷದ ಕಚೇರಿ ಮುಂಭಾಗದಲ್ಲಿ ವಿಜಯೋತ್ಸವ ಸಂಭ್ರಮಾಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶಾಹುಲ್ ಹಮೀದ್ ಎಸ್ ಎಚ್ ವಹಿಸಿದ್ದರು.ಪಕ್ಷದ ನಾಯಕರು, ಕಾರ್ಯಕರ್ತರು, ಹಿತೈಷಿಗಳು ಹಾಗೂ ಅಭಿಮಾನಿಗಳು ಭಾಗವಹಿಸಿ ಸಿಹಿ…

Read More

ಛಲವಾದಿ ಟಿ.ನಾರಾಯಣಸ್ವಾಮಿ ವಿರುದ್ಧ ಅವಹೇಳನ ಆರೋಪ.ಶಾಸಕರ ವಿರುದ್ಧ ಕ್ರಮಕ್ಕೆ ಬಿಜೆಪಿ ಎಸ್ಸಿ ಮೋರ್ಚಾ ಆಗ್ರಹ.

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಕರ್ನಾಟಕ ಸರಕಾರದ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ಟಿ.ನಾರಾಯಣ ಸ್ವಾಮಿ ಅವರ ಬಗ್ಗೆ ಅವಹೇಳನ ಪದ ಬಳಕೆ ಮಾಡುವ ಮೂಲಕ ಪರಿಶಿಷ್ಟ ಜಾತಿಯ ಸಮುದಾಯಕ್ಕೆ ಮಾಡಿರುವ ಅವಮಾನ. ಈ ಕುರಿತು ಶಾಸಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಪರಿಶಿಷ್ಟ ಜಾತಿ ಸಮುದಾಯವನ್ನು ಸೇರಿಸಿ ಪ್ರತಿಭಟನೆ ಮಾಡುವ ಸ್ಥಿತಿ ತಲುಪಬಹುದು ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಮೂರು ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಛಲವಾದಿ ನಾರಾಯಣ ಸ್ವಾಮಿ…

Read More

ಬಿಲ್ಡರ್‌ ಜಿತೇಂದ್ರ ಕೊಟ್ಟಾರಿ ವಿರುದ್ಧ ಎಫ್‌ಐಆರ್‌ ದಾಖಲು ಸತ್ಯಕ್ಕೆ ಸಿಕ್ಕ ವಿಜಯ : ಉಜಿರೆ ತನುಷ್ ಶೆಟ್ಟಿ

ಮಂಗಳೂರಿನ ಬಿಲ್ಡರ್ ಜಿತೇಂದ್ರ ಕೊಟ್ಟಾರಿ ಮತ್ತು ಉಜಿರೆ ನಿವಾಸಿ ತನುಷ್ ಶೆಟ್ಟಿ ನಡುವಿನ ‘ರೋಡ್ ರೇಜ್’ ವಿವಾದ ಹೊಸ ತಿರುವು ಪಡೆದಿದೆ. ಒಂದೂವರೆ ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ, ಬಿಲ್ಡರ್ ಜಿತೇಂದ್ರ ಕೊಟ್ಟಾರಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿರುವುದು ಸಂತಸ ತಂದಿದ್ದು ಇದು ನ್ಯಾಯಕ್ಕೆ ಸಿಕ್ಕ ಜಯ ಎಂದು ತನುಷ್ ಶೆಟ್ಟಿ ಹೇಳಿದ್ದಾರೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 9, 2024 ರಂದು ಮಂಗಳೂರಿನಲ್ಲಿ ಕ್ರಿಕೆಟ್ ಪಂದ್ಯ ಮುಗಿಸಿ ಹಿಂತಿರುಗುತ್ತಿದ್ದಾಗ…

Read More

ಫೆಬ್ರವರಿ 22ರಂದು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಭವ್ಯ ನಿಧಿ ಸಮರ್ಪಣೆ ಹಾಗೂ ಧಾರ್ಮಿಕ ಸಭೆ

ಉಪ್ಪಳ: ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದ ವತಿಯಿಂದ ನಡೆಯಲಿರುವ ಭವ್ಯ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಗಾಯತ್ರೀ ದೇವಿಯ ಹಾಗೂ ಭಗವಾನ್ ಶ್ರೀ ನಿತ್ಯಾನಂದ ಗುರುದೇವರ ಪ್ರತಿಷ್ಠಾ ವರ್ಧಂತಿ, ನವಚಂಡಿಕಾ ಯಾಗ ವೇದಮಾತೆ ಶ್ರೀ ಗಾಯತ್ರೀ ದೇವಿಯ ನೂತನ ಗರ್ಭಗೃಹಕ್ಕೆ ನಿಧಿ ಸಮರ್ಪಣೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಫೆಬ್ರವರಿ 22, 2026 ರಂದು ಅದ್ದೂರಿಯಾಗಿ ನಡೆಯಲಿದೆ. ಮಠದ ಆವರಣದಲ್ಲಿ ಬೆಳಿಗ್ಗೆ 7.00 ಗಂಟೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಬಳಿಕ ಭಜನೆ, ಪೂಜೆ ಹಾಗೂ ಧಾರ್ಮಿಕ…

Read More

ಉಡುಪಿ: ಅಸ್ಸಾಂ ಪ್ರವಾಸಕ್ಕೆ ತೆರಳಿದ್ದ ಯುವಕ ಮೃತ್ಯು

ಉಡುಪಿ: ಅಸ್ಸಾಂ ರಾಜ್ಯದ ಗುವಾಹಟಿಗೆ ಪ್ರವಾಸಕ್ಕೆ ತೆರಳಿದ್ದ ಉಡುಪಿಯ ತಂಡದಲ್ಲಿದ್ದ ಓರ್ವ ಯುವಕ ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ.ಮೃತರನ್ನು ಅಶೋಕ್ ಆಚಾರ್ಯ (33) ಎಂದು ಗುರುತಿಸಲಾಗಿದೆ. ಅವರು ಉಡುಪಿ ಜಿಲ್ಲೆಯ ಕಾಪು ತಾಲೂಕು ಕಟಪಾಡಿ ಸಮೀಪದ ಸರಕಾರಿಗುಡ್ಡೆ ನಿವಾಸಿಯಾಗಿದ್ದರು. ಪ್ರವಾಸದ ವೇಳೆ ಅಶೋಕ್‌ ಆಚಾರ್ಯ ಅವರಿಗೆ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಅಸ್ವಸ್ಥತೆ ಉಂಟಾಗಿ ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಯುವಕನ ಅಕಾಲಿಕ ಸಾವಿನಿಂದ ಕುಟುಂಬಸ್ಥರು ಮತ್ತು…

Read More

ಎಸ್‌ಸಿಡಿಸಿಸಿ ಬ್ಯಾಂಕ್ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ಇಂದಿನಿಂದ ಲಭ್ಯ : ಡಾ.ಎಂ.ಎನ್.ರಾಜೇಂದ್ರ ಕುಮಾರ್ … !

ಮಂಗಳೂರು:ಎಸ್‌ಸಿಡಿಸಿಸಿ ಬ್ಯಾಂಕ್ ನಿಂದ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯವನ್ನು ಮಂಗಳವಾರ ದೀಪ ಪ್ರಜ್ವಲಿಸಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತ್ತು .ಬಳಿಕ ಮಾತಾಡಿದ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು, “ನಮ್ಮ ಬ್ಯಾಂಕ್ ಇತರ ಬ್ಯಾಂಕ್ ಗಳಿಗಿಂತ ಹಿಂದೆ ಉಳಿಯಬಾರದು ಎಂಬ ಉದ್ದೇಶದಿಂದ ಈ ಆಧುನಿಕ ಬ್ಯಾಂಕಿಂಗ್ ಸೌಲಭ್ಯವನ್ನು ಅಳವಡಿಸಿಕೊಳ್ಳಲಾಗಿದೆ. ನಮ್ಮ ಶಾಖೆಯಲ್ಲಿ ಬಹುತೇಕ ಎಲ್ಲ ಸೇವೆಗಳನ್ನು 15-20 ವರ್ಷಗಳ ಹಿಂದೆಯೇ ಅಳವಡಿಸಿಕೊಂಡು ಗ್ರಾಹಕ ಸ್ನೇಹಿಯಾಗಿ ಮುನ್ನಡೆಯುತ್ತಿದೆ. ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ…

Read More
error: Content is protected !!