ಕಾಮನ್‌ವೆಲ್ತ್ 2026: 39 ಪದಕಗಳೊಂದಿಗೆ ಭಾರತಕ್ಕೆ ನಾಲ್ಕನೇ ಸ್ಥಾನ
ನವದೆಹಲಿ: 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಭಿಯಾನ ಯಶಸ್ವಿಯಾಗಿ ಅಂತ್ಯಗೊಂಡಿದ್ದು, ಒಟ್ಟು 39 ಪದಕಗಳನ್ನು ಗೆಲ್ಲುವ ಮೂಲಕ ಭಾರತ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಭಾರತ 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿದೆ. ಕ್ರೀಡಾಕೂಟದ 11ನೇ ಹಾಗೂ ಅಂತಿಮ ದಿನ ಭಾರತಕ್ಕೆ ಯಾವುದೇ ಪದಕ ಲಭಿಸಲಿಲ್ಲ. ಜೂಡೋ ಸ್ಪರ್ಧೆಯಲ್ಲಿ ಮಹಿಳೆಯರ –78 ಕೆಜಿ ವಿಭಾಗದ ಕಂಚಿನ ಪದಕದ ಪಂದ್ಯದಲ್ಲಿ ಇಶ್ರೂಪ್ ನಾರಂಗ್ ಸೋಲು ಕಂಡರೆ, ಪ್ಯಾರಾ ಸೈಕ್ಲಿಂಗ್‌ನ ಮಹಿಳೆಯರ C4–C5…
