ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಡಾ. ಶಾಂತಾ ಪುತ್ತೂರಿಗೆ ನಾಡೋಜ ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸಾಹಿತಿ, ಶಿಕ್ಷಕಿ,ಸಂಘಟಕಿ, ಸಂಪನ್ಮೂಲ ವ್ಯಕ್ತಿ ಆದ ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ ಡಾ.ಶಾಂತಾ ಪುತ್ತೂರು ರವರಿಗೆ ನಾಡೋಜ ಡಾ.ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ 2026ನ್ನು ಜುಲೈ 26ರಂದು ಗಡಿನಾಡು ಕಾಸರಗೋಡಿನ ಕನ್ನಡ ಭವನದರಜತ ಸಂಭ್ರಮದ ಸಮಾರೋಪ ಸಮಾರಂಭ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಶ್ರೀಮದ್ ಎಡನೀರು ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಹಸ್ತಗಳಿಂದ ಪ್ರದಾನ ಮಾಡಲಾಯಿತು. ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಕಾಸರಗೋಡು ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ.ವಾಮನ್ ರಾವ್…
