ಹೆಬ್ರಿಯ ಉದ್ಯಮಿ ಮನೆಯಲ್ಲಿ ಕಳ್ಳತನ- ಮೂವರು ಆರೋಪಿಗಳ ಬಂಧನ
ಉಡುಪಿ: ಹೆಬ್ರಿಯ ಅನಂತನಗರದಲ್ಲಿರುವ ಉದ್ಯಮಿ ಕೀರ್ತನ್ ಪ್ರಭು ಅವರ ಮನೆಯಲ್ಲಿ ನಡೆದಿದ್ದ ಸುಮಾರು ₹60 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ಇತರೆ ಬೆಲೆಬಾಳುವ ವಸ್ತುಗಳ ಕಳ್ಳತನ ಪ್ರಕರಣವನ್ನು ಹೆಬ್ರಿ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತರನ್ನು ತಮಿಳುನಾಡು ಮೂಲದ, ಪ್ರಸ್ತುತ ಕೇರಳದಲ್ಲಿ ವಾಸವಾಗಿರುವ ಸಲೀಂ, ಮೂಡುಬಿದಿರೆಯ ಮಿಜಾರು ನಿವಾಸಿ ಹರೀಶ್ ಶೆಟ್ಟಿ ಹಾಗೂ ಕೇರಳದ ಕಾಸರಗೋಡು ಮೂಲದ ಮಹಮ್ಮದ್ ಸಫ್ಘಾನ್ ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಕೀರ್ತನ್ ಪ್ರಭು ಅವರ ಮನೆಗೆ ನುಗ್ಗಿದ್ದ ಕಳ್ಳರು…