ಚಿಕ್ಕಮಗಳೂರು ಕಲ್ಲುತೂರಾಟ ಪ್ರಕರಣಕ್ಕೆ ಕ್ರಮ: ಸಚಿವ ಡಾ. ಪರಮೇಶ್ವರ್ ಸ್ಪಷ್ಟನೆ
ಮಂಗಳೂರು :ಚಿಕ್ಕಮಗಳೂರಿನಲ್ಲಿ ಹಿಂದೂ ಮನೆ ಮೇಲೆ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.ಕಾನೂನು ಪ್ರಕಾರ ಪೊಲೀಸರು ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತಾರೆ ಎಂದವರು ಹೇಳಿದ್ದಾರೆ.ಹೆಣ್ಣು ಮಗಳು ದಲಿತ ಸಮುದಾಯಕ್ಕೆ ಸೇರಿದವರು ಅಂತಾ ಗೊತ್ತಾಗಿದೆ.ಆ ಪ್ರಕಾರ ಪೊಲೀಸರು ಪಿಸಿಆರ್ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸುತ್ತಾರೆ ಎಂದವರು ಆ ಕುರಿತ ಪ್ರಶ್ನೆಗೆ ಉತ್ತರಿಸಿದರು. ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಸಂಬಂಧಿಸಿದ ಪ್ರಶ್ನೆಗೆ ಅವರು ಯಾಕೆ ಹೋಗ್ತಿದ್ದಾರೆ ಅಂತಾ…