ಉಡುಪಿ: 15 ದಿನಗಳೊಳಗೆ ನಿರಾಕ್ಷೇಪಣಾ ಪತ್ರದ ವಿಲೇವಾರಿಯಾಗದಿದ್ದರೆ ಅನಿರ್ಧಿಷ್ಟಾವಧಿ ಹೋರಾಟ-ಕರವೇ ಎಚ್ಚರಿಕೆ
ಉಡುಪಿ: ಆರ್.ಟಿ.ಓ. ಕಚೇರಿಯಲ್ಲಿ ಸುಮಾರು 8 ತಿಂಗಳಿನಿಂದ ವಾಹನದ ನಿರಾಕ್ಷೇಪಣಾ ಪತ್ರ (ಸಿಸಿ) ನೀಡದೆ ಸತಾಯಿಸುತ್ತಿದ್ದು, ಇದರಿಂದ ಸಾವಿರಕ್ಕೂ ಹೆಚ್ಚು ನಿರಾಕ್ಷೇಪಣಾ ಪತ್ರದ ಕಡತಗಳು ವಿಲೇವಾರಿಯಾಗದೆ ಉಳಿದುಕೊಂಡಿದೆ. 15 ದಿನಗಳೊಳಗೆ ಬಾಕಿ ಇರುವ ಎಲ್ಲಾ ನಿರಾಕ್ಷೇಪಣಾ ಪತ್ರದ ಕಡತಗಳನ್ನು ವಿಲೇವಾರಿ ಮಾಡಿ ಕೊಡಬೇಕು. ಇಲ್ಲದಿದ್ದರೆ ಸಂಘಟನೆಯಿಂದ ಆರ್.ಟಿ.ಓ. ಕಚೇರಿಯ ಮುಂದೆ ಅನಿರ್ಧಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)ಯ ಉಡುಪಿ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ಅನ್ಸಾರ್ ಅಹಮದ್ ಎಚ್ಚರಿಕೆ ನೀಡಿದ್ದಾರೆ. ಈ…