Avatar

NAMMA MEDIA 24X7

2010ರ ಕೊಲೆ ಪ್ರಕರಣದ ಪ್ರಮುಖ ಆರೋಪಿ 16 ವರ್ಷಗಳ ಬಳಿಕ ಉಪ್ಪಳದಲ್ಲಿ ಬಂಧನ

​ಕಾಸರಗೋಡು: 2010ರಲ್ಲಿ ನಡೆದ ತೀಕ್ಷ್ಣ ಕೊಲೆ ಪ್ರಕರಣದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಉಪ್ಪಳದಲ್ಲಿ ಕಣ್ಣೂರು ಸಿಟಿ ಪೊಲೀಸರ ವಿಶೇಷ ಪಡೆ ಬಂಧಿಸಿದೆ.ವಾಳಯಿಲ್ ಮುಹಮ್ಮದ್ ಅಲಿ (55) ಬಂಧಿತ ಆರೋಪಿ.​ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಅಳಿಯ ಮುಹಮ್ಮದ್ ಅಲಿ, ಬಾಮೈದರಾದ ಜಲಾಲ್ ಹಾಗೂ ಶಂಸೀರ್‌ಗೆ ಚೂರಿಯಿಂದ ಇರಿದಿದ್ದನು. ಗಂಭೀರ ಗಾಯಗೊಂಡಿದ್ದ ಜಲಾಲ್ ಸಾವನ್ನದ್ದರೆ, ಶಂಸೀರ್ ಚೇತರಿಸಿಕೊಂಡಿದ್ದರು. ಈ ಘಟನೆಗೆ ಸಂಬಂಧಿಸಿ ವಳಪಟ್ಟಣಂ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆದರೆ, ಜಾಮೀನಿನಲ್ಲಿ ಹೊರಬಂದ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ​ಕೇರಳ ಮತ್ತು ಕರ್ನಾಟಕದ…

Read More

ಕೃಷ್ಣಾಷ್ಟಮಿ ಹೂವಿನ ವ್ಯಾಪಾರಕ್ಕೆ ಪಾಲಿಕೆ ಕಾರ್ಯಾಚರಣೆ; ಲಾರಿ ತಡೆದು ವ್ಯಾಪಾರಿಗಳ ಆಕ್ರೋಶ

ಮಂಗಳೂರು: ಕೃಷ್ಣಾಷ್ಟಮಿ ಹಬ್ಬದ ಪ್ರಯುಕ್ತ ಹೂವಿನ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳ ವಿರುದ್ಧ ನಗರಪಾಲಿಕೆ ಕಾರ್ಯಾಚರಣೆಗೆ ಮುಂದಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಮಿನಿವಿಧಾನಸೌಧದ ಎದುರು ಹೂವಿನ ವ್ಯಾಪಾರಕ್ಕೆ ಸಂಬಂಧಿಸಿದಂತೆ ಪಾಲಿಕೆ ಲಾರಿ ಕಾರ್ಯಾಚರಣೆಗೆ ಬಂದಿದ್ದು, ಇದನ್ನು ವ್ಯಾಪಾರಿಗಳು ತಡೆದು ಪ್ರತಿಭಟಿಸಿದ್ದಾರೆ. ಹಬ್ಬದ ಸಂದರ್ಭದಲ್ಲೂ ವ್ಯಾಪಾರ ನಡೆಸಲು ಅವಕಾಶ ನೀಡದಿರುವುದಕ್ಕೆ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಷ್ಣಾಷ್ಟಮಿ ಹಬ್ಬದ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಈ ಘಟನೆ ನಡೆದಿದ್ದು, ಮಿನಿವಿಧಾನಸೌಧದ ಎದುರು…

Read More

ಜೆಪ್ಪು ಬಪ್ಪಾಲ್ ತಾಂತಿನಗರ ರಸ್ತೆ ಅಭಿವೃದ್ಧಿಗೆ ₹40 ಲಕ್ಷ ಅನುದಾನ; ಗುದ್ದಲಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 55ನೇ ಅತ್ತಾವರ ವಾರ್ಡಿನ ಜೆಪ್ಪು ಬಪ್ಪಾಲ್ ತಾಂತಿನಗರ 2ನೇ ಮತ್ತು 3ನೇ ಅಡ್ಡರಸ್ತೆಗಳ ರಸ್ತೆ ಅಭಿವೃದ್ಧಿ ಕಾಮಗಾರಿಯು 40 ಲಕ್ಷ ರೂ. ವಿಶೇಷ ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು. ನಂತರ ಮಾತನಾಡಿದ ಶಾಸಕರು, ಈ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ಸ್ಥಳೀಯ ಬಿಜೆಪಿ ಪ್ರಮುಖರು, ನಿವಾಸಿಗಳು ಸಾಕಷ್ಟು ಬಾರಿ ನನ್ನಲ್ಲಿ ಮನವಿ ಮಾಡಿದ್ದರು. ಅದರಂತೆ ಅನುದಾನಗಳನ್ನು ಜೋಡಿಸಿಕೊಂಡು ಈ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕರಿಗೆ…

Read More

ಪೆರ್ನೆ ಸಮೀಪ ಮಹಿಳೆ ಅನುಮಾನಾಸ್ಪದ ಸಾವು; ಆತ್ಮಹತ್ಯೆಯೇ, ಕೊಲೆಯೇ ಎಂಬ ಶಂಕೆ

ಮಂಗಳೂರು /ಉಪ್ಪಿನಂಗಡಿ: ಪೆರ್ನೆ ಸಮೀಪ ಮಹಿಳೆಯೊಬ್ಬರು ಮನೆಯೊಳಗೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮಹಿಳೆಯ ಮೃತದೇಹ ಮನೆಯೊಳಗೆ ನೇಣು ಬಿಗಿದು ಅರ್ದ ಕಾಲು ನೆಲದ ಮೇಲೆ ಇದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸಾವಿನ ಸುತ್ತ ಹಲವು ಅನುಮಾನಗಳು ಮೂಡಿವೆ.ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.ಮೃತ ಮಹಿಳೆಯನ್ನು ಸೇವಾ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಕಾವ್ಯ ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಮೃತರಿಗೆ ಇಬ್ಬರು ಮಕ್ಕಳಿದ್ದು ಇತ್ತೀಚೆಗೆ ಹೆಣ್ಣು ಮಗಳ ಮದುವೆ ನೆರವೇರಿಸಿದ್ದರು.ಅವರು…

Read More

ಫಾತಿಮಾ ನಿಶಾನ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಶರತ್ತುಬದ್ಧ ಜಾಮೀನು

ಮಂಗಳೂರು:ಸುಳ್ಯದ ಕಡೆಪಾಲ ಬಳಿ ನಿಗೂಢವಾಗಿ ಕೊಲೆಯಾಗಿದ್ದ ಫಾತಿಮಾ ನಿಶಾನ ಕೊಲೆ ಆರೋಪಿಗಳಿಗೆ ಪುತ್ತೂರು ಐದನೇ ಹೆಚ್ಚುವರಿ ಸತ್ರ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜು.18 ರಂದು ರಾತ್ರಿ ಮಾವ ಅಲವಿ, ಅತ್ತೆ ಆಯಿಷಾ ಹಾಗೂ ನಾದಿನಿ ಫಸೀಲಾ ಹಿಂಸೆ ನೀಡಿ ಕೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಸುಳ್ಯ ಹಿರಿಯ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಆಯಿಷಾ ಮತ್ತು ಫಸೀಲಾ ಪರವಾಗಿ ಪುತ್ತೂರು…

Read More

ಸೆ.5ರಂದು ಮಂಗಳೂರಿನಲ್ಲಿ ‘ರೈಸ್ ಆ್ಯಂಡ್ ರೆಕ್ಲೈಮ್’ ಮಹಿಳಾ ಸಮ್ಮೇಳನ

ಮಂಗಳೂರು: ಮಹಿಳೆಯರಲ್ಲಿ ಜಾಗೃತಿ ಮೂಡಿಸುವುದು ಹಾಗೂ ನಾಯಕತ್ವ ಸಾಮರ್ಥ್ಯವನ್ನು ಬೆಳೆಸುವ ಉದ್ದೇಶದಿಂದ ವಿಮೆನ್ ಇಂಡಿಯಾ ಮೂವ್‌ಮೆಂಟ್ ವತಿಯಿಂದ ಸೆ.5ರಂದು ಮಂಗಳೂರಿನ ಪುರಭವನದಲ್ಲಿ ‘ರೈಸ್ ಆ್ಯಂಡ್ ರೆಕ್ಲೈಮ್’ ಧ್ಯೇಯವಾಕ್ಯದಡಿ ಮಹಿಳಾ ಸಮ್ಮೇಳನ ಆಯೋಜಿಸಲಾಗಿದೆ ಎಂದು ಎಸ್‌ಡಿಪಿಐ ರಾಜ್ಯ ಸದಸ್ಯೆ ಮಿಸ್ರಿಯಾ ಕಣ್ಣೂರು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಜನಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರು ಕೇವಲ ಕುಟುಂಬ ನಿರ್ವಹಣೆಗೆ ಸೀಮಿತವಾಗದೆ, ದೇಶದ ಭವಿಷ್ಯ ರೂಪಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ರಾಜಕೀಯ, ಆಡಳಿತ, ಆರ್ಥಿಕತೆ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಸಮಾನ…

Read More

ಸುಳ್ಯದ ಕಲ್ಲಪಳ್ಳಿಯಲ್ಲಿ ಅನುಮಾನಾಸ್ಪದವಾಗಿ ಚಿರತೆ ಸಾವು

ಮಂಗಳೂರು: ಸುಳ್ಯದ ಕಲ್ಲಪಳ್ಳಿಯಲ್ಲಿ ಚಿರತೆಯೊಂದು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಕಲ್ಲಪಳ್ಳಿ ಪ್ರದೇಶದ ಪೆರುಮುಂಡ ಗೋಪಾಲ ಗೌಡ ಎಂಬವರ ಜಾಗದಲ್ಲಿ ಚಿರತೆ ಸತ್ತು ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೇಟೆಯಾಡುವ ವೇಳೆ ಯಾವುದೋ ಪ್ರಾಣಿಯನ್ನು ಅಟ್ಟಾಡಿಸಿಕೊಂಡು ಬರುವಾಗ ಆಕಸ್ಮಿಕವಾಗಿ ಬಿದ್ದು ಚಿರತೆ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಪಶುವೈದ್ಯರು ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ್ದು,…

Read More

ಅನಿವಾಸಿ ಮತದಾರರು ಖುದ್ದಾಗಿ ERO ಮುಂದೆ ಹಾಜರಾಗಲು ಸೂಚನೆ : SIR ಹೆಸರಿನಲ್ಲಿ ಮತದಾನದ ಹಕ್ಕಿಗೆ ಅಡ್ಡಿ — SDPI ಆಕ್ರೋಶ

ಮಂಗಳೂರು: SIR ಪ್ರಕ್ರಿಯೆಯಲ್ಲಿ ನೋಟಿಸ್ ಪಡೆದಿರುವ ವಿದೇಶದಲ್ಲಿರುವ ಅನಿವಾಸಿ ಮತದಾರರು ಖುದ್ದಾಗಿ ERO ಮುಂದೆ ಹಾಜರಾಗಬೇಕು ಎಂಬ ಚುನಾವಣಾ ಆಯೋಗದ ನಿರ್ದೇಶನವು SIR ಹೆಸರಿನಲ್ಲಿ ಚುನಾವಣಾ ಆಯೋಗ ಮತದಾನದ ಹಕ್ಕಿಗೆ ಅಡ್ಡಿಪಡಿಸುವ ಯತ್ನವಾಗಿದೆ ಎಂದು SDPI ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ ಅಶ್ರಫ್ ಅಡ್ಡೂರುರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದೇಶದಲ್ಲಿ ಉದ್ಯೋಗ, ವ್ಯಾಪಾರ, ಶಿಕ್ಷಣ ಸೇರಿದಂತೆ ವಿವಿಧ ಕಾರಣಗಳಿಂದ ನೆಲೆಸಿರುವ ಮತದಾರರು ಕೇವಲ ವಿಚಾರಣೆಗೆ ಹಾಜರಾಗಲು ಭಾರತಕ್ಕೆ ಆಗಮಿಸುವುದು ಪ್ರಾಯೋಗಿಕವಾಗಿ ಕಷ್ಟಕರವಾಗಿದ್ದು, ಇದು ಅರ್ಹ ಮತದಾರರ ಮತದಾನದ ಹಕ್ಕಿನ ಮೇಲೆಯೇ…

Read More

ಮಂಜೇಶ್ವರ: ಜನಪ್ರತಿನಿಧಿಗಳ ತರ್ಕಕ್ಕೆ ಬಲಿಯಾಯಿತೇ ಚೌಕಿ ರಸ್ತೆ? 15 ವರ್ಷಗಳಿಂದ ದುರಸ್ತಿಯಾಗದ ರಸ್ತೆಗೆ ಮುಕ್ತಿ ಯಾವಾಗ?

​ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತಿನ 8 ಹಾಗೂ 9ನೇ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಬರುವ ಚೌಕಿ ಪ್ರದೇಶದ ಸುಮಾರು 400 ಮೀಟರ್ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ಸಂಕಷ್ಟ ತಂದೊಡ್ಡಿದೆ. ​ಈ ರಸ್ತೆಯ ದುರಸ್ಥಿ ಕಾಣದಿರಲು ಎರಡೂ ವಾರ್ಡ್‌ಗಳ ಜನಪ್ರತಿನಿಧಿಗಳ ಉದಾಸೀನತೆಯೇ ಪ್ರಮುಖ ಕಾರಣ ಎಂಬ ಆರೋಪ ಕೇಳಿಬಂದಿದೆ. “ನಮ್ಮ ವಾರ್ಡ್‌ಗೆ ಸೇರುವುದಿಲ್ಲ, ಅವರ ವಾರ್ಡ್‌ಗೆ ಸೇರಿದ್ದು” ಎಂಬ ನೆಪ ಹೇಳಿಕೊಂಡು ಜಾರಿಕೊಳ್ಳುತ್ತಿರುವುದರಿಂದ ಕಳೆದ 15 ವರ್ಷಗಳಿಂದ ಈ ರಸ್ತೆಗೆ ಕಾಯಕಲ್ಪ ಸಿಕ್ಕಿಲ್ಲ. ಸುತ್ತಮುತ್ತಲಿನ ಸಂಪರ್ಕ…

Read More

ಪಿಲಿಕುಳದ ಸೌತ್ ಭವನದಲ್ಲಿ ಮೊಳಗಿದ ‘ಹರೇ ಕೃಷ್ಣ’ ನಾಮಜಪ

ಮಂಗಳೂರು: ಶ್ರೀಲ ಪ್ರಭುಪಾದರ ಇಸ್ಕಾನ್ ಗೋವರ್ಧನ ಹಿಲ್ಸ್ ಮಂಗಳೂರು, ಶ್ರೀ ಶ್ರೀ ಕೃಷ್ಣ ಬಲರಾಮ ಮಂದಿರ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಆಯೋಜಿಸಿರುವ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ ಪಿಲಿಕುಳದ ಸೌತ್ ಭವನದಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ. ಇಂದು ಮತ್ತು ನಾಳೆ ನಡೆಯಲಿರುವ ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹೋತ್ಸವದಲ್ಲಿ ಸಹಸ್ರಾರು ಭಕ್ತರು ಭಾಗವಹಿಸಿ ‘ಹರೇ ಕೃಷ್ಣ, ಹರೇ ಕೃಷ್ಣ’ ನಾಮಜಪದಲ್ಲಿ ತೊಡಗಿದ್ದಾರೆ. ಮಹೋತ್ಸವದಲ್ಲಿ ಶ್ರೀ ಶ್ರೀ ಕೃಷ್ಣ ಬಲರಾಮರ ಮಂಗಳಾರತಿ, ಶೃಂಗಾರಾರತಿ, ಪುಷ್ಪಾಂಜಲಿ ಸೇವೆ, ತೊಟ್ಟಿಲು…

Read More
error: Content is protected !!