ಸೋಂಕಾಲಿನಲ್ಲಿ ಅಬೂಬಕ್ಕರ್ ಸಿದ್ದಿಕ್ ಹುತಾತ್ಮ ದಿನಾಚರಣೆ
ಉಪ್ಪಳ, ಆ. 6: ಡಿವೈಎಫ್ಐ ಕಾರ್ಯಕರ್ತ ಅಬೂಬಕ್ಕರ್ ಸಿದ್ದಿಕ್ ಅವರ ಹುತಾತ್ಮ ದಿನಾಚರಣೆಯನ್ನು ಸೋಂಕಾಲಿನಲ್ಲಿ ಗುರುವಾರ ಆಚರಿಸಲಾಯಿತು.ಕಾರ್ಯಕ್ರಮವನ್ನು ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ರಜೀಶ್ ವೆಲ್ಲಾಟ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಅಬೂಬಕ್ಕರ್ ಸಿದ್ದಿಕ್ ಅವರ ಹೋರಾಟದ ಆದರ್ಶಗಳು ಯುವಜನತೆಗೆ ಸ್ಫೂರ್ತಿದಾಯಕವಾಗಿದ್ದು, ಅವರ ತ್ಯಾಗವನ್ನು ಸದಾ ಸ್ಮರಿಸಬೇಕಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಬೀರ್ ವಹಿಸಿದ್ದರು. ಈ ಸಂದರ್ಭದಲ್ಲಿ ಡಿವೈಎಫ್ಐ ಜಿಲ್ಲಾ ಅಧ್ಯಕ್ಷ ಎಂ.ವಿ. ರತೀಶ್, ಜಿಲ್ಲಾ ಜಂಟಿ ಕಾರ್ಯದರ್ಶಿ ಸಾದಿಕ್ ಚೆರುಗೋಳಿ, ಜಿಲ್ಲಾ ಉಪಾಧ್ಯಕ್ಷ ನಸೀರುದ್ದೀನ್…
