Avatar

NAMMA MEDIA 24X7

ಅಪ್ರಾಪ್ತರಿಗೆ ಮದ್ಯ ನೀಡಿದರೆ ಕಠಿಣ ಕ್ರಮ: ಎಸ್ಪಿ ಹರಿರಾಮ್ ಶಂಕರ್ ಎಚ್ಚರಿಕೆ

ಉಡುಪಿ: ಅಬಕಾರಿ ನಿಯಮಗಳ ಪ್ರಕಾರ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಅಥವಾ ಪೂರೈಕೆ ಮಾಡುವ ಬಾರ್ ಹಾಗೂ ಪಬ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದ್ದಾರೆ.ಮಣಿಪಾಲ ಪ್ರದೇಶದಲ್ಲಿ ಅಪ್ರಾಪ್ತರಿಗೆ ಮದ್ಯ ಪೂರೈಕೆ ಹಾಗೂ ಬಾರ್–ಪಬ್‌ಗಳಲ್ಲಿ ನಿಯಮ ಉಲ್ಲಂಘನೆ ನಡೆಯುತ್ತಿರುವ ಕುರಿತು ದೊರೆತ ಮಾಹಿತಿಯ ಆಧಾರದ ಮೇಲೆ ಪೊಲೀಸರು ವಿಶೇಷ ತಂಡ ರಚಿಸಿ ವಿವಿಧ ಬಾರ್ ಮತ್ತು ಪಬ್‌ಗಳ ಮೇಲೆ ದಾಳಿ ನಡೆಸಿದರು….

Read More

ಪ್ರತಿ ವರ್ಷದಂತೆ ಈ ಬಾರಿಯೂ ನೇತ್ರಾವತಿ ನದಿಗೆ ಅಪಾಯಕಾರಿ ಜಿಗಿತ..!ಆಡಳಿತದ ಎಚ್ಚರಿಕೆಗೂ ಕ್ಯಾರೇ ಇಲ್ಲ; ಜೀವದೊಂದಿಗೆ ಚೆಲ್ಲಾಟಕ್ಕೆ ಸಾರ್ವಜನಿಕರ ಆಕ್ರೋಶ

ಬಂಟ್ವಾಳ: ಮಳೆಗಾಲದಲ್ಲಿ ನೇತ್ರಾವತಿ ನದಿ ಅಪಾಯದ ಮಟ್ಟ ತಲುಪಿದಾಗ ಸಾರ್ವಜನಿಕರು ನದಿ ತೀರಕ್ಕೆ ತೆರಳದಂತೆ ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ಪದೇ ಪದೇ ಮನವಿ ಮಾಡುತ್ತಿದ್ದರೂ, ಕೆಲವರು ಜೀವದ ಹಂಗು ತೊರೆದು ಅಪಾಯಕಾರಿ ಸಾಹಸಕ್ಕೆ ಮುಂದಾಗುತ್ತಿರುವ ದೃಶ್ಯಗಳು ಮತ್ತೆ ಬೆಳಕಿಗೆ ಬಂದಿವೆ. ಪ್ರತಿ ವರ್ಷದಂತೆ ಈ ಬಾರಿಯೂ ಪಾಣೆಮಂಗಳೂರು ಹಳೆಯ ಸೇತುವೆ ಮೇಲಿಂದ ನೇತ್ರಾವತಿ ನದಿಗೆ ಯುವಕರು ಹಾಗೂ ಬಾಲಕರು ಜಿಗಿಯುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಕೆಲವು ದೃಶ್ಯಗಳಲ್ಲಿ ಅಪ್ರಾಪ್ತ ಬಾಲಕರು ಕೂಡ…

Read More

ಬಿಐಇ ಎಸ್, ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಭತ್ತದ ಗದ್ದೆ ಭೇಟಿ, ನೇಜಿ ನೆಡುವ ಕಾರ್ಯಕ್ರಮ

ಇನ್ನೋಳಿ: ಮಂಗಳೂರಿನ ಇನ್ನೋಳಿಯ ಬಿಯರೀಸ್ ಇನ್‌ಸ್ಟಿಟ್ಯೂಟ್ ಆಫ್ ಎಮರ್ಜಿಂಗ್ ಸೈನ್ಸಸ್ (BIES) ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಜುಲೈ 30ರಂದು ಮಾರ್ಕಮೆ ಗ್ರಾಮದಲ್ಲಿ ಭತ್ತದ ಗದ್ದೆ ಭೇಟಿ ಹಾಗೂ ನೇಜಿ ನೆಡುವ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ಕೃಷಿ ಪದ್ಧತಿಗಳ ಬಗ್ಗೆ ಪ್ರಾಯೋಗಿಕ ಅನುಭವ ನೀಡುವುದು, ಕೃಷಿಯ ಮಹತ್ವದ ಕುರಿತು ಅರಿವು ಮೂಡಿಸುವುದು ಹಾಗೂ ದೇಶದ ಆಹಾರ ಭದ್ರತೆಯಲ್ಲಿ ರೈತರ ಪಾತ್ರವನ್ನು ಪರಿಚಯಿಸುವುದಾಗಿತ್ತು. ಕಾರ್ಯಕ್ರಮದಲ್ಲಿ ಬಿಸಿಎ, ಬಿ.ಕಾಂ ಹಾಗೂ ಬಿಬಿಎ ವಿಭಾಗಗಳ…

Read More

ಬಂಟ್ವಾಳದಲ್ಲಿ ನಾಪತ್ತೆಯಾಗಿದ್ದ ಜೀವನ್ ಪಿಂಟೋ ಶವವಾಗಿ ಪತ್ತೆ

ಬಂಟ್ವಾಳ ತಾಲ್ಲೂಕಿನ ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೀವನ್ ಪಿಂಟೋ ಅವರು ಮೊನ್ನೆ ರಾತ್ರಿ ಭಾರೀ ಮಳೆಯ ನಡುವೆ ಮನೆಯಿಂದ ಸ್ವಲ್ಪ ದೂರದಲ್ಲಿರುವ ತಮ್ಮ ಮಾವನ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ದಾರಿಯಲ್ಲಿದ್ದ ನೀರಿನ ತೋಡಿಗೆ ನಿರ್ಮಿಸಿದ್ದ ಕಾಲುಸಂಕ ದಾಟುವಾಗ ಕಾಲು ಜಾರಿ ಹರಿಯುತ್ತಿದ್ದ ನೀರಿಗೆ ಬಿದ್ದು ಕೊಚ್ಚಿ ಹೋಗಿದ್ದರು. ಘಟನೆ ಬಳಿಕ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಆರಂಭಿಸಿದ್ದು, ನಿನ್ನೆ ದಿನವಿಡೀ ಎನ್‌ಡಿಆರ್‌ಎಫ್ ತಂಡವೂ ತೀವ್ರ ಶೋಧ ನಡೆಸಿತ್ತು. ಘಟನಾ ಸ್ಥಳದ…

Read More

ಬಾಳಿನ ಚಿತ್ರಣ

ಸೊಗದ ಚೆಲುವ ಪ್ರಕೃತಿಯಲಿಮೊಗ್ಗು ಅರಳಿದೆ ಸುಮವಾಗಿಉದಯ ನೇಸರನ ಕಿರಣಗಳುಹೊಳೆವುದು ಹೊನ್ನ ಬೆಳಕಾಗಿ ನವಿಲ ಸುಂದರ ನರ್ತನ ಕಂಡುತುಂಬಿದ ಮನವು ಪುಳಕವಾಗಿಮಾಮರದಿ ಸ್ವರ ಕೋಗಿಲೆಯುಧ್ವನಿ ಗೂಡಿಸಿದೆ ಸುಶ್ರಾವ್ಯವಾಗಿ ಮುಂಜಾನೆಯು ಇಬ್ಬನಿ ಸುರಿದುಮಂಜು ಕವಿದು ಧರೆ ಮಸುಕಾಗಿನವ ದಿನವೊಂದು ಉದಯಿಸಿತುಬಾಳುವ ಸುಂದರ ಬದುಕಿಗಾಗಿ ಕರ್ತವ್ಯ ಪಾಲನೆಯ ಕಾಯಕದಿದಿನವೊಂದು ಕಳೆಯೇ ಕ್ಷಣವಾಗಿಸುಖ ಸಂತೋಷವು ಜೊತೆಗಿರಲುಜಾರಿತು ಕಷ್ಟಗಳು ಕರಗಿ ನೀರಾಗಿ ವರ್ಷಗಳು ಸಾಗಿ ಸರಿಯುತಿಹುದುದಿನದಗಳ ತೆರದಿ ಬಹಳ ವೇಗವಾಗಿದೊರೆತ ಜೀವನ ಅಂತ್ಯಗೊಳುವುದುಪಡೆದಿಹ ಆಯುಷ್ಯವು ಕಡಿಮೆಯಾಗಿ ಬರವಣಿಗೆ: ಡಾ. ವಾಣಿಶ್ರೀ ಕಾಸರಗೋಡುಗಡಿನಾಡ ಕನ್ನಡತಿ

Read More

ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಮಠ ಎಂಬಲ್ಲಿ ನೇತ್ರಾವತಿ ನದಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಗಂಡಸಿನ ಮೃತದೇಹವೊಂದು ನದಿ ಬದಿಯ ಪೊದೆಯಲ್ಲಿ ಪತ್ತೆಯಾಗಿದೆ. ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಮೃತದೇಹವನ್ನು ದಡಕ್ಕೆ ತಂದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸುಮಾರು 30ರಿಂದ 40ರ ವಯೋಮಾನದ ವ್ಯಕ್ತಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ನಿವಾಸಿ ಕೆ.ಮುಹಮ್ಮದ್ ನಾಸಿರ್ ಎಂಬವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಗುರುತು ಪತ್ತೆಯಾದಲ್ಲಿ ಉಪ್ಪಿನಂಗಡಿ ಪೊಲೀಸ್…

Read More

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಯಶವಂತರಾಯಗೌಡ ಪಾಟೀಲ್ ಅಸಮಾಧಾನ; ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟವು ಸೋಮವಾರ ಸಂಜೆ ವಿಸ್ತರಣೆಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ಸಚಿವ ಸ್ಥಾನದಿಂದ ವಂಚಿತರಾದ ಕೆಲವು ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಕೊನೆ ಕ್ಷಣದಲ್ಲಿ ಅವಕಾಶ ಕೈತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಳೆ ಶಾಸಕ ಸ್ಥಾನ ಹಾಗೂ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ…

Read More

ಆಗಸ್ಟ್ 8ರಂದು ‘ಸಾನಿಧ್ಯ ಅರ್ಜುನ್ ಶೆಟ್ಟಿ ಶಾಲೆ’ ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆ … !

ಮಂಗಳೂರು: ವಿಶೇಷ ಸಾಮರ್ಥ್ಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ತರಬೇತಿ ಒದಗಿಸುವ ಉದ್ದೇಶದಿಂದ ನಿರ್ಮಾಣಗೊಂಡಿರುವ ‘ಸಾನಿಧ್ಯ ಅರ್ಜುನ್ ಶೆಟ್ಟಿ ಶಾಲೆ’ಯ ಉದ್ಘಾಟನಾ ಸಮಾರಂಭವು ಆಗಸ್ಟ್ 8ರಂದು (ಶನಿವಾರ) ಬೆಳಿಗ್ಗೆ 9.20ಕ್ಕೆ ಶಕ್ತಿನಗರದ ಸಾನಿಧ್ಯ ಶಾಲೆಯ ಆವರಣದಲ್ಲಿ ನಡೆಯಲಿದೆ. ಶ್ರೀ ಕ್ಷೇತ್ರ ಸುತ್ತೂರು ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯು.ಟಿ. ಖಾದರ್…

Read More

ಸಹಕಾರ ಕ್ಷೇತ್ರದ ಪಿತಾಮಹ ಮೊಳಹಳ್ಳಿ ಶಿವರಾವ್ ಜೀವನಗಾಥೆ ಅನಾವರಣ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ

ಮಂಗಳೂರು: ಸಹಕಾರ ಕ್ಷೇತ್ರದ ಪಿತಾಮಹರೆಂದೇ ಖ್ಯಾತರಾದ ಮೊಳಹಳ್ಳಿ ಶಿವರಾವ್ ಅವರ ಬದುಕು, ತ್ಯಾಗ ಮತ್ತು ಸಮಾಜಮುಖಿ ಸೇವೆಯನ್ನು ದಾಖಲಿಸುವ ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಬ್ಯಾಂಕ್ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು. ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ರಚಿಸಿರುವ ಈ ಕೃತಿಯು, ಸಹಕಾರದ ಮೂಲಕ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗೆ ಬದುಕನ್ನೇ ಮುಡಿಪಾಗಿಟ್ಟ ಮೊಳಹಳ್ಳಿ ಶಿವರಾವ್ ಅವರ ಸಾಧನೆಗಳನ್ನು ದಾಖಲಿಸಿದೆ….

Read More

ಸ್ಮಶಾನ ಅಭಿವೃದ್ಧಿಗೆ ಅಗ್ರಹಿಸಿ ವರ್ಕಾಡಿ ಪಂಚಾಯತ್ ಕಚೇರಿಗೆ ಬಿಜೆಪಿ ಮುತ್ತಿಗೆ

ವರ್ಕಾಡಿ : ವರ್ಕಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಏಕೈಕ ಹಿಂದೂ ರುದ್ರಭೂಮಿ ಯನ್ನು ಅಭಿವೃದ್ಧಿ ಮಾಡದೇ ಮತ್ತು ಶವ ಸಂಸ್ಕಾರಕ್ಕೆ ಅವಕಾಶ ಮಾಡಿ ಕೊಡದ ಕಾಂಗ್ರೆಸ್ ಮುಸ್ಲಿಂ ಲೀಗ್ ನೇತೃತ್ವದ ವರ್ಕಾಡಿ ಪಂಚಾಯತ್ ಆಡಳಿತ ಉದ್ದೇಶಪೂರ್ವಕ ಹಿಂದೂ ಗಳ ಮೂಲಭೂತ ಅವಕಾಶ ಗಳನ್ನು ಕಡೆಗಣಿಸುತಿದೆ. ವರ್ಕಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಹಿಂದೂಗಳು ಮರಣ ಹೊಂದಿದರೆ ಪಕ್ಕದ ಕರ್ನಾಟಕ ದಲ್ಲಿ ಶವ ಸಂಸ್ಕಾರ ಮಾಡಬೇಕಾದ ಪರಿಸ್ಥಿತಿ ಯನ್ನು ವಿರೋಧಿಸಿ ಕೂಡಲೇ ಪಂಚಾಯತ್ ಆಡಳಿತ ಇರುವ ಸ್ಮಶಾನ ದ ಸಮಗ್ರ ಅಭಿವೃದ್ಧಿ…

Read More
error: Content is protected !!