ಫೆ.11ರಿಂದ 14ರ ತನಕ ಕದಿಕೆ ಹಳೆಯಂಗಡಿ ಹರ್ಝತ್ ಸೈಯದ್ ಮೌಲಾನವಲಿಯುಲ್ಲಾಹಿ ದರ್ಗಾದಲ್ಲಿ ಸಂಭ್ರಮದ ಉರೂಸ್ ಆಚರಣೆ
ಮಂಗಳೂರು:ಕದಿಕೆ ಹಳೆಯಂಗಡಿಯ ಹಝತ್ ಸೈಯದ್ ಮೌಲಾನವಲಿಯುಲ್ಲಾಹಿ (ಖ.ಸಿ) ದರ್ಗಾ ಶರೀಫ್ ಇದರ ವಾರ್ಷಿಕ ಉರೂಸ್ ಸಮಾರಂಭವು ಫೆಬ್ರವರಿ 11ರಿಂದ 14ರವರೆಗೆ ಭಕ್ತಿಭಾವದಿಂದ ನಡೆಯಲಿದೆ ಎಂದು ಉರೂಸ್ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಕುಡುಂಬೂರು ತಿಳಿಸಿದ್ದಾರೆ.ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕು ದಿನಗಳ ಕಾಲ ನಡೆಯುವ ಉರೂಸ್ ಕಾರ್ಯಕ್ರಮದಲ್ಲಿ ಧಾರ್ಮಿಕ ಪ್ರವಚನಗಳು, ಸ್ವಲಾತ್ ಮಜ್ಜಿಸ್, ಸಂದಲ್ ಮೆರವಣಿಗೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಉರೂಸ್ ಉದ್ಘಾಟನಾ ಸಮಾರಂಭವು ಫೆಬ್ರವರಿ 11ರ ಬುಧವಾರ…