Avatar

NAMMA MEDIA 24X7

ಪ್ರತಿಷ್ಠಿತ ‘ಧ್ವನಿ ಕೊಟ್ಟ ದಣಿ’ ಪ್ರಶಸ್ತಿಗೆ ಗಡಿನಾಡ ಕನ್ನಡಿಗ ಡಾ. ವಾಮನ್ ರಾವ್ ಬೇಕಲ್ ಆಯ್ಕೆ

ಮೈಸೂರು, ಆ.10: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನದ ಅಂಗವಾಗಿ ನೀಡಲಾಗುವ ಪ್ರತಿಷ್ಠಿತ ‘ಧ್ವನಿ ಕೊಟ್ಟ ದಣಿ’ ಪ್ರಶಸ್ತಿಗೆ ಗಡಿನಾಡ ಕನ್ನಡಿಗ ಹಾಗೂ ಕನ್ನಡ ಭವನದ ರೂವಾರಿ ಡಾ. ವಾಮನ್ ರಾವ್ ಬೇಕಲ್ ಅವರು ಆಯ್ಕೆಯಾಗಿದ್ದಾರೆ. ಸಾಹಿತ್ಯ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಗಣ್ಯರನ್ನು ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಈ ಬಾರಿ ಗಡಿನಾಡಿನಲ್ಲಿ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಉಳಿವು ಮತ್ತು ಬೆಳವಣಿಗೆಗೆ ಡಾ. ವಾಮನ್…

Read More

ವಿಮಾನ ನಿಲ್ದಾಣದ ಸಮಸ್ಯೆ ಖಂಡಿಸಿ ಬಜ್ಪೆ ಪಂಚಾಯತ್‌ನ 19 ಕೌನ್ಸಿಲರ್‌ಗಳ ಪ್ರತಿಭಟನೆ

ಮಂಗಳೂರು: ಬಜ್ಪೆಯಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಲವಾರು ಸಮಸ್ಯೆಗಳು ಉಂಟಾಗುತ್ತಿದೆ ಎಂದು ಆರೋಪಿಸಿ ಬಜ್ಪೆ ಪಟ್ಟಣ ಪಂಚಾಯತ್ ಎಲ್ಲಾ 19 ಕೌನ್ಸಿಲರ್ ಗಳು ಪಕ್ಷಾತೀತವಾಗಿ ಪ್ರತಿಭಟನೆ ನಡೆಸಿದರು. ಈ ವೇಳೆ ವಿಮಾನ ನಿಲ್ದಾಣ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಹೊರಹಾಕಿ ಆಕ್ರೋಶ ಹೊರಹಾಕಿದರು. ಇಲ್ಲಿನ ರಾಜಕಾಲುವೆಗಳಲ್ಲಿ ಹೂಳು ತುಂಬಿದ್ದು, ತಡೆಗೋಡೆ ಕುಸಿದು ಮಳೆಕಾಲದ ವೇಳೆ ಹಲವು ಸಮಸ್ಯೆಗಳು ಉಂಟಾಗುತ್ತಿವೆ. ಇದರಿಂದ ಮರವೂರು ಹಾಗೂ ಕೆಂಜಾರು ಭಾಗದಲ್ಲಿ ಕೂಡ ಸಮಸ್ಯೆ ಉಂಟಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವಿಮಾನ…

Read More

ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆದು ವಿಕೃತಿ : ಸಿ ಸಿ ಟಿವಿಯಲ್ಲಿ ಸೆರೆಯಾದ ದೃಶ್ಯ

ಮಂಜೇಶ್ವರ: ಕುಂಬಳೆ ಪಂಚಾಯತ್ ವ್ಯಾಪ್ತಿಯ ನಾಯ್ಕಾಪು ಪ್ರದೇಶದಲ್ಲಿ ಸಾರ್ವಜನಿಕ ರಸ್ತೆ ಬದಿಗೆ ಕಾರಿನಲ್ಲಿ ಬಂದು ಗೋಣಿಚೀಲಗಳಲ್ಲಿ ತುಂಬಿದ್ದ ತ್ಯಾಜ್ಯವನ್ನು ಎಸೆದು ವಿಕೃತಿ ಮೆರೆದಿರುವುದು ಬೆಳಕಿಗೆ ಬಂದಿದೆ.ಶುಕ್ರವಾರ ಬೆಳಿಗ್ಗೆ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬರು ರಸ್ತೆ ಬದಿ ವಾಹನ ನಿಲ್ಲಿಸಿ, ಮೂರು ಗೋಣಿಚೀಲಗಳಲ್ಲಿದ್ದ ಕಸವನ್ನು ಯಾರಿಗೂ ಕಾಣದಂತೆ ಸುರಿದು ಪರಾರಿಯಾಗಿದ್ದಾನೆ. ​ಈ ಸಂಪೂರ್ಣ ಕೃತ್ಯವು ಸಮೀಪದಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಎಚ್ಚೆತ್ತ ಸ್ಥಳೀಯ ನಾಗರಿಕರು ವಿಡಿಯೋ ದೃಶ್ಯಾವಳಿಗಳನ್ನು ಸಂಗ್ರಹಿಸಿ ತಕ್ಷಣವೇ ಪಂಚಾಯತ್‌ ಅಧಿಕಾರಿಗಳಿಗೆ ಒದಗಿಸಿದ್ದಾರೆ. ಸಾರ್ವಜನಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿರುವ…

Read More

ಸಮಾನ ಮನಸ್ಕರನ್ನು ಒಗ್ಗೂಡಿಸಿ ಹೊಸ ರಾಜಕೀಯ ಪಕ್ಷ: ಚೇತನ್ ಅಹಿಂಸಾ

ಮಂಗಳೂರು:ರಾಜ್ಯದಲ್ಲಿ ಹೊಸ ರಾಜಕೀಯ ಚಳವಳಿಯ ಅಗತ್ಯವಿದ್ದು, ಸಮಾನ ಮನಸ್ಕರನ್ನು ಒಗ್ಗೂಡಿಸಿ ಮುಂದಿನ ಜನವರಿಯೊಳಗೆ ಹೊಸ ಪ್ರಾದೇಶಿಕ ರಾಜಕೀಯ ಪಕ್ಷವನ್ನು ಕಟ್ಟಲಾಗುವುದು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಸ ನಡೆಸಿ ಸಮಾನ ಮನಸ್ಕರು, ಸಾಮಾಜಿಕ ಕಾರ್ಯಕರ್ತರು ಹಾಗೂ ವಿವಿಧ ಕ್ಷೇತ್ರಗಳ ಜನರೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಹಿಂದುತ್ವ ಸೇರಿದಂತೆ ವಿವಿಧ ಸಿದ್ಧಾಂತ ಹಾಗೂ ಅಜೆಂಡಾಗಳನ್ನು ಮುಂದಿಟ್ಟುಕೊಂಡು ಹಲವು ಸಂಘಟನೆಗಳು ಕಾರ್ಯನಿರ್ವಹಿಸುತ್ತಿವೆ. ಆದರೆ ಇಂತಹ…

Read More

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ; ರೌಡಿಶೀಟರ್ ಬಂಧನ

ಮಂಗಳೂರು:ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್‌ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲದ ಮರ್ಗತಲೆ ನಿವಾಸಿ ಮೊಹಮ್ಮದ್ ಶಾಕಿರ್ (31) ಎಂದು ಗುರುತಿಸಲಾಗಿದೆ. ಈತ ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ರೌಡಿಶೀಟರ್ ಆಗಿದ್ದಾನೆ ಎನ್ನಲಾಗಿದೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಸುಮಾರು 12ರಿಂದ 12.20ರ ನಡುವೆ ಘಟನೆ ನಡೆದಿದೆ. ಮದ್ಯಪಾನ ಮಾಡಿದ್ದ ಶಾಕಿರ್ ತಲವಾರು ಹಿಡಿದು ಬಾರ್ ಬಳಿ ಬಂದು ಸಾರ್ವಜನಿಕರಿಗೆ ಬೆದರಿಕೆ ಹಾಕಿದ್ದಾನೆ ಎಂದು…

Read More

ಮೋಂತಿಮಾರ್ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೇವಾ ಕಾರ್ಯಕ್ರಮ

ಬಂಟ್ವಾಳ:ದುರ್ಗಿ ಸೇವಾ ಸಂಘ ಹಾಗೂ ಲಯನ್ಸ್ ಕ್ಲಬ್ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಮೋಂತಿಮಾರ್ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ, ವನಮಹೋತ್ಸವ ಹಾಗೂ ಸಸಿ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ 150ಕ್ಕೂ ಅಧಿಕ ಮಂದಿ ಭಾಗವಹಿಸಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಸೇರಿದಂತೆ ವಿವಿಧ ಸೇವಾ ಸೌಲಭ್ಯಗಳನ್ನು ಪಡೆದುಕೊಂಡರು. ಪರಿಸರ ಸಂರಕ್ಷಣೆ ಹಾಗೂ ಜನಹಿತದ ಉದ್ದೇಶದಿಂದ ವನಮಹೋತ್ಸವದ ಅಂಗವಾಗಿ ಸಸಿ ವಿತರಿಸಲಾಯಿತು. ದುರ್ಗಿ ಸೇವಾ ಸಂಘದ ಅಧ್ಯಕ್ಷೆ ಚಿತ್ರಾ ಎಡಪಡಿತಾಯ, ಕಾರ್ಯದರ್ಶಿ ಜಯಂತಿ…

Read More

ಆಟಿಸಂ, ಕಲಿಕಾ ಸಮಸ್ಯೆ ಹೊಂದಿರುವ ಮಕ್ಕಳಿಗಾಗಿ ‘ಅರ್ಜುನ್ ಶೆಟ್ಟಿ ಸ್ಮರಣಾರ್ಥ ಶಾಲೆ’ ಆರಂಭ

ಮಂಗಳೂರು : ಆಟಿಸಂ ಹಾಗೂ ನಿರ್ದಿಷ್ಟ ಕಲಿಕಾ ಸಮಸ್ಯೆ ಹೊಂದಿರುವ ಮಕ್ಕಳ ಸಮಗ್ರ ಶಿಕ್ಷಣ ಮತ್ತು ಪುನರ್ವಸತಿಗೆ ನೆರವಾಗುವ ಉದ್ದೇಶದಿಂದ ಶಕ್ತಿನಗರದ ಸಾನಿಧ್ಯ ಸಂಸ್ಥೆಯಲ್ಲಿ ‘ಅರ್ಜುನ್ ಶೆಟ್ಟಿ ಸ್ಮರಣಾರ್ಥ ಶಾಲೆ’ ಇಂದು ಲೋಕಾರ್ಪಣೆ ಗೊಂಡಿತ್ತು . ಅರ್ಜುನ್ ಶೆಟ್ಟಿ ಫೌಂಡೇಶನ್‌ನ ಸ್ಥಾಪಕ ಸಿಎ ಸುಧೀರ್ ಶೆಟ್ಟಿ ಅವರ ಪುತ್ರ ಅರ್ಜುನ್ ಶೆಟ್ಟಿ ಅವರ ಸ್ಮರಣಾರ್ಥ ಆರಂಭಿಸಲಾದ ಶಾಲೆಯಲ್ಲಿ ಮಕ್ಕಳಿಗೆ ಅಗತ್ಯವಿರುವ ವಿವಿಧ ಥೆರಪಿಗಳೊಂದಿಗೆ ರಾಜ್ಯ ಹಾಗೂ ರಾಷ್ಟ್ರೀಯ ಮುಕ್ತ ಶಾಲೆಗಳ ಸಹಯೋಗದಲ್ಲಿ ಪದವಿ ಪೂರ್ವ ಶಿಕ್ಷಣದವರೆಗೆ ಕಲಿಕಾ…

Read More

ಮಂಜೇಶ್ವರ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಪರಿಹರಿಸಲು ಡಿವೈಎಫ್‌ಐ ಆಗ್ರಹ

ಮಂಜೇಶ್ವರ: ಮಂಜೇಶ್ವರ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯನ್ನು ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ವತಿಯಿಂದ ತಾಲೂಕು ಆಸ್ಪತ್ರೆ ಮಾರ್ಚ್ ನಡೆಸಲಾಯಿತು. ಆಸ್ಪತ್ರೆಯಲ್ಲಿ ಅಗತ್ಯ ಸಂಖ್ಯೆಯ ವೈದ್ಯರ ಕೊರತೆಯಿಂದಾಗಿ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಡಿವೈಎಫ್‌ಐ ಜಿಲ್ಲಾ ಅಧ್ಯಕ್ಷ ಕಾಂ. ಎಂ.ವಿ. ರತೀಶ್ ಮಾರ್ಚ್‌ನ್ನು ಉದ್ಘಾಟಿಸಿ ಮಾತನಾಡಿದರು. ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ಸಾರ್ವಜನಿಕ ಆರೋಗ್ಯ ಸೇವೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕೆಂದು ಅವರು ಒತ್ತಾಯಿಸಿದರು….

Read More

ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಡಾ. ಅನುರಾಧಾ ಕುರುಂಜಿಯವರಿಗೆ ಅರಂಬೂರಿನಲ್ಲಿ ಸನ್ಮಾನ

ಗಡಿನಾಡು ಕಾಸರಗೋಡಿನ ಕನ್ನಡ ಭವನದವರು ಕೊಡಮಾಡಿದ ನಾಡೋಜ ಡಾ. ಕಯ್ಯಾರ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು, ಅರಂಬೂರು ಘಟಕ ಗೌಡ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷರಾದ ಡಾ. ಅನುರಾಧಾ ಕುರುಂಜಿಯವರನ್ನು ಅರಂಬೂರಿನಲ್ಲಿ ಸನ್ನಾನಿಸಲಾಯಿತು. ಅರಂಬೂರು ಘಟಕ ಗೌಡ ಸಮಿತಿಯ ವತಿಯಿಂದ ನಡೆದ ಆಟಿ ಆಚರಣೆಯ ಸಮಾರೋಪ ಸಮಾರಂಭದ ವೇದಿಕೆಯಲ್ಲಿ ಗೌಡ ಬಾಂಧವರೆಲ್ಲರೂ ಸೇರಿ ಗೌಡ ಸಂಸ್ಕೃತಿಯಂತೆ ಆರತಿ ಎತ್ತಿ, ಸಾಂಪ್ರದಾಯಿಕವಾಗಿ ಕುಂಕುಮ, ಅರಶಿನ , ಬಳೆ, ಸ್ಮರಣಿಕೆಗಳನ್ನು…

Read More

ಡಾ ll ಎನ್. ಎಸ್. ಎ. ಎಂ. ಕನ್ನಡ ಮಾಧ್ಯಮ ಪ್ರೌಢ ಶಾಲೆ ನಿಟ್ಟೆಯಲ್ಲಿ ಮಾಧ್ಯಮ ಹಾಗೂ ಅಂತರ್ಜಾಲದ ಬಳಕೆ ಬಗ್ಗೆ ಜಾಗೃತಿ ಕಾರ್ಯಕ್ರಮ

NMAM IT ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಮಾಹಿತಿ ವಿಜ್ಞಾನ ಹಾಗೂ ಇಂಜಿನಿಯರಿಂಗ್ ವತಿಯಿಂದಡಾ ll ಎನ್. ಎಸ್. ಎ. ಎಂ. ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಮಾಧ್ಯಮ ಹಾಗೂ ಅಂತರ್ಜಾಲದ ಬಳಕೆಯ ಕುರಿತಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನಿಟ್ಟೆ NMAMlT ಕಂಪ್ಯೂಟರ್ ಸೈನ್ಸ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ ll ಶಶಾಂಕ್ ಶೆಟ್ಟಿಮಾತನಾಡಿ ಇಂದಿನ ದಿನಗಳಲ್ಲಿ ಮಧ್ಯಮಗಳು ಬಹಳ ಉಪಕ್ತ ಹಾಗೂ ಅಷ್ಟೇ ಅಪಾಯಕಾರಿ ಕೂಡಾ ಆಗಿರುವುದರಿಂದ ವಿದ್ಯಾರ್ಥಿಗಳು ಅತ್ಯಂತ ಜಾಗರೂಕರಾಗಿರಬೇಕು ಎಂದು…

Read More
error: Content is protected !!